Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಪ್ರೊ.ಎ.ಶ್ರೀನಾಥ್ ರಿಗೆ "ಕಯ್ಯಾರ"...

ಪ್ರೊ.ಎ.ಶ್ರೀನಾಥ್ ರಿಗೆ "ಕಯ್ಯಾರ" ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ13 Jun 2025 10:53 PM IST
share
ಪ್ರೊ.ಎ.ಶ್ರೀನಾಥ್ ರಿಗೆ ಕಯ್ಯಾರ ಪ್ರಶಸ್ತಿ

ಕಾಸರಗೋಡು: ಕಾಸರಗೋಡು ಸರಕಾರಿ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ, ಜಾನಪದ ವಿದ್ವಾಂಸ, ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ.ಎ.ಶ್ರೀನಾಥ್ ಕಾಸರಗೋಡು "ಕಯ್ಯಾರ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಗಡಿ ನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಕಲ್ಕೂರ ಪ್ರತಿಷ್ಠಾನ ಮಂಗಳೂರು, ಗ್ರೀನ್ ಸ್ಟಾರ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಕಯ್ಯಾರ್, 16ನೇ ವಾರ್ಡ್ ಕಯ್ಯಾರ್ ಕುಟುಂಬ ಶ್ರೀ ಘಟಕಗಳ ಸಹಯೋಗದಲ್ಲಿ ಕಯ್ಯಾರ್ ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಜೂ.18ರಂದು ಬೆಳಗ್ಗೆ 9ರಿಂದ ನಡೆಯುವ ನಾಡೋಜ ಡಾ.ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು.

ಕನ್ನಡ ಎಂ.ಎ.ಪದವೀಧರ, ಚಿಂತಕ, ವಾಗ್ನಿ, ಸಂಘಟಕ, ಸಮಾಜ ಸೇವಕರೂ ಆದ ಶ್ರೀನಾಥ್, ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಳವಾದ ಜ್ಞಾನವುಳ್ಳ ಕಾಸರಗೋಡಿನ ಸಾಹಿತ್ಯಿಕ, ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಯಲ್ಲಿ ಹೆಸರು ಪಡೆದಿದ್ದಾರೆ. ಮೂರು ದಶಕಗಳ ಕಾಲ ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಎನ್ನೆಸ್ಸೆಸ್ ಯೋಜನೆಯ ಶಿಬಿರ ನಿರ್ದೇಶಕರಾಗಿ, ಯೋಜನಾಧಿಕಾರಿಯಾಗಿ 15 ವರ್ಷಗಳ ಸಮರ್ಥವಾಗಿ ಮುನ್ನಡೆಸಿ, ಎನ್ನೆಸ್ಸೆಸ್ ಘಟಕಕ್ಕೆ ಭದ್ರ ಅಡಿಪಾಯ ಒದಗಿಸಿದ ಶ್ರೀನಾಥ್ ಅವರಿಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಒಲಿದಿದೆ. ಸರಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸುತ್ಯರ್ಹ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ಕೇರಳ ಸರಕಾರದ ಸಂಪೂರ್ಣ ಸಾಕ್ಷರತಾ ಯೋಜನೆಯ ಯೋಜನಾಧಿಕಾರಿಯಾಗಿ, ಕೇರಳ ರಾಜ್ಯದ ಪಠ್ಯಪುಸ್ತಕ ಸಮಿತಿಯ ಸಂಯೋಜಕ, ಸದಸ್ಯರಾಗಿ, ಕಣ್ಣೂರು ವಿವಿ ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರಾಗಿ, ತುಳು ನಿಘಂಟು ರಚನಾ ಸಮಿತಿಯ ಸಹಾಯಕ ಸಂಯೋಜಕ, ಬಹುಭಾಷ ನಿಘಂಟು ರಚನೆಯಲ್ಲಿ ಉಪಸಂಪಾದಕರಾಗಿ, ಕೇರಳ ತುಳು ಅಕಾಡೆಮಿ ಸದಸ್ಯ, ಏಡ್ಸ್ ಜನಜಾಗೃತಿ ಯೋಜನೆಯ ನಿಧಿಜ್ಞ, ನೆಹರೂ ಯುವಕೇಂದ್ರ ಸಲಹಾ ಸಮಿತಿ ಸದಸ್ಯರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ.

ಅನೇಕ ವೈಚಾರಿಕ, ಸಂಶೋಧನಾತ್ಮಕ ಲೇಖನಗಳನ್ನು ಬರೆದಿರುವ ಅವರು ನೂರಾರು ಕೃತಿಗಳಿಗೆ ಮುನ್ನುಡಿ, ಬೆನ್ನುಡಿ ಬರೆದಿದ್ದಾರೆ. ಸ್ಮರಣ ಸಂಚಿಕೆಗಳ ಸಂಪಾದಕರಾಗಿ ಸೇವೆಗೈದಿದ್ದಾರೆ. ಕವಿಗೋಷ್ಠಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಿದ್ದಲ್ಲದೆ, ಸಾಹಿತ್ಯಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಿದ್ದಾರೆ. 2010ರಲ್ಲಿ ಅವರ ಅಭಿಮಾನಿಗಳು "ಶ್ರೀನಿಧಿ" ಎಂಬ ಅಭಿನಂದನೆ ಗ್ರಂಥ ಸಮರ್ಪಿಸಿದ್ದಾರೆ. ನೂರಾರು ಕಡೆ ಸನ್ಮಾನ, ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X