Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು ಕನ್ನಡತನವೇ ಮೇಳೈಸಿರುವ ಸಪ್ತ...

ಕಾಸರಗೋಡು ಕನ್ನಡತನವೇ ಮೇಳೈಸಿರುವ ಸಪ್ತ ಭಾಷಾ ಸಂಗಮದ ಕನ್ನಡದ ಬೀಡು: ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ19 Nov 2023 2:48 PM IST
share
ಕಾಸರಗೋಡು ಕನ್ನಡತನವೇ ಮೇಳೈಸಿರುವ ಸಪ್ತ ಭಾಷಾ ಸಂಗಮದ ಕನ್ನಡದ ಬೀಡು: ಕೆ.ವಿ.ಪ್ರಭಾಕರ್

ಕಾಸರಗೋಡು ನ.19: ಕಾಸರಗೋಡು ಸಪ್ತಭಾಷಾ ಸಂಗಮದ ಕನ್ನಡದ ಬೀಡಾಗಿದೆ. ನಿತ್ಯ ಕನ್ನಡತನವೇ ಮೇಳೈಸಿರುವ, ಕನ್ನಡತನವನ್ನೇ ಆಚರಿಸುತ್ತಿರುವ ಕನ್ನಡದ ಬೀಡು ಎಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಹಮ್ಮಿಕೊಂಡಿದ್ದ ಗಡಿನಾಡ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿದ ಬಳಿಕ ನಾನಾ ಕ್ಷೇತ್ರಗಳ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.

ಕಾಸರಗೋಡು ಗಡಿ ನಾಡು ಆಗಿದ್ದರೂ ಇಲ್ಲಿ ಕನ್ನಡದ ಮನಸ್ಸುಗಳು ಕನ್ನಡತನದ ವಾತಾವರಣವನ್ನು ನಿತ್ಯ ಆಚರಣೆಯಲ್ಲಿ ಇಟ್ಟಿವೆ. ಇವರೆಲ್ಲರೂ ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಂಕಣಿ ಮನೆಮಾತಾಗಿದ್ದ ಮಂಜೇಶ್ವರದ ಗೋವಿಂದ ಪೈ ಕನ್ನಡದ ಮೊದಲ ರಾಷ್ಟ್ರಕವಿ. 'ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ' ಎಂದು ತಮ್ಮ ಕವನದ ಮೂಲಕ ಇಲ್ಲಿನ ಕನ್ನಡ ಸಮುದಾಯವನ್ನು ಎಚ್ಚರಿಸಿದ ಶತಾಯುಷಿ ಕಯ್ಯಾರ ಕಿಞಣ್ಣ ರೈಯವರ ಮನೆ ಮಾತು ತುಳು. ಇವರು ಕೊನೆಯ ಉಸಿರಿನವರೆಗೂ ನಾನು ಸಾಯುವುದು 'ಕರ್ನಾಟಕದಲ್ಲಿ ಕಾಸರಗೋಡು ವಿಲೀನವಾದ ನಂತರ' ಎನ್ನುತ್ತಲೇ ಇದ್ದರು.

ಕಾಸರಗೋಡಿನ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ರತ್ನಾಕರ ಬಳ್ಳಮೂಲೆ ಅವರ ಮನೆ ಮಾತು ಮಲಯಾಳ. ಯಕ್ಷಗಾನದ ಪಿತಾಮಹ ಪಾರ್ತಿಸುಬ್ಬ ಕೂಡ ಇಲ್ಲಿಯವರು. ಹೀಗೆ ಬೇರೆ ಬೇರೆ ಭಾಷೆಗಳ ಮನೆಮಾತಾದವರೆಲ್ಲ ಇಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಬದುಕನ್ನು ರೂಪಿಸಿದ್ದಾರೆ ಎಂದು ಕಾಸರಗೋಡಿನ ಕನ್ನಡ ಸಾಂಸ್ಕೃತಿಕ ಚರಿತ್ರೆಯನ್ನು ಸ್ಮರಿಸಿಕೊಂಡರು.

ಕಾಸರಗೋಡು ಕನ್ನಡದ ಬೀಡು, ಇಲ್ಲಿರುವುದು ಕನ್ನಡದ ನೆಲೆ’ಎನ್ನುವುದು ಇಲ್ಲಿನ ಕನ್ನಡದ ವಾತಾವರಣ ನೋಡಿ ಮನದಟ್ಟಾಗಿದೆ. ಬೆಂಗಳೂರು ಕೇಂದ್ರಿತ ಕನ್ನಡ ಹೋರಾಟಗಾರರ ಅಭಿಪ್ರಾಯ ಭಿನ್ನವಾಗಿರಬಹುದು. ಆದರೆ ನಾನು ಇಲ್ಲಿಗೆ ಬರುವಾಗ ದಾರಿಯುದ್ದಕ್ಕೂ ಕನ್ನಡದ ಫಲಕ ಮತ್ತು ಬ್ಯಾನರ್ ಗಳನ್ನು ನೋಡಿಕೊಂಡೇ ಬಂದೆ. ಇಲ್ಲಿನ ಕನ್ನಡದ ವಾತಾವರಣ ಗಟ್ಟಿಯಾಗಿದೆ ಎಂದರು.

ಈಗ ಈ ನಾಡನ್ನು ಸಪ್ತಭಾಷಾ ಸಂಗಮ ಭೂಮಿ ಎಂದು ಕರೆಯುವ ಮೂಲಕ ಕೇರಳ ಸರಕಾರ ಹಂತಹಂತವಾಗಿ ಕನ್ನಡ ನುಡಿ, ಸಂಸ್ಕೃತಿಗೆ ಮಾರಕ ಆಗುತ್ತಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಇದು ಸಪ್ತ ಭಾಷಾ ಸಂಗಮದ ನಾಡು ಎನ್ನುವುದು ನಿಜವೇ. ಆದರೆ, ಇದು ಸಪ್ತ ಭಾಷಾ ಸಂಗಮದ ಕನ್ನಡದ ಬೀಡು" ಎನ್ನುವುದು ಇಲ್ಲಿನ ಕನ್ನಡದ ವಾತಾವರಣ ಋಜು ಮಾಡುತ್ತಿದೆ ಎಂದರು.

ಭಾಷಾ ಅಲ್ಪಸಂಖ್ಯಾತ ಪ್ರದೇಶವೆಂದು ಗುರುತಿಸಲಾದ ಕಾಸರಗೋಡು ಪ್ರದೇಶದಲ್ಲಿ ಕನ್ನಡ ಕಲೆ, ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೂ ಸಾಕಷ್ಟು ಆಸಕ್ತಿ ವಹಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳಾಗಿದ್ದ ಎಸ್.ಜಿ.ಸಿದ್ದರಾಮಯ್ಯ ಮತ್ತು ಎಲ್.ಹನುಮಂತಯ್ಯ ನಿರಂತರವಾಗಿ ನಾನಾ ಕಾರ್ಯಕ್ರಮಗಳನ್ನು ಇಲ್ಲಿ ಹಮ್ಮಿಕೊಂಡಿದ್ದರು. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾಗಿದ್ದಾಗಿನಿಂದಲೂ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಡಿನಾಡ ಕನ್ನಡಿಗರ ಹಿತ ಕಾಪಾಡಲು ನಿರಂತರ ಶ್ರಮಿಸಿದ್ದಾರೆ ಎಂದರು.

ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ, ನಾಡಿಗೆ ಸೇವೆ ಸಲ್ಲಿಸಿದ ಹಲವರಿಗೆ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಇದೇ ಸಂದರ್ಭದಲ್ಲಿ ನೀಡಿ ಸನ್ಮಾನಿಸಲಾಯಿತು.

ಒಡೆಯೂರು ಸಂಸ್ಥಾನದ ಮಾತೆ ಅಮೃತಾನಂದಮಯಿ ಅವರು ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸದ ರಮೇಶ್ ಜಿಗಜಿಣಗಿ ಸೇರಿ ಅಕಾಡಮಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X