Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕುವೈತ್ ನಲ್ಲಿ ಬೆಂಕಿ ದುರಂತ: ಇಬ್ಬರ...

ಕುವೈತ್ ನಲ್ಲಿ ಬೆಂಕಿ ದುರಂತ: ಇಬ್ಬರ ಮೃತದೇಹ ಕಾಸರಗೋಡಿಗೆ; ಜನಪ್ರತಿನಿಧಿಗಳು, ಅಧಿಕಾರಿಗಳು ಅಂತಿಮ ನಮನ

ವಾರ್ತಾಭಾರತಿವಾರ್ತಾಭಾರತಿ14 Jun 2024 11:28 PM IST
share
ಕುವೈತ್ ನಲ್ಲಿ ಬೆಂಕಿ ದುರಂತ: ಇಬ್ಬರ ಮೃತದೇಹ ಕಾಸರಗೋಡಿಗೆ; ಜನಪ್ರತಿನಿಧಿಗಳು, ಅಧಿಕಾರಿಗಳು ಅಂತಿಮ ನಮನ

ಕಾಸರಗೋಡು: ಕುವೈತ್ ನಲ್ಲಿ ಬೆಂಕಿ ದುರಂತದಲ್ಲಿ ಮೃತಪಟ್ಟ ಕಾಸರಗೋಡು ಚೆರ್ಕಳ ಕುಂಡಡ್ಕದ ಕೆ. ರಂಜಿತ್ (34) ಹಾಗೂ ತ್ರಿಕ್ಕರಿಪುರ ಇಳಂಬಚ್ಚಿಯ ಕುಂಞ ಕೇಳು (55) ರವರ ಮೃತದೇಹಗಳನ್ನು ಶುಕ್ರವಾರ ರಾತ್ರಿ ಊರಿಗೆ ತಲಪಿಸಲಾಯಿತು. ಕೊಚ್ಚಿಯಿಂದ ಅಂಬ್ಯುಲೆನ್ಸ್ ಮೂಲಕ ಮೃತದೇಹಗಳನ್ನು ತರಲಾಯಿತು.

ರಂಜಿತ್ ರವರ ಮೃತದೇಹ ರಾತ್ರಿ 9 ಗಂಟೆ ಸುಮಾರಿಗೆ ಚೆರ್ಕಳ ಕುಂಡಡ್ಕದ ಮನೆಗೆ ತಲಪಿಸಲಾಯಿತು. ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಶಾಸಕರಾದ ಎನ್ . ಎ ನೆಲ್ಲಿಕುನ್ನು , ಸಿ . ಎಚ್ ಕುಂ ಞ೦ಬು , ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಖದರ್ ಬದರಿಯಾ ಹಾಗೂ ಜನಪ್ರತಿನಿಧಿಗಳು , ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು .

ಕುಂಞ ಕೇಳು ರವರ ಮೃತದೇಹವನ್ನು 8.15 ರ ಸುಮಾರಿಗೆ ತೃ ಕ್ಕರಿಪುರದ ಮನೆಗೆ ತಲಪಿಸಿದ್ದು , ಶಾಸಕ ಎಂ . ರಾಜಗೋಪಾಲನ್, ಉಪ ಜಿಲ್ಲಾಧಿಕಾರಿ ಸೂಫಿಯಾನ್ ಅಹಮ್ಮದ್ , ಹೊಸದುರ್ಗ ತಹಶೀಲ್ದಾರ್ ಎಂ . ಮಾಯಾ ಹಾಗೂ ಇನ್ನಿತರ ನಾಯಕರು , ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು. ಅಂತಿಮ ದರ್ಶನಕ್ಕೆ ಆಪಾರ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.

ತೃಕ್ಕರಿಪುರ ಇಳಂಬಚ್ಚಿಯ ಕುಂಞ ಕೇಳು ರವರ ಮನೆಗೆ ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಕೇಳುವರವರ ಪತ್ನಿ ಮಣಿ , ಮಕ್ಕಳಾದ ಋಷಿಕೇಶ್ , ದೇವ್ ಕಿರಣ್ ಜೊತೆ ಜಿಲ್ಲಾಧಿಕಾರಿ ಮಾತನಾಡಿದರು. ಬೆಂಕಿ ದುರಂತದ ಸಂದರ್ಭದಲ್ಲಿ ಕಟ್ಟದಿಂದ ಹಾರಿ ಗಾಯಗೊಳೊಂದಿಗೆ ಪಾರಾದ ತೃಕ್ಕರಿಪುರದ ನಳಿನಾಕ್ಷ ರವರ ಮನೆಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಮಾಹಿತಿ ಪಡೆದರು

ಮೃತದೇಹಗಳನ್ನು ಶುಕ್ರವಾರ ಬೆಳಿಗ್ಗೆ 10.30ರ ಸುಮಾರಿಗೆ ಕೊಚ್ಚಿಯ ನೆಡುಂಬಾಶ್ಯೇರಿ ವಿಮಾನ ನಿಲ್ದಾಣದಕ್ಕೆ ವಿಶೇಷ ವಿಮಾನದಲ್ಲಿ ತಲಪಿಸಲಾಯಿತು.

ಕೇರಳೀಯರ 24 ಸೇರಿದಂತೆ 46 ಮಂದಿಯ ಮೃತದೇಹಗಳನ್ನು ಒಂದೇ ವಿಮಾನದಲ್ಲಿ ತರಲಾಯಿತು,. ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಹಾಗೂ ಇತರ ಅಧಿಕಾರಿಗಳು ಜೊತೆಗಿದ್ದರು. ವಿಮಾನ ನಿಲ್ದಾಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ , ಪ್ರತಿಪಕ್ಷ ನಾಯಕ ವಿ . ಡಿ ಸತೀಶನ್ , ರಾಜ್ಯದ ಸಚಿವರು ಹಾಗೂ ಸಂಸದರು ಅಂತಿಮ ನಮನ ಸಲ್ಲಿಸಿದರು. ಕೇರಳದ 24 ಮತ್ತು ತಮಿಳುನಾಡಿನ 7 ಮೃತದೇಹಗಳನ್ನು ವಿಶೇಷ ಅಂಬ್ಯಲೆನ್ಸ್ ಮೂಲಕ ಕೊಂಡೊಯ್ಯಲಾಯಿತು . ಕರ್ನಾಟಕದ ಓರ್ವ ಸೇರಿದಂತೆ ಉಳಿದ ರಾಜ್ಯಗಳ ಮೃತದೇಹಗಳನ್ನು ವಿಮಾನ ಮೂಲಕ ದೆಹಲಿಗೆ ಕೊಂಡೊಯ್ಯಲಾಯಿತು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X