Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ರಾಜ್ಯ ಸರಕಾರದ ವಿರುದ್ಧ ಮಡಿಕೇರಿಯಲ್ಲಿ...

ರಾಜ್ಯ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Nov 2024 11:34 PM IST
share
Photo of Bjp Protest

ಮಡಿಕೇರಿ : ರಾಜ್ಯ ಕಾಂಗ್ರೆಸ್ ಸರಕಾರ ವಕ್ಫ್ ಮಂಡಳಿಯನ್ನು ಬಳಸಿಕೊಂಡು ರಾಜ್ಯದಲ್ಲಿ ಬಡವರ ಭೂಮಿಯನ್ನು ಕಬಳಿಸುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಯಿತು.

ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು ವಕ್ಫ್ ನಿಯಮಗಳನ್ನು ಬದಲಿಸಬೇಕೆಂದು ಒತ್ತಾಯಿಸಿದರು.

ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಜಾಗದ ಆರ್ಟಿಸಿಯಲ್ಲಿ “ವಕ್ಫ್ ಆಸ್ತಿ” ಎಂದು ನಮೂದಿಸಿ ಬಡ ರೈತರಿಗೆ ನೋಟಿಸ್ ನೀಡುತ್ತಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೆಂದೂ ಕಾಣದಷ್ಟು ಇಂಧನ ಬೆಲೆ ಹೆಚ್ಚಳವಾಗಿದೆ. ವಿವಿಧ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ಬಡವರ್ಗದ ಹಿತಕ್ಕಾಗಿ ಇರುವ ವಾಲ್ಮೀಕಿ ಕಲ್ಯಾಣ ನಿಗಮದ ಹಗರಣ ಸೇರಿದಂತೆ, ಸ್ವತಃ ಸಿಎಂ ಅವರೆ ಸಿಲುಕಿಕೊಂಡಿರುವ ಮುಡಾ ಹಗರಣಗಳೊಂದಿಗೆ ಈ ಸರಕಾರದಲ್ಲಿ ಭ್ರಷ್ಟಾಚಾರದ ಸರಮಾಲೆಯೆ ನಡೆಯುತ್ತಿದೆ. ಬಿಜೆಪಿಯನ್ನು ಶೇ.40 ಕಮಿಷನ್ ಪಕ್ಷವೆನ್ನುತ್ತಿದ್ದ ಕಾಂಗ್ರೆಸ್ ಇದೀಗ ಶೇ.100ರಷ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಎಲ್ಲಾ ಹಗರಣಗಳ ನಡುವೆ ಇದೀಗ ವಕ್ಫ್ ಮಂಡಳಿಯ ಮೂಲಕ ಬಡವರ್ಗದ ಜಾಗವನ್ನು ಕಬಳಿಸುವ ಹುನ್ನಾರಕ್ಕೆ ಸರಕಾರ ಮುಂದಾಗಿದೆಯೆಂದು ಆರೋಪಿಸಿದರು.

ಜಿಲ್ಲಾ ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಮಂಡಳಿಗೆ ಇರುವ 1.10 ಲಕ್ಷ ಏಕರೆ ಜಮೀನಿನಲ್ಲಿ 84 ಸಾವಿರ ಏಕರೆ ಒತ್ತುವರಿಯಾಗಿದೆ. ಈ ಒತ್ತುವರಿ ಅವರದೇ ಸಮೂಹದ ಮಂದಿ ಮಾಡಿದ್ದಾರೆ, ಅದನ್ನು ಬಿಡಿಸಿ ಬಡ ಮಂದಿಗೆ ಕೊಡುವ ಬದಲಾಗಿ, ಬಡ ವರ್ಗದ ಜನರ ಬಳಿಯಲ್ಲಿರುವ ಜಾಗವನ್ನು ಕಬಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿಂದ ಒಂದು ಸಮೂಹದ ತುಷ್ಟೀಕರಣ ಮಾಡುತ್ತಲೇ ಬಂದಿದೆ. ಅದರ ಭಾಗವಾಗಿ ಇದೀಗ ವಕ್ಫ್ ಮೂಲಕ ಜಾಗ ಕಬಳಿಸುವ ಪ್ರಯತ್ನ ನಡೆದಿದೆ. ರೈತರ ಆರ್ಟಿಸಿಯಲ್ಲಿ ವಕ್ಫ್ ಆಸ್ತಿ ಎನ್ನುವುದನ್ನು ತೆಗೆದು ಹಾಕುವವರೆಗೆ ರಾಜ್ಯ ವ್ಯಾಪಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮೆರವಣಿಗೆಯ ಮೂಲಕ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರಾದ ರಾಬಿನ್ ದೇವಯ್ಯ, ಶಾಂತೆಯಂಡ ರವಿ ಕುಶಾಲಪ್ಪ, ಅನಿತಾ ಪೂವಯ್ಯ, ಸುವಿನ್ ಗಣಪತಿ, ವಿ.ಕೆ.ಲೋಕೇಶ್, ಮಹೇಶ್ ಜೈನಿ, ಕಾಂಗೀರ ಸತೀಶ್, ಕನ್ನಂಡ ಸಂಪತ್, ಕೆ.ಎಸ್.ರಮೇಶ್, ತಳೂರು ಕಿಶೋರ್ ಕುಮಾರ್, ಉಮೇಶ್ ಸುಬ್ರಮಣಿ, ಬಿ.ಬಿ.ಭಾರತೀಶ್, ಡೀನ್ ಬೋಪಣ್ಣ, ಅರುಣ್ ಶೆಟ್ಟಿ, ಬಿ.ಕೆ.ಜಗದೀಶ್, ಬಿ.ಕೆ.ಅರುಣ್ ಕುಮಾರ್, ಮನು ಮಂಜುನಾಥ್, ಕನ್ನಿಕೆ, ಬಿ.ಪಿ.ಡಿಶು, ಎಸ್.ಸಿ.ಸತೀಶ್, ಸವಿತಾ ರಾಕೇಶ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X