ಮಂಜೇಶ್ವರ: ಕಾರು ಢಿಕ್ಕಿಯಾಗಿ ಪಾದಚಾರಿ ಮೃತ್ಯು

ಕಾಸರಗೋಡು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ವಾಮಂಜೂರು ಕಜೆ ನಿವಾಸಿ ಮುಹಮ್ಮದ್ ಸಾದಿಕ್(40) ಮೃತಪಟ್ಟವರು.
ಸೋಮವಾರ ರಾತ್ರಿ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡಿದ್ದ ಸಾದಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story