Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಸಿರಿಬಾಗಿಲು | ಯಕ್ಷಗಾನ ಪ್ರಸಂಗಗಳಿಗೂ...

ಸಿರಿಬಾಗಿಲು | ಯಕ್ಷಗಾನ ಪ್ರಸಂಗಗಳಿಗೂ ಮಹಾಕಾವ್ಯದ ಯೋಗ್ಯತೆ ಇದೆ: ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್

ವಾರ್ತಾಭಾರತಿವಾರ್ತಾಭಾರತಿ18 July 2026 2:44 PM IST
share
ಸಿರಿಬಾಗಿಲು | ಯಕ್ಷಗಾನ ಪ್ರಸಂಗಗಳಿಗೂ ಮಹಾಕಾವ್ಯದ ಯೋಗ್ಯತೆ ಇದೆ: ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್
‘ವೀರ ತಪಸ್ವಿ ಪರಶುರಾಮ’ ಯಕ್ಷಗಾನ ಕೃತಿ ಲೋಕಾರ್ಪಣೆ; ಪ್ರಸಂಗ ರಚನೆ ಕಮ್ಮಟಕ್ಕೆ ಉತ್ತಮ ಸ್ಪಂದನೆ

ಸಿರಿಬಾಗಿಲು (ಕಾಸರಗೋಡು) : ನಮ್ಮ ನಡುವಿನ ಅನೇಕ ಯಕ್ಷಗಾನ ಪ್ರಸಂಗಗಳು ಮಹಾಕಾವ್ಯದ ಎಲ್ಲ ಲಕ್ಷಣಗಳನ್ನು ಹೊಂದಿದ್ದು, ಅವುಗಳನ್ನು ಮಹಾಕಾವ್ಯಗಳೆಂದು ಗುರುತಿಸುವ ಔದಾರ್ಯತೆ ವಿಮರ್ಶಾ ವಲಯದಲ್ಲಿ ಇನ್ನೂ ಮೂಡಿಬಂದಿಲ್ಲ ಎಂದು ಹಿರಿಯ ಪ್ರಸಂಗಕರ್ತ ಹಾಗೂ ಸಂಶೋಧಕ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಅಭಿಪ್ರಾಯಪಟ್ಟರು.

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಶ್ರೀ ಕೇಶವಾನಂದ ಭಾರತೀ ಸ್ಮೃತಿ ಮಂದಿರದಲ್ಲಿ ಭಾನುವಾರ ನಡೆದ ಯಕ್ಷಗಾನ ಪ್ರಸಂಗ ರಚನೆ ಕಮ್ಮಟ ಹಾಗೂ ಹಿರಿಯ ಪ್ರಸಂಗಕರ್ತ ಶೇಡಿಗುಮ್ಮೆ ವಾಸುದೇವ ಭಟ್ ರಚಿಸಿರುವ ‘ವೀರ ತಪಸ್ವಿ ಪರಶುರಾಮ’ ಯಕ್ಷಗಾನ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಾರ್ತಿಸುಬ್ಬನ ಪ್ರಸಂಗಗಳು ಕಾವ್ಯ ಸೌಂದರ್ಯದಿಂದ ಕೂಡಿದ್ದರೂ ಅವುಗಳನ್ನು ಮಹಾಕಾವ್ಯವೆಂದು ಪರಿಗಣಿಸಲು ಹಿಂದೇಟು ಹಾಕಲಾಗುತ್ತಿದೆ. ಯಕ್ಷಗಾನ ಕಾವ್ಯದ ಸೌಂದರ್ಯ, ಹಿರಿಮೆ ಮತ್ತು ಸಾಹಿತ್ಯ ಮೌಲ್ಯಗಳನ್ನು ಸಮರ್ಪಕವಾಗಿ ಪರಿಚಯಿಸುವ ಕೆಲಸ ನಡೆಯುತ್ತಿಲ್ಲ. ರಂಗಸ್ಥಳದಲ್ಲಿ ಮಾತ್ರವಲ್ಲ, ಯಕ್ಷಗಾನ ಕಾವ್ಯವನ್ನು ಓದುವ ಮೂಲಕವೂ ಹೊಸ ಅನುಭವ ಹಾಗೂ ರಸಾಸ್ವಾದ ದೊರೆಯುತ್ತದೆ ಎಂದು ಹೇಳಿದರು.

ಬೃಹತ್ ಗಾತ್ರದ ಕೃತಿಗಳೆಲ್ಲ ಮಹಾಕಾವ್ಯಗಳಾಗುವುದಿಲ್ಲ. ಅವುಗಳಲ್ಲಿ ಕಾವ್ಯ ಸೌಂದರ್ಯ ಇರಬೇಕು. ಶೇಡಿಗುಮ್ಮೆ ವಾಸುದೇವ ಭಟ್ ಅವರ ‘ವೀರ ತಪಸ್ವಿ ಪರಶುರಾಮ’ ಕೃತಿ ಶಬ್ದ ಮತ್ತು ಅರ್ಥಗಳ ಸಮನ್ವಯ ಹೊಂದಿದ ಶ್ರೇಷ್ಠ ಕಾವ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪ್ರಸಂಗಕರ್ತ ಶ್ರೀಧರ ಡಿ.ಎಸ್. ಮಾತನಾಡಿ, ಶೇಡಿಗುಮ್ಮೆ ವಾಸುದೇವ ಭಟ್ ಅವರ ಯಕ್ಷಗಾನ ಕ್ಷೇತ್ರದ ಸೇವೆ ಅಮೂಲ್ಯವಾಗಿದೆ. ಅವರ ಸಾಧನೆಯನ್ನು ಯಕ್ಷಗಾನ ಅಕಾಡೆಮಿ ಗುರುತಿಸಿ, ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಆಗ್ರಹಿಸಿದರು.

ಶ್ರೀ ಧರ್ಮಸ್ಥಳ ಮೇಳದ ಪ್ರಬಂಧಕ ಗಿರೀಶ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಉಮೇಶ್ ಶಿರೂರು ಕೃತಿ ಪರಿಚಯಿಸಿ ಸ್ವಾಗತಿಸಿದರು. ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ವಂದಿಸಿದರು. ಯೋಗೀಶ್ ರಾವ್ ಚಿಗುರುಪಾದೆ ಕಾರ್ಯಕ್ರಮ ನಿರೂಪಿಸಿದರೆ, ಚಂದ್ರಹಾಸ ಕಯ್ಯಾರ್ ಪ್ರಾರ್ಥಿಸಿದರು.

ಬಳಿಕ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಅವರ ಮಾರ್ಗದರ್ಶನದಲ್ಲಿ ದಿನಪೂರ್ತಿ ನಡೆದ ಯಕ್ಷಗಾನ ಪ್ರಸಂಗ ರಚನೆ ಕಮ್ಮಟದಲ್ಲಿ ದಿವಾಣ ದುರ್ಗಾಪ್ರಸಾದ್ ಭಟ್ ಕಟೀಲು, ಚಂದ್ರಹಾಸ ಕಯ್ಯಾರ್, ಅಮೋಘ ಶಂಕರ ಉಜಿರೆ, ರಾಜಗೋಪಾಲ್ ಕನ್ಯಾನ, ಉಮೇಶ್ ಶಿರೂರು, ಯೋಗೀಶ್ ರಾವ್ ಚಿಗುರುಪಾದೆ, ದೀವಿತ್ ಪೆರಾಡಿ, ಶುಭಾಶಯ, ಮಯೂರ ನಾಯ್ಗ, ಗಿರೀಶ್ ಹೆಗ್ಡೆ ಹಾಗೂ ವರ್ಧನ್ ಎಂ. ಸುರತ್ಕಲ್ ಸೇರಿದಂತೆ ಹಲವರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು.




Tags

YakshaganaSiribagilu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X