Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಸಿರಿಬಾಗಿಲು ಪ್ರತಿಷ್ಠಾನದ ಯಕ್ಷಗಾನ...

ಸಿರಿಬಾಗಿಲು ಪ್ರತಿಷ್ಠಾನದ ಯಕ್ಷಗಾನ ಕ್ಷೇತ್ರದ ಸೇವೆ‌ ಶ್ಲಾಘನೀಯ: ಖ್ಯಾತ ಕಲಾವಿದ ಮಾಂಬಾಡಿ ಸುಬ್ರಹ್ಮಣ್ಯ ಭಟ್

ವಾರ್ತಾಭಾರತಿವಾರ್ತಾಭಾರತಿ26 Jun 2023 3:48 PM IST
share
ಸಿರಿಬಾಗಿಲು ಪ್ರತಿಷ್ಠಾನದ ಯಕ್ಷಗಾನ ಕ್ಷೇತ್ರದ ಸೇವೆ‌ ಶ್ಲಾಘನೀಯ: ಖ್ಯಾತ ಕಲಾವಿದ ಮಾಂಬಾಡಿ ಸುಬ್ರಹ್ಮಣ್ಯ ಭಟ್

ಕಾಸರಗೋಡು: "ಸಿರಿಬಾಗಿಲು ಪ್ರತಿಷ್ಠಾನವು ಯಕ್ಷಗಾನ ಕ್ಷೇತ್ರದಲ್ಲಿ‌ ಶ್ಲಾಘನೀಯ ಸೇವೆ‌ ಸಲ್ಲಿಸುತ್ತಿದೆ. ಪ್ರತಿಷ್ಠಾನದ ಧ್ಯೇಯೋದ್ದೇಶಗಳು ಕಲೆಯ ವಿಸ್ತರಣೆ ಹಾಗೂ ಪೋಷಣೆಯ ದೃಷ್ಟಿಯಿಂದ ತುಂಬ ಪೂರಕವಾಗಿವೆ. ಇಂತಹ ಕಾರ್ಯದಲ್ಲಿ ಪ್ರತಿಷ್ಠಾನವು ಐತಿಹಾಸಿಕ‌ ಸಾಧನೆ ಗೈಯುತ್ತಿದೆ" ಎಂದು ತೆಂಕುತಿಟ್ಟು ಹಿಮ್ಮೇಳದ ಗುರು, ಖ್ಯಾತ ಕಲಾವಿದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಹೇಳಿದರು.

ಅವರು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಸಂಯೋಜಿಸಿದ ಭಾಗವತಿಕೆ‌ ಅದ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಯಕ್ಷಗಾನ ಭಾಗವತಿಕೆಯ ಅಭ್ಯಾಸಿಗಳಿಗಾಗಿ ಒಂದು ದಿನದ ವಿಶೇಷ ಅಧ್ಯಯನ ಶಿಬಿರವನ್ನು ಪ್ರತಿಷ್ಠಾನವು ಆಯೋಜಿಸಿತ್ತು. ಶಿಬಿರದ ಆಶಯ ಮತ್ತು ಉದ್ದೇಶಗಳ ಕುರಿತು ಅರ್ಥಧಾರಿ, ಲೇಖಕ ರಾಧಾಕೃಷ್ಣ ಕಲ್ಚಾರ್ ಮಾತನಾಡಿದರು. ಪ್ರತಿಷ್ಠಾನದ ಆಧ್ಯಕ್ಷ ಸಿರಿಬಾಗಿಲು ರಾಮಕೃಷ್ಣ ಮಯ್ಯ ಸ್ವಾಗತಿಸಿದರು. ಶ್ರುತಕೀರ್ತಿ ರಾಜ ನಿರೂಪಿಸಿದರು.

ಶಿಬಿರಾರ್ಥಿಗಳಿಗಾಗಿ ಕಂಠಸ್ವರವನ್ನು ಸಶಕ್ತಗೊಳಿಸುವ ಹಾಗೂ ವೃದ್ಧಿಸಿಕೊಳ್ಳುವ ವಿಧಾನವನ್ನು ಖ್ಯಾತ ಯೋಗಶಿಕ್ಷಕ ಪುಂಡರಿಕಾಕ್ಷ ಅವರು ಕಲಿಸಿಕೊಟ್ಟರು. ಕಂಠಸ್ವರದ ರಕ್ಷಣೆಗಾಗಿ ಯೋಗ, ಪ್ರಾಣಾಯಾಮಗಳ ಅಭ್ಯಾಸವನ್ನು‌ ಅವರು ಪ್ರಾತ್ಯಕ್ಷಿಕೆಯ ಮೂಲಕ ಮಾಡಿಸಿದರು. ಬಳಿಕ ಚೌಕಿ ಹಾಗು ರಂಗದಲ್ಲಿ ಭಾಗವತನ ಕರ್ತವ್ಯಗಳ ಕುರಿತುಖ್ಯಾತ ಕಲಾವಿದ ಸುಬ್ರಾಯ ಹೊಳ್ಳ, 'ರಂಗಸ್ಥಳದಲ್ಲಿ ಮಾತು- ಗೀತ- ಮೌನ' ಎಂಬ ವಿಶಿಷ್ಟ ವಿಷಯದ ಕುರಿತು ಕಲಾವಿದ ಪ್ರಾಧ್ಯಾಪಕ ಪೃಥ್ವೀರಾಜ್ ಕವತ್ತಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಭಾಗವತಿಕೆ ದೃಷ್ಟಿಯಿಂದ ಪೂರ್ವರಂಗದ ಮಾಹಿತಿಯನ್ನು ತಿಳಿಸಿದ ಭಾಗವತ ಪುತ್ತೂರು ರಮೇಶ್ ಭಟ್ ಅವರು ಪೂರ್ವರಂಗದ ಪದ್ಯಗಳ ಸಕ್ರಮ ಅಭ್ಯಾಸ ಅತ್ಯಗತ್ಯ ಎಂದರು.

ಭಾಗವತಿಕೆ ಮಾಡುವಾಗ ಧ್ವನಿವರ್ಧಕದ ಬಳಕೆ ಹೇಗಿರಬೇಕು ಎಂಬುದನ್ನು ಪ್ರಾತ್ಯಕ್ಷಿಕೆಗಳ ಜತೆ ತೋರಿಸಿದವರು ಮಡಿಕೇರಿ ಆಕಾಶವಾಣಿಯ ಸುಬ್ರಾಯ ಸಂಪಾಜೆ. ಹವ್ಯಾಸಿ ಭಾಗವತರಾದ ರಾಜಾರಾಮ ಹೊಳ್ಳ ಕೈರಂಗಳ ತಮ್ಮ ಸಲಹೆಯನ್ನಿತ್ತರು. ಕಾಲಮಿತಿ ಪ್ರಸಂಗದ ಗತಿಯನ್ನು ನಿರ್ಣಯಿಸುವುದು ಹೇಗೆ ಎಂದು ಪ್ರಾಧ್ಯಾಪಕ ಸುಣ್ಣಂಗುಳಿ ಶ್ರೀ ಕೃಷ್ಣ ಭಟ್ ವಿವರಿಸಿದರು.

ಛಂದಸ್ಸು, ಸಾಹಿತ್ಯಕ್ಕೆ ಲೋಪವಾಗದೆ ಯಕ್ಷಗಾನ ಹಾಡುಗಾರಿಕೆ ಮಾಡುವುದು ಹೇಗೆ ಎಂದು ಕಟೀಲು ಮೇಳದ‌ ಭಾಗವತ ಅಂಡಾಲ ದೇವಿಪ್ರಸಾದ್ ಶೆಟ್ಟಿ ಪ್ರಾತ್ಯಕ್ಷಿಕೆಗಳ ಮಿಲಕ ತಿಳಿಸಿದರು. ಭಾಗವತ ದಿನೇಶ ಭಟ್ ಯಲ್ಲಾಪುರ ಸಹಕರಿಸಿದರು. ಎಲ್ಲ ಪ್ರಾತ್ಯಕ್ಷಿಕೆಗಳಿಗೂ ಹಿಮ್ಮೇಳ ವಾದಕರಾಗಿದ್ದವರು ಮುರಾರಿ ಕಡಂಬಳಿತ್ತಾಯ, ನೆಕ್ಕರೆಮೂಲೆ ಗಣೇಶ ಭಟ್ ಮತ್ತು ಮುರಾರಿ‌ ಪಂಜಿಗದ್ದೆ. ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಕಲಾವಿದ ಶಂಭಯ್ಯ ಕಂಜರ್ಪಣೆ, ಲಕ್ಷ್ಮಣ ಕುಮಾರ್ ಮರಕಡ, ಹರೀಶ್ ಬಳಂತಿಮೊಗರು, ವೈಕುಂಠ ಹೇರ್ಳೆ ಸಾಸ್ತಾನ ಮುಂತಾದವರು ಭಾಗವಹಿಸಿ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರದ ಕೊನೆಯಲ್ಲಿ ಶಿಬಿರಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು. ಶಿಬಿರದ ಅವಧಿಯಲ್ಲಿ ಅನೇಕ ಯಕ್ಷಗಾನ ಕ್ಷೇತ್ರದ ಸುಪ್ರಸಿದ್ಧರು, ವಿದ್ವಾಂಸರು ಪಾಲ್ಗೊಂಡು ಮಾರ್ಗದರ್ಶನವಿತ್ತರು. ಭಾಗವಹಿಸಿದ ಎಲ್ಲ ಶಿಬಿರಾರ್ಥಿಗಳಿಗೂ ಪ್ರಮಾಣಪತ್ರ ಮತ್ತು ಪುಸ್ತಕ ಹಾರವನ್ನು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X