Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ | ಆರೆಸ್ಸೆಸ್ ಮುಖಂಡನ ಮನೆಯಿಂದ 770...

ಕೇರಳ | ಆರೆಸ್ಸೆಸ್ ಮುಖಂಡನ ಮನೆಯಿಂದ 770 ಕೆಜಿ ಸ್ಫೋಟಕ ವಶ

ವಾರ್ತಾಭಾರತಿವಾರ್ತಾಭಾರತಿ30 March 2024 7:56 PM IST
share
ಕೇರಳ | ಆರೆಸ್ಸೆಸ್ ಮುಖಂಡನ ಮನೆಯಿಂದ 770 ಕೆಜಿ ಸ್ಫೋಟಕ ವಶ

ಕಣ್ಣೂರು : ಜಿಲ್ಲೆಯ ಪೊಯಿಲೂರಿನಲ್ಲಿರುವ ಆರೆಸ್ಸೆಸ್ ಮುಖಂಡ ಮತ್ತು ಆತನ ಸಂಬಂಧಿಕರ ನಿವಾಸದಿಂದ 770 ಕೆಜಿ ಸ್ಫೋಟಕಗಳ ಗಣನೀಯ ಸಂಗ್ರಹವನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ ಎಂದು maktoobmedia.com ವರದಿ ಮಾಡಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಳೀಯ ಮುಖಂಡ ವಡಕಯಿಲ್ ಪ್ರಮೋದ್ ಮತ್ತು ಅತನ ಸಂಬಂಧಿ ವಡಕಯಿಲ್ ಶಾಂತಾ ಅವರ ಮನೆಗಳಲ್ಲಿ ಸ್ಪೋಟಕಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

"ಮಾಹಿತಿಯ ಆಧಾರದ ಮೇಲೆ ಕೊಲವಲ್ಲೂರು ಪೊಲೀಸ್ ಇನ್ಸ್‌ಪೆಕ್ಟರ್ ಸುಮೀತ್ ಕುಮಾರ್ ಮತ್ತು ಸಬ್ ಇನ್ಸ್‌ಪೆಕ್ಟರ್ ಸೋಬಿನ್ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಭಾರೀ ಪ್ರಮಾಣದ ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಕೊಳವಲ್ಲೂರು ಪೊಲೀಸರು ತಿಳಿಸಿದ್ದಾರೆ.

"ಪ್ರಾಥಮಿಕ ತನಿಖೆಗಳ ಪ್ರಕಾರ ಸ್ಫೋಟಕಗಳನ್ನು ಅಕ್ರಮವಾಗಿ ವಿತರಿಸಲು ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ. ನಾವು ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ. ಈ ಸಂಬಂಧಿತ ಬೆಳವಣಿಗೆಗಳ ಮಧ್ಯೆ, ಸ್ಥಳೀಯ ಪ್ರದೇಶದ ಸುರಕ್ಷತೆಗೆಗಾಗಿ ಭದ್ರತೆಯನ್ನು ಹೆಚ್ಚಿಸುತ್ತಿದ್ದೇವೆ, ”ಎಂದು maktoobmedia.com ಗೆ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು, ವಾರ್ತಾ ಭಾರತಿಯೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಕೊಳವಲ್ಲೂರು SHO, ಸ್ಪೋಟಕಗಳನ್ನು ವಶಪಡಿಸಿಕೊಂಡಿರುವುದು ನಿಜ. ಆದರೆ ಈ ಸ್ಫೋಟಕಗಳನ್ನು ಯುಗಾದಿ ಹಬ್ಬದ ಸಮಯದಲ್ಲಿ ಪಟಾಕಿಗಳಿಗಾಗಿ ಬಳಸಲಾಗುತ್ತಿತ್ತು ಎಂದು ಹೇಳಿದರು. ಈ ಸಂಬಂಧ ಪ್ರಮೋದ್‌ನನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದರು.

ಪ್ರಮೋದ್ ಆರೆಸ್ಸೆಸ್ನೊಂದಿಗೆ ನಂಟು ಹೊಂದಿದ್ದು, ಸಂಘಟನೆಯ ಸ್ಥಳೀಯ ನಾಯಕರಲ್ಲಿ ಆತ ಒಬ್ಬ ಎಂದು SHO ದೃಢಪಡಿಸಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಇಂತಹ ಗಣನೀಯ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಕಳೆದ ವರ್ಷ, ಕಣ್ಣೂರಿನ ಎರಂಜೋಲಿಪಾಲಂ ಬಳಿ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿ ಆರೆಸ್ಸೆಸ್ಗೆ ಸೇರಿದ ಯುವಕ ತೀವ್ರ ಗಾಯಗೊಂಡಿದ್ದನು. ಘಟನೆಯಲ್ಲಿ ವಿಷ್ಣು (20) ಅವರ ಅಂಗೈ ಒಡೆದು ಛಿದ್ರವಾಗಿತ್ತು. ವಿಷ್ಣು ತನ್ನ ಮನೆಯ ಸಮೀಪದ ಮೈದಾನದಲ್ಲಿ ಬಾಂಬ್ ತಯಾರಿಸುವಾಗ ಸ್ಫೋಟ ಸಂಭವಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X