Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕಾವೇರಿ ನದಿ ಮಲಿನತೆ, ನದಿ ಪಾತ್ರ...

ಕಾವೇರಿ ನದಿ ಮಲಿನತೆ, ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ21 March 2025 2:24 PM IST
share
ಕಾವೇರಿ ನದಿ ಮಲಿನತೆ, ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ :  ಡಿ.ಕೆ.ಶಿವಕುಮಾರ್

ಕೊಡಗು: "ಕಾವೇರಿ ನದಿ ಮಲಿನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೊಡಗಿನ ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಕಾವೇರಿ ನದಿ ಮಲಿನತೆ ಹಾಗೂ ಒತ್ತುವರಿ ಬಗ್ಗೆ ಕೇಳಿದಾಗ, "ಈ ನೆಲ,‌ಜಲ, ಇತಿಹಾಸ, ಪರಂಪರೆ ಉಳಿಸಲು ಏನು ಬೇಕೋ ಅದೆಲ್ಲವನ್ನು ನಾವು ಮಾಡುತ್ತೇವೆ. ನಿಮ್ಮ (ಮಾಧ್ಯಮಗಳ) ಸಲಹೆ ಇದ್ದರೂ ಸ್ವೀಕರಿಸುತ್ತೇವೆ" ಎಂದು ಉತ್ತರಿಸಿದರು.

ನೀರಿನ ಸದ್ಬಳಕೆ ಕುರಿತು ಅರಿವು; ಒಂದು ವಾರಗಳ ಕಾಲ ಅಭಿಯಾನ :

"ವಿಶ್ವ ಜಲದಿನದ ಅಂಗವಾಗಿ ಒಂದು ಒಂದು ವಾರಗಳ ಕಾಲ ಜಲ ಸಂರಕ್ಷಣೆ ಅಭಿಯಾನ ನಡೆಯಲಿದೆ. ನೀರಿನ ದುರ್ಬಳಕೆ ತಡೆಗಟ್ಟಿ, ಸದ್ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದೇ ಕಾವೇರಿ ಆರತಿ ಉದ್ದೇಶ" ಎಂದು ತಿಳಿಸಿದರು.

"ಕಳೆದ ವರ್ಷ ಉತ್ತಮ ಮಳೆಯಾದಂತೆ ಈ ವರ್ಷವೂ ಉತ್ತಮವಾಗಿ ಮಳೆಯಾಗಿ ಜನರ ಬದುಕು ಹಸನಾಗಲಿ ಎಂದು ತಲಕಾವೇರಿಯಲ್ಲಿ ಪೂಜೆ ಸಲ್ಲಿಸುತ್ತಿದ್ದೇನೆ" ಎಂದರು.

ಕಾವೇರಿ ಆರತಿಗೆ ಹಣ ಮೀಸಲು :

"ನದಿ ತೀರದಲ್ಲಿ ಕಾವೇರಿ ಆರತಿ ಆಯೋಜಿಸಲು ಈಗಾಗಲೇ ಹಣ ಮೀಸಲಿಡಲಾಗಿದೆ. ಎಷ್ಟು ದಿನಗಳಿಗೆ ಒಮ್ಮೆ ಆರತಿ ಮಾಡಬೇಕು ಎನ್ನುವ ತೀರ್ಮಾನವನ್ನು ಮುಂದೆ ತಿಳಿಸಲಾಗುವುದು. ಆರತಿ ವೇಳೆ ಕೊಡಗಿನ ಕಲಾವಿದರೂ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಮುಜರಾಯಿ, ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರಿಗೆ ಸೂಚನೆ ನೀಡಲಾಗಿದೆ" ಎಂದರು.

"ನೀರನ್ನು ದುರ್ಬಳಕೆ ಮಾಡುವುದಿಲ್ಲ, ಸುಖಾಸುಮ್ಮನೆ ಖರ್ಚು ಮಾಡುವುದಿಲ್ಲ ಎಂದು ಜನರಿಗೆ ಅರಿವು ಮೂಡಿಸಲಾಗುವುದು ಹಾಗೂ ಪ್ರತಿಜ್ಞಾವಿಧಿ ಭೋದಿಸಲಾಗುವುದು. ಇದಕ್ಕೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿಯನ್ನು ಆಯೋಜಿಸಲಾಗಿದೆ. ಜನರು ಆನ್ ಲೈನ್ ಮೂಲಕವೂ ನೀರನ್ನು ಉಳಿಸುತ್ತೇನೆ ಎಂದು ಪ್ರತಿಜ್ಞೆ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಬಹುದು. ಎಲ್ಲಾ ಸಾರ್ವಜನಿಕರು, ರಾಜಕಾರಣಿಗಳು ಇದರಲ್ಲಿ ಭಾಗವಹಿಸಬೇಕು" ಎಂದು ಕರೆ ನೀಡಿದರು.

"ಈ ಹಿಂದೆ ತಲಕಾವೇರಿಗೆ ಬಂದು ಪೂಜೆ ಸಲ್ಲಿಸಿ ಸಿದ್ದರಾಮಯ್ಯ ಅವರು, ನಾನು ಹಾಗೂ ಪಕ್ಷದ ಅನೇಕ ನಾಯಕರ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಲಾಯಿತು. ಬೆಂಗಳೂರಿಗೆ ಕಾವೇರಿ ಕುಡಿಯುವ ನೀರಿನ 5 ನೇ ಹಂತವೂ ಈಗ ಕಾರ್ಯರೂಪಕ್ಕೆ ಬಂದಿದೆ. ಇದೆಲ್ಲವೂ ಸಾಧ್ಯವಾಗಿರುವುದು ಕಾವೇರಿ ನದಿಯಿಂದ. ಕೆಆರ್ ಎಸ್ ಬಾಗಿನ ಸಮರ್ಪಣೆ ವೇಳೆ ಕಾವೇರಿ ಆರತಿ ಮಾಡುವುದಾಗಿ ನಾನು ಮಾತು ಕೊಟ್ಟಿದ್ದೆ ಅದಕ್ಕೂ ಸಿದ್ದತೆಗಳು ನಡೆಯುತ್ತಿದೆ" ಎಂದರು.

"ಆಡಳಿತ ಪಕ್ಷಕ್ಕೆ ಇಬ್ಬರು ಶಾಸಕರನ್ನು ಕೊಟ್ಟಿರುವ ಕೊಡಗಿನ ಮಹಾಜನತೆಗೆ ಸಾಷ್ಟಾಂಗ ನಮಸ್ಕಾರಗಳು. ಕೊಡಗಿನಿಂದ ಹರಿಯುವ ಕಾವೇರಿ ನೀರು ಬೆಂಗಳೂರಿನ ಜನರ ಬದುಕಿನಲ್ಲಿ ಸಂತೋಷ ಉಂಟು ಮಾಡಿದೆ.‌ ಕೊಡಗು ಇಡೀ ರಾಜ್ಯಕ್ಕೆ, ತಮಿಳುನಾಡಿಗೆ ಆಶ್ರಯ. ದಕ್ಷಿಣ ಭಾರತದ ಜೀವನದಿ.‌ ಆದ ಕಾರಣ ಮೊದಲ ಪೂಜೆ ತಲಕಾವೇರಿಯಲ್ಲಿ ಸಲ್ಲಬೇಕು. ಆದ್ದರಿಂದ ಇಲ್ಲಿಂದ ನೀರನ್ನು ತೆಗೆದುಕೊಂಡು ಹೋಗಿ ಕಾವೇರಿ ಆರತಿ ಮಾಡಲಾಗುತ್ತಿದೆ" ಎಂದು ತಿಳಿಸಿದರು.

ನಾಳೆ ತಮಿಳುನಾಡಿಗೆ ಪ್ರಯಾಣ :

"ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ವಿರೋಧಿಸಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ನಾಳೆ (ಶನಿವಾರ) ಕರೆದಿರುವ ಸಭೆಯಲ್ಲಿ ನಾನು ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ ಭಾಗವಹಿಸುತ್ತಿದ್ದೇವೆ" ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X