Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ| ಲಂಚಕ್ಕಾಗಿ ಬೇಡಿಕೆ:...

ಮಡಿಕೇರಿ| ಲಂಚಕ್ಕಾಗಿ ಬೇಡಿಕೆ: ಲೋಕಾಯುಕ್ತರ ಎದುರು ಕಣ್ಣೀರು

ವಾರ್ತಾಭಾರತಿವಾರ್ತಾಭಾರತಿ12 July 2024 11:16 PM IST
share
ಮಡಿಕೇರಿ| ಲಂಚಕ್ಕಾಗಿ ಬೇಡಿಕೆ: ಲೋಕಾಯುಕ್ತರ ಎದುರು ಕಣ್ಣೀರು

ಮಡಿಕೇರಿ: ಮಡಿಕೇರಿ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು.

ಸಾರ್ವಜನಿಕರೊಬ್ಬರು ಪೊನ್ನಂಪೇಟೆಯಲ್ಲಿ ಐದೂವರೆ ಸೆಂಟ್ ಜಾಗವಿದ್ದು, ಪೌತಿಖಾತೆ ಮಾಡಲು 50 ಸಾವಿರ ರೂ. ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಕಣ್ಣೀರು ಸುರಿಸಿದರು.

ನಾನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ವಯಸ್ಸಾಗಿದೆ. ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ. ಮಗಳ ಮದುವೆ ಮಾಡಬೇಕಿದ್ದು, ತುಂಬಾ ತೊಂದರೆಯಾಗಿದೆ. ಎರಡು ವರ್ಷದಿಂದ ಪೌತಿಖಾತೆ ಮಾಡಿಕೊಡದೆ ಸತಾಯಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ನಿಮ್ಮ ಕೆಲಸ ಕಾಲ ಮಿತಿಯಲ್ಲಿ ಆದ್ಯತೆ ಮೇಲೆ ಮಾಡಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.

ಮತ್ತೊಬ್ಬ ಮಹಾಲಕ್ಷ್ಮಿ ಅವರು ಜಾಗದ ಖಾತೆ ಮಾಡಿಕೊಡದೆ ಒಂದುವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು.

ಈ ಬಗ್ಗೆ ಪೌರಾಯುಕ್ತರಾದ ವಿಜಯ್ ಅವರು ಹೊಸದಾಗಿ ಖಾತೆ ಆಗಬೇಕಿದೆ. ಶೀಘ್ರ ಖಾತೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಮತ್ತೊಬ್ಬರು ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದ ವಸಂತ ಪಿ.ಕೆ. ಅವರು ಜಾಗವನ್ನು ದುರಸ್ತಿ ಮಾಡಿಕೊಡುವಂತೆ ಹಲವು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಮನವಿ ಮಾಡಿದರೂ ಸಹ ಕೆಲಸಗಳು ಆಗಿಲ್ಲ. ಈ ಸಂಬಂಧ ಕೆಲಸ ಮಾಡಿಸಿಕೊಡುವಂತೆ ಲೋಕಾಯುಕ್ತ ಡಿವೈಎಸ್‍ಪಿ ಅವರಲ್ಲಿ ಮನವಿ ಮಾಡಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‍ಪಿ ಅವರು ಹೇಳಿದರು.

ಮತ್ತೊಬ್ಬ ಮನವಿದಾರರು ಜಾಗದ ಖಾತೆ ಬದಲಾವಣೆ ಮಾಡಿಕೊಡಬೇಕಿದ್ದು, ಈ ಸಂಬಂಧ ಎಷ್ಟೇ ಮನವಿ ಮಾಡಿದರೂ ಸಹ ಇನ್ನೂ ಕೆಲಸವಾಗಿಲ್ಲ ಎಂದು ದೂರಿದರು. ತಮ್ಮ ಕೆಲಸವನ್ನು ಕಾಲಮಿತಿಯಲ್ಲಿ ಮಾಡಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುವುದು ಕಡಿಮೆಯಾಗಿದೆ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಬದಲಾವಣೆಯಾಗುತ್ತಿರುವುದು ಕಂಡುಬರುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣ ಮಾಡಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಒಳ್ಳೆಯ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸಹಕರಿಸಬೇಕು ಎಂದರು. ಕಚೇರಿಯಲ್ಲಿ ಹಾಜರಾತಿ ಬಯೋಮೆಟ್ರಿಕ್ ಅಳವಡಿಸಬೇಕು. ಚಲನವಲನ ವಹಿಯನ್ನು ದಾಖಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಪವನ್‍ಕುಮಾರ್ ಅವರು ಹೇಳಿದರು. ಫೋಟೋ :: ಲೋಕಾಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X