Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ವಿನಯ್ ಸೋಮಯ್ಯ ಆತ್ಮಹತ್ಯೆ :...

ವಿನಯ್ ಸೋಮಯ್ಯ ಆತ್ಮಹತ್ಯೆ : ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 April 2025 5:48 PM IST
share
ವಿನಯ್ ಸೋಮಯ್ಯ ಆತ್ಮಹತ್ಯೆ : ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

ಮಡಿಕೇರಿ : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯು ಮಡಿಕೇರಿಯಲ್ಲಿ ದಿಢೀರ್ ರಸ್ತೆ ತಡೆ ಪ್ರತಿಭಟನೆ ನಡೆಸಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ವಿನಯ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲು ನೀಡಿರುವ ಹೇಳಿಕೆಯಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಪಕ್ಷದ ವಕ್ತಾರನನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿನಯ್ ವಿರುದ್ಧ ದಾಖಲಾಗಿದ್ದ ಎಫ್‍ಐಆರ್‌ಗೆ ನ್ಯಾಯಾಲಯದಿಂದ ತಡೆ ದೊರೆತ್ತಿದ್ದರು ಪೊಲೀಸರು ಬೇರೆ ಸೆಕ್ಷನ್ ನಡಿ ಪ್ರಕರಣ ದಾಖಲಿಸಲು ಪ್ರಯತ್ನಿಸಿದ್ದಾರೆ. ಅಶುಚಿತ್ವದಿಂದ ಕೂಡಿದ್ದ ನಾಪೋಕ್ಲು ಸಾರ್ವಜನಿಕ ಶೌಚಾಲಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿನಯ್ ಅವರು ವಿಚಾರ ಹಂಚಿಕೊಂಡಿದ್ದೇ ದೊಡ್ಡ ತಪ್ಪು ಎಂದು ಪ್ರತಿಬಿಂಬಿಸಿ ಎಫ್‍ಐಆರ್ ದಾಖಲಿಸಲಾಗಿದೆ. ಶೌಚಾಲಯವನ್ನು ಶುಚಿಗೊಳಿಸಲು ಕ್ರಮಕೈಗೊಳ್ಳದೆ ಎಫ್‍ಐಆರ್ ದಾಖಲಿಸಿರುವುದು ಖಂಡನೀಯ. ಪೊಲೀಸರು ಕಾಂಗ್ರೆಸ್ ಶಾಸಕರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಕೋರ್ಟ್ ಆದೇಶಕ್ಕೂ ಬೆಲೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾದ ವಿಚಾರಕ್ಕೂ ವಿನಯ್ ಗೂ ಯಾವುದೇ ಸಂಬಂಧ ಇರುವುದಿಲ್ಲ. ಇಂದು ಅಮಾಯಕನ ಸಾವಾಗಿದೆ, ವಿನಯ್‍ನ ತಪ್ಪಿಲ್ಲ ಎಂದು ತಿಳಿದಿದ್ದರು ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶಾಸಕರು ಒತ್ತಡ ಹೇರಿದ ಕಾರಣದಿಂದ ವಿಜಯ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ಆರೋಪಿಸಿದರು.

ಇಬ್ಬರು ಶಾಸಕರು ಅಧಿಕಾರ ಬಿಟ್ಟು ವಿನಯ್ ಸಾವಿನ ಪ್ರಕರಣದ ತನಿಖೆಗೆ ಸಹಕರಿಸಬೇಕು ಎಂದು ರವಿ ಕಾಳಪ್ಪ ಒತ್ತಾಯಿಸಿದರು.

ರಸ್ತೆ ತಡೆ :

ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಕಾರರು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದರು.

ರಸ್ತೆ ತಡೆ ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ಪೊಲೀಸ್ ಅಧಿಕಾರಿಗಳು ಕೋರಿಕೊಂಡರೂ ಪಟ್ಟು ಬಿಡದ ಪ್ರತಿಭಟನಾಕಾರರು ಎಸ್‍ಪಿ ಬರಬೇಕೆಂದು ಒತ್ತಾಯಿಸಿದರು. ನಂತರ ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು, ವಿನಯ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆ ತನಿಖೆಗೆ ಕೊಡಗು ಪೊಲೀಸರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದರು. ನಂತರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಿಂದ ಹಿಂದೆ ಸರಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಸುವಿನ್ ಗಣಪತಿ, ಜಗದೀಶ್, ಅರುಣ್ ಶೆಟ್ಟಿ, ನಗರಸಭಾ ಸದಸ್ಯರುಗಳು, ನಗರ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X