Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ...

ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಭ್ರಷ್ಟಾಚಾರಕ್ಕಿಂತಲೂ ಈಗಿನ ಸರಕಾರದ ಭ್ರಷ್ಟಾಚಾರದ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಆರೋಪ

ವಾರ್ತಾಭಾರತಿವಾರ್ತಾಭಾರತಿ12 Feb 2026 10:49 PM IST
share
ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಭ್ರಷ್ಟಾಚಾರಕ್ಕಿಂತಲೂ ಈಗಿನ ಸರಕಾರದ ಭ್ರಷ್ಟಾಚಾರದ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಆರೋಪ
"ಮಾ.5ರಂದು ಫ್ರೀಡಂ ಪಾರ್ಕ್‍ನಲ್ಲಿ ಗುತ್ತಿಗೆದಾರರ ಬೃಹತ್ ಮುಷ್ಕರ"

ಮಡಿಕೇರಿ : ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಭ್ರಷ್ಟಾಚಾರಕ್ಕಿಂತಲೂ ಈಗಿನ ಸರಕಾರದ ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ ಮತ್ತು "ಮಧ್ಯವರ್ತಿ"ಗಳ ಮೂಲಕ ಸರಕಾರದ ಆಡಳಿತ ನಡೆಯುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ.

ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಹಿಂದಿನ ಅಧ್ಯಕ್ಷರಾಗಿ ಕೆಂಪಣ್ಣ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯ ಅವರು, ಅಂದಿನ ಸಂದರ್ಭಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದರು. ಹೀಗಿದ್ದೂ ಇಂದು ಗುತ್ತಿಗೆದಾರರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಬಹಳಷ್ಟು ಇಲಾಖೆಗಳಲ್ಲಿ ಕೆಲವು ಸಚಿವರು ಮಧ್ಯವರ್ತಿಗಳ ಮೂಲಕ ಆಡಳಿತ ನಡೆಸುತ್ತಿದ್ದಾರೆ, ಇಂತಹ ಕೆಲಸ ಇತಿಹಾಸದಲ್ಲೆ ನಡೆದಿಲ್ಲ ಎಂದು ಟೀಕಿಸಿದರು.

ರಾಜ್ಯವ್ಯಾಪಿ ಗುತ್ತಿಗೆದಾರರ ಕೆಲಸಗಳಿಗೆ 37 ಸಾವಿರ ಕೋಟಿ ರೂ. ಇಂದಿಗೂ ಪಾವತಿಯಾಗಿಲ್ಲ. ಕಳೆದ ಎರಡೂವರೆ ವರ್ಷಗಳ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಿಂಚಿತ್ ಹಣ ಪಾವತಿಯಾಗದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಾಕಿ ಮೊತ್ತವನ್ನು ತಕ್ಷಣ ಪಾವತಿಸುವಂತೆ ಆಗ್ರಹಿಸಿ ಮಾ.5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಗುತ್ತಿಗೆದಾರರು ಬೃಹತ್ ಮುಷ್ಕರ ನಡೆಸಲಿದ್ದಾರೆ ಎಂದರು.

ರಾಜ್ಯವ್ಯಾಪಿ ಗುತ್ತಿಗೆದಾರರಿಗೆ ನೀಡಲು ಬಾಕಿ ಇರುವ ಹಣ ಮತ್ತು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳು, ವಿವಿಧ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಪರಿಹಾರ ಸೂಚಿಸಬೇಕೆಂದು ಒತ್ತಾಯಿಸಿದರು.

ಗುತ್ತಿಗೆದಾರರಿಗೆ ನೀಡಲು ಬಾಕಿ ಇರುವ 37 ಸಾವಿರ ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ಗುತ್ತಿಗೆದಾರರು ಸಾಲ ಸೋಲ ಮಾಡಿ ಕಾಮಗಾರಿಗಳನ್ನು ನಿರ್ವಹಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ 190 ಕೋಟಿ ರೂ. ಪಾವತಿಸದೆ ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಲೋಕೋಪಯೋಗಿ ಇಲಾಖೆಯದ್ದೆ 96 ಕೋಟಿಯಷ್ಟಿದೆ ಎಂದು ಆರ್.ಮಂಜುನಾಥ್ ತಿಳಿಸಿದರು.

ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ 2018-19, 2019-20ನೇ ಅವಧಿಯಲ್ಲಿ ಇಲ್ಲಿನ ಗುತ್ತಿಗೆದಾರರು ಸಾಕಷ್ಟು ಸಂಕಷ್ಟಗಳ ನಡುವೆಯೂ ಹತ್ತು ಹಲವು ಕಾಮಗಾರಿಗಳನ್ನು ನಿರ್ವಹಿಸಿದ್ದಾರೆ. ಇದರ ಬಾಪ್ತು 7 ಕೋಟಿ ರೂ. ಪಾವತಿಯಾಗಲು ಬಾಕಿ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಎನ್.ಡಿ.ಕೃಷ್ಣ, ಉಪಾಧ್ಯಕ್ಷ ಎ.ಜಿ.ಸುರೇಶ್, ಸಂಘಟನಾ ಕಾರ್ಯದರ್ಶಿ ನಾಗರಾಜ್, ಕೊಡಗು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕಿಮ್ಮುಡಿರ ರವಿ ಚಂಗಪ್ಪ, ಜಿಲ್ಲಾ ಕಾರ್ಯದರ್ಶಿ ಲಾರೆನ್ಸ್, ಗೌರವಾಧ್ಯಕ್ಷ ಸಣ್ಣೇಗೌಡ, ಉಪಾಧ್ಯಕ್ಷ ಎಂ.ಕೆ.ಚಂಗಪ್ಪ, ನಗರ ಉಪಾಧ್ಯಕ್ಷ ರಾಜೀವಲೋಚನ, ಸಂಘÀಟನಾ ಕಾರ್ಯದರ್ಶಿ ಕೆ.ಬಾಬು ಹಾಗೂ ಖಜಾಂಚಿ ರವೀಂದ್ರ ರೈ ಉಪಸ್ಥಿತರಿದ್ದರು.

Tags

Contractors Association
share
ವಾರ್ತಾಭಾರತಿ
ವಾರ್ತಾಭಾರತಿ
Next Story
X