Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಎಸ್ಸೆಸ್ಸೆಫ್ ಉಪ್ಪಳ ಡಿವಿಷನ್...

ಎಸ್ಸೆಸ್ಸೆಫ್ ಉಪ್ಪಳ ಡಿವಿಷನ್ ಸಾಹಿತ್ಯೋತ್ಸವ : ಉಪ್ಪಳ ಸೆಕ್ಟರ್ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ1 Jun 2026 1:07 PM IST
share
ಎಸ್ಸೆಸ್ಸೆಫ್ ಉಪ್ಪಳ ಡಿವಿಷನ್ ಸಾಹಿತ್ಯೋತ್ಸವ : ಉಪ್ಪಳ ಸೆಕ್ಟರ್ ಪ್ರಥಮ

ಉಪ್ಪಳ, ಜೂನ್ 1: ಎಸ್‌ಎಸ್‌ಎಫ್ ಉಪ್ಪಳ ಡಿವಿಷನ್ ವತಿಯಿಂದ ಎರಡು ದಿನಗಳ ಸಾಹಿತ್ಯೋತ್ಸವವು ಮೇ 30 ಮತ್ತು 31ರಂದು ಅಟ್ಟೆಗೋಳಿಯಲ್ಲಿ ಅದ್ಧೂರಿಯಾಗಿ ನಡೆಯಿತು.

ಸಾಹಿತ್ಯ, ಕಲೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಮೂಲಕ ಯುವ ಪ್ರತಿಭೆಗಳಿಗೆ ವೇದಿಕೆಯಾಗಿದ್ದ ಈ ಉತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದರು.

ಮೇ 30ರಂದು ನಡೆದ “ಸಾಹಿತ್ಯ ಸಂಗಮ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತ್ಯೋತ್ಸವದ ಚೇರ್ಮನ್ ಮುಬೀನ್ ಹಿಮಮಿ ವಹಿಸಿದರು. ಸಾಹಿತ್ಯೋತ್ಸವದ ಕನ್ವೀನರ್ ಖಲೀಲ್ ಹಿಮಮಿ ಸ್ವಾಗತ ಭಾಷಣ ಮಾಡಿದರು. ಖ್ಯಾತ ಶಿಕ್ಷಕ ಹಾಗೂ ಸಾಹಿತಿ ಉಷಾಜ್ ತತ್ತಾಡನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಎಸ್‌ಎಫ್ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾದುಷ ಹಾದಿ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಎಸ್‌ಎಸ್‌ಎಫ್ ಉಪ್ಪಳ ಡಿವಿಷನ್‌ನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ವಂದಿಸಿದರು.

ಉದ್ಘಾಟನಾ ಸಮಾರಂಭದ ಬಳಿಕ ಒಟ್ಟು 10 ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ತೀವ್ರ ಪೈಪೋಟಿಯ ನಡುವೆ ಉಪ್ಪಳ ಸೆಕ್ಟರ್ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ಬಂದಿಯೋಡ್ ಸೆಕ್ಟರ್ ದ್ವಿತೀಯ ಹಾಗೂ ಚೇವಾರ್ ಸೆಕ್ಟರ್ ತೃತೀಯ ಸ್ಥಾನ ಗಳಿಸಿತು. ಪೈವಳಿಕೆ ಮತ್ತು ಬಾಯಾರ್ ಸೆಕ್ಟರ್‌ಗಳು ಕ್ರಮವಾಗಿ ನಾಲ್ಕನೇ ಮತ್ತು ಐದನೇ ಸ್ಥಾನಗಳನ್ನು ಪಡೆದವು.

ವೈಯಕ್ತಿಕ ಪ್ರಶಸ್ತಿಗಳಲ್ಲಿ “ವಾಯ್ಸ್ ಆಫ್ ದ ಫೆಸ್ಟ್” ಗೌರವವನ್ನು ಪೈವಳಿಕೆಯ ಮಿಸ್‌ಹಬ್ ಪಡೆದರೆ, “ಪೆನ್ ಆಫ್ ದ ಫೆಸ್ಟ್” ಪ್ರಶಸ್ತಿಯನ್ನು ಉಪ್ಪಳದ ರಹೀಮ್ ತಮ್ಮದಾಗಿಸಿಕೊಂಡರು.

ಮೇ 31ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಎಸ್‌ಎಸ್‌ಎಫ್ ಉಪ್ಪಳದ ಅಧ್ಯಕ್ಷ ಮುನೀರ್ ಹಿಮಮಿ ಅಧ್ಯಕ್ಷತೆ ವಹಿಸಿದರು. ಎಸ್‌ಎಸ್‌ಎಫ್ ಉಪ್ಪಳ ಪ್ರಧಾನ ಕಾರ್ಯದರ್ಶಿ ನಾಸಿರ್ ಬೇಕೂರು ಸ್ವಾಗತ ಕೋರಿದರು. ಎಸ್‌ವೈಎಸ್ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಎಸ್‌ಎಫ್ ಕೇರಳ ರಾಜ್ಯ ಕಾರ್ಯದರ್ಶಿ ಯೂಸುಫ್ ಸಖಾಫಿ ಮುತ್ತೇಡಂ ಅವರು ಭಾಷಣ ಮಾಡಿದರು. ಎಸ್‌ಎಸ್‌ಎಫ್ ಉಪ್ಪಳ ಕಾರ್ಯದರ್ಶಿ ಖುಝೈಮ್ ಸಖಾಫಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X