Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಸುಂಟಿಕೊಪ್ಪ | ವೈದ್ಯರ ನಿರ್ಲಕ್ಷ್ಯದಿಂದ...

ಸುಂಟಿಕೊಪ್ಪ | ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು ಆರೋಪ; ಕುಟುಂಬಸ್ಥರು, ಸಾರ್ವಜನಿಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Nov 2025 11:26 PM IST
share
ಸುಂಟಿಕೊಪ್ಪ | ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು ಆರೋಪ; ಕುಟುಂಬಸ್ಥರು, ಸಾರ್ವಜನಿಕರಿಂದ ಪ್ರತಿಭಟನೆ

ಸುಂಟಿಕೊಪ್ಪ : ಇಲ್ಲಿನ ಖಾಸಗಿ ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ಮತ್ತು ಸಾರ್ವಜನಿಕರು ಕ್ಲಿನಿಕ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಸುಂಟಿಕೊಪ್ಪದ ಸ್ವಾಮಿ ಮತ್ತು ಸುಂದರಿ ದಂಪತಿ ಪುತ್ರ ವಿನೋದ್ (34) ಮೃತ ಯುವಕ.

ತೀವ್ರ ಸೊಂಟ ನೋವು, ಕೈ ನೋವಿನ ಹಿನ್ನೆಲೆಯಲ್ಲಿ ವಿನೋದ್ ಗುರುವಾರ ಸುಂಟಿಕೊಪ್ಪ ಕನ್ನಡ ವೃತ್ತದ ಬಳಿಯಿರುವ ಉಮಾ ಕ್ಲಿನಿಕ್‌ಗೆ ಬಂದಿದ್ದಾರೆ. ವೈದ್ಯರಾದ ಡಾ.ಯಶೋಧರ ಪೂಜಾರಿ ಅವರು ಪರೀಕ್ಷೆ ನಡೆಸಿ 2 ಚುಚ್ಚುಮದ್ದುಗಳನ್ನು ಒಂದರ ನಂತರ ಒಂದು ನೀಡಿದ್ದು ಕೆಲವು ಮಾತ್ರೆಗಳನ್ನು ನೀಡಿ ಮನೆಗೆ ಹೋಗಿ ವಿಶ್ರಾಂತಿ ಪಡೆದಲ್ಲಿ ವಿನೋದ್ ಸುಸ್ತು ನಿವಾರಣೆಗೊಳ್ಳಲಿದೆ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಅದರಂತೆ ವಿನೋದ್ ಮನೆಗೆ ಬಂದಿದ್ದು, ವಿಪರೀತ ಆಯಾಸಗೊಂಡ ಹಿನ್ನಲೆಯಲ್ಲಿ ಕುಂಟುಂಬಸ್ಥರು ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ತೆರಳಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ವಿನೋದ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿನೋದ್ ಸಾವಿನಿಂದ ಆಘಾತಗೊಂಡ ಕುಟುಂಬಸ್ಥರು, ವೈದ್ಯರ ನಿರ್ಲಕ್ಷ್ಯದಿಂದ ವಿನೋದ್ ಮೃತಪಟ್ಟಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಶುಕ್ರವಾರ ಮಧ್ಯಾಹ್ನ ಮೃತದೇಹವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಟ್ಟು ಧರಣಿ ನಡೆಸಿದರು. ಇದರಿಂದ ವಾಹನಗಳ ಸಂಚಾರಕ್ಕೆ ಕೆಲಕಾಲ ಅಡಚಣೆಯೂ ಉಂಟಾದ ಘಟನೆಯೂ ನಡೆಯಿತು.

ಸ್ಥಳಕ್ಕೆ ಕುಶಾಲನಗರ ನಗರ, ಮಡಿಕೇರಿ ಗ್ರಾಮಾಂತರ ಹಾಗೂ ಸಂಚಾರಿ ಪೊಲೀಸರನ್ನು ನಿಯೋಜಿಸುವ ಮೂಲಕ ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗಿತ್ತು.

ನ.13ರಂದು ಪೊಲೀಸ್ ಠಾಣೆಯಲ್ಲಿ ತಪ್ಪಿತಸ್ಥ ವೈದ್ಯರ ಸಮ್ಮುಖದಲ್ಲಿ ಕುಟುಂಬಸ್ಥರೊಂದಿಗೆ ಸಭೆ ನಡೆಸುವ ಲಿಖಿತ ಒಪ್ಪಂದದೊಂದಿಗೆ ಪ್ರತಿಭಟನೆ ಕೈಬಿಡಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಮತ್ತು ಗ್ರಾಪಂ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಮಾಹಿತಿ ನೀಡಿದರು.

ಮೃತದೇಹದ ಅಂತ್ಯಕ್ರಿಯೆಯು ಶುಕ್ರವಾರ ಸಂಜೆ ಹಿಂದೂ ರುದ್ರಭೂಮಿಯಲ್ಲಿ ನೇರವೇರಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X