Perla | ಕಾರು-ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಮೃತ್ಯು, ಪತ್ನಿ ಗಂಭೀರ

ಕಾಸರಗೋಡು: ಸೀತಾಂಗೋಳಿ- ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಎಂಬಲ್ಲಿ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಊಞಂಪದವು ನಿವಾಸಿ ಎಂ.ಟಿ.ಮುಹಮ್ಮದ್ ಅಶ್ರಫ್ (48) ಮೃತಪಟ್ಟವರು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಚಲಾಯಿಸುತ್ತಿದ್ದ ಬೈಕ್ ಮತ್ತು ವಿರುದ್ಧ ದಿಕ್ಕಿನಿಂದ ಬಂದ ಕಾರು ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅಶ್ರಫ್ ರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.
Next Story




