ಕುಂಬಳೆ | ವಿವಾಹ ನಿಶ್ವಯವಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು: ಮನನೊಂದ ಯುವತಿ ಆತ್ಮಹತ್ಯೆ

ಕಾಸರಗೋಡು: ವಿವಾಹ ನಿಶ್ವಯವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಸಮೀಪದ ಕುಂಟಗೇರಡ್ಕ ಎಂಬಲ್ಲಿ ನಡೆದಿದೆ.
ಕುಂಟಗೇರಡ್ಕದ ಜನಾರ್ದನ ಎಂಬವರ ಪುತ್ರಿ ಪ್ರಫುಲ್ಲಾ(26) ಮೃತಪಟ್ಟವರು.
ತಮಿಳುನಾಡು ಮೂಲದ ಮಣಿ ಎಂಬ ಯುವಕನ ಜೊತೆ ನಾಲ್ಕು ತಿಂಗಳ ಹಿಂದೆ ಪ್ರಫುಲ್ಲಾರಿಗೆ ವಿವಾಹ ನಿಶ್ಚಯವಾಗಿತ್ತು. ತಿಂಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಣಿ, ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಇದಾದ ಬಳಿಕ ಪ್ರಫುಲ್ಲಾ ಮಾನಸಿಕವಾಗಿ ಕುಗ್ಗಿದ್ದರು.
ಮೇ 10ರಂದು ಮನೆಮಂದಿ ವಿವಾಹ ಕಾರ್ಯಕ್ರಮಕ್ಕೆ ತೆರಳಿದ್ದು, ಮನೆಗೆ ಮರಳಿದಾಗ ಪ್ರಫುಲ್ಲಾ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಫುಲ್ಲಾ ಡೆತ್ ನೋಟ್ ಬರೆದಿಟ್ಟಿದ್ದು, ಮಣಿಯವರ ಅಂತ್ಯಕ್ರಿಯೆ ನಡೆಸಿದ ಸ್ಥಳದಲ್ಲೇ ತನ್ನ ಅಂತ್ಯ ಕ್ರಿಯೆ ನಡೆಸುವಂತೆ ಬರೆದಿದ್ದಾರೆನ್ನಲಾಗಿದೆ.
ತಮಿಳುನಾಡು ನಿವಾಸಿಯಾಗಿದ್ದ ಮಣಿ ಬ್ಯಾಂಕ್ ನೌಕರರಾಗಿದ್ದರು. ನವಂಬರ್ ಬಳಿಕ ಇವರ ವಿವಾಹ ನಡೆಸುವ ಬಗ್ಗೆ ಕುಟುಂಬಸ್ಥರು ತೀರ್ಮಾನಿಸಿದ್ದರು ಎಂದು ತಿಳಿದುಬಂದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






