Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ...

ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ23 Sept 2025 7:36 PM IST
share
ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ : ಸಚಿವ ದಿನೇಶ್ ಗುಂಡೂರಾವ್

ಮಡಿಕೇರಿ ಸೆ.23 : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಈ ಬಾರಿ ಬಜೆಟ್ ಸಂದರ್ಭದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಪ್ರಕಟಿಸಲಾಗಿತ್ತು. ಹಾಗೆಯೇ ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶವಾಗಿತ್ತು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಹಾಗೂ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವರು ಹೇಳಿದರು.

‘ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ 250 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ ಸುಮಾರು 105 ಕೋಟಿ ರೂ. ವೆಚ್ಚದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದರು.

ಹುದಿಕೇರಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.’

ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವಿರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.

ಸ್ಥಳೀಯ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ವಿರಾಜಪೇಟೆ ಕ್ಷೇತ್ರದ ಆಸ್ಪತ್ರೆ ಸೇರಿದಂತೆ ಹೆಚ್ಚಿನ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಾನು ಸಹ ಇದೇ ಜಿಲ್ಲೆಯವನಾಗಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪ್ರತೀ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದರು.

ಬಡ ಜನರಿಗೆ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಅಂಕಿ ಅಂಶಗಳು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಅದನ್ನು ಬಿಟ್ಟು ಅಪಸ್ವರ ತೆಗೆಯುವುದು ಸರಿಯಲ್ಲ. ಅನುಮಾನ ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಅದನ್ನು ಬಿಟ್ಟು ಗೊಂದಲ ನಿರ್ಮಾಣ ಮಾಡುವುದು ಬೇಡ ಎಂದರು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಚುನಾವಣಾ ಸಂದರ್ಭದಲ್ಲಿಯೇ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಪ್ರಕಟಿಸಲಾಗಿತ್ತು. ಅದರಂತೆ ಈಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಹೇಳಿದರು.

ಹಾಗೆಯೇ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪ್ರತ್ಯೇಕ ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿತ್ತು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಮತ್ತು ಸಚಿವರು ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಕ್ಷೇಮ ವಿಚಾರಿಸಿದರು. ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯರಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಆನಂದ್, ಡಾ.ಸನತ್ ಕುಮಾರ್, ಡಾ.ಮದುಸೂದನ್, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಸಿಂಪಿ, ಡಾ.ಯತೀಶ್ ಕುಮಾರ್, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಕಾಳಪ್ಪ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X