ಮಡಿಕೇರಿ: ಕಟ್ಟೆಮಾಡು ಗ್ರಾಮದ ಶ್ರೀಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕನಿಗೆ ಹಲ್ಲೆ

ಮಡಿಕೇರಿ: ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ಸೋಮವಾರ ಸಂಜೆ ಹಲ್ಲೆ ನಡೆದಿದೆ.
ಮೂರ್ನಾಡಿನಲ್ಲಿರುವ ಅರ್ಚಕರ ಮನೆಗೆ ಸಂಜೆಯ ವೇಳೆ ಬಂದ ಇಬ್ಬರು ವ್ಯಕ್ತಿಗಳು ವಿಘ್ನೇಶ್ ಭಟ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಅರ್ಚಕರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರ್ಚಕ ವಿಘ್ನೇಶ್ ಭಟ್, "ಇಬ್ಬರು ವ್ಯಕ್ತಿಗಳು ನನ್ನ ಮನೆಯ ಬಳಿ ಬಂದು ಹಲ್ಲೆ ಮಾಡಿದ್ದಾರೆ. ತಡೆಯಲು ಬಂದ ನನ್ನ ತಾಯಿಗೂ ನೋವಾಗಿದೆ. ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಗೊಂದಲಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆದಿರಬಹುದು" ಎಂದು ಆರೋಪಿಸಿದರು.
ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಘ್ನೇಶ್ ಭಟ್ ರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.





