Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ವೈಜ್ಞಾನಿಕ ಕೃಷಿಯಿಂದ ರೈತರ ಆರ್ಥಿಕತೆ...

ವೈಜ್ಞಾನಿಕ ಕೃಷಿಯಿಂದ ರೈತರ ಆರ್ಥಿಕತೆ ವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ3 Nov 2023 4:00 PM IST
share
ವೈಜ್ಞಾನಿಕ ಕೃಷಿಯಿಂದ ರೈತರ ಆರ್ಥಿಕತೆ ವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

ಮಡಿಕೇರಿ ನ.3 : ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ ಕೃಷಿ ಯಂತ್ರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆದ್ಯತೆ ಎಂದರು.

ರಾಜ್ಯದ ಸರ್ಕಾರದ ಕೃಷಿಕರ ಅನುಕೂಲಕ್ಕಾಗಿ 600ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರಗಳನ್ನು ತೆರದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಯಂತ್ರೀಕರಣ ಪ್ರೋತ್ಸಾಹ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಹೈಟೆಕ್ ಕಟಾವು ಹಬ್ ಸ್ಥಾಪನೆಗೆ 50 ಕೋಟಿ ಮೀಸಲಿರಿಸಲಾಗಿದ್ದು 70:30ರ ಸಹಾಯಧನ ಬಂಡವಾಳ ಹೂಡಿಕೆ ಅನುಪಾತದಲ್ಲಿ ರೈತರೇ ಇದನ್ನು ಸ್ಥಾಪಿಸಿ ನಡೆಸ ಬಹುದಾಗಿದೆ ಎಂದು ಹೇಳಿದರು.

ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆ ವತಿಯಿಂದ ಖಾಸಗಿಯಾಗಿ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ತಾಂತ್ರಿಕ ಶಿಕ್ಷಣ ನಿಡುತ್ತಿರುವುದು ಹಾಗೂ ಕೃಷಿಗೆ ಪೂರಕವಾದ ಯಂತ್ರ ಮೇಳವನ್ನು ಆಯೋಜಿಸಿರುವುದು ಅಭಿನಂದನಾರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾವೇರಿ ನಮ್ಮ ನಾಡಿನ ಜೀವನದಿ. ಕೊಡಗಿನಲ್ಲಿ ಹುಟ್ಟಿ ರಾಜ್ಯದ ಕೋಟ್ಯಾಂತರ ಜನರ ಜೀವನಾಧಾರವಾಗಿ ಹರಿಯುತ್ತಿದೆ. ಈ ಬಾರಿ ಬರ ಪರಿಸ್ಥಿತಿ ತಲೆದೋರಿದ್ದು ನೀರಿನ ಹಂಚಿಕೆ ಸಮಸ್ಯೆಯೂ ಉದ್ಭವವಾಗಿದೆ. ಕೇಂದ್ರಕ್ಕೆ ಬೆಳೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರ ರೈತರ ಹಿತ ಕಾಯಲು ಬದ್ದವಾಗಿದೆ ಎಂದು ತಿಳಿಸಿದರು.

ಕೊಡಗು ವಿಭಿನ್ನ ಸಂಸ್ಕೃತಿ, ಸುಂದರ ಪ್ರಕೃತಿ ಹೊಂದಿರುವ ವೀರರ ನಾಡು, ಇಲ್ಲಿಗೆ ಭೇಟಿ ನೀಡುವುದೇ ಒಂದು ಸಂತೋಷ ಎಂದು ಅವರು ಅಭಿಮಾನದ ನುಡಿಗಳನ್ನಾಡಿದರು.

ರಾಜ್ಯದಲ್ಲಿ ನೂತನ ಸರ್ಕಾರದ ಬಂದು ನಾಲ್ಕು ತಿಂಗಳಲ್ಲಿ ನಾವು ನೀಡಿದ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ರೈತರಿಗೆ 5 ಲಕ್ಷ ರೂ. ಗಳ ವರಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ಸ್ತ್ರೀ ಶಕ್ತಿ,ಸ್ವಸಹಾಯ ಸಂಘಗಳಿಗೂ ಆರ್ಥಿಕ ನೆರವು ಒದಗಿಸುತ್ತಿದೆ ಎಂದು ವಿವರಿಸಿದರು.

ಗೃಹ ಲಕ್ಷಿ ಯೋಜನೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಬೇಕಿದೆ. ಹಾಗಾಗಿ ಪ್ರತಿ ಮನೆಯ ಸಮೀಕ್ಷೆ ನಡೆಸಿ ಬಿಟ್ಟು ಹೋದವರನ್ನು ಗುರುತಿಸಿ ಸೌಲಭ್ಯ ಒದಗಿಸಲು ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ಸಿ .ಇ.ಒಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನಣ್ಣ ಅವರ ವ್ಯಕ್ತಿತ್ವ, ಜನಪರ ಕಾಳಜಿ ಬಗ್ಗೆ ಕೃಷಿ ಸಚಿವರು ಶ್ಲಾಘಿಸಿದರು.

ಮುಖ್ಯಮಂತ್ರಿಯವರ ಕಾನೂನುಸಲಹೆಗಾರ, ಶಾಸಕ ಎ.ಎಸ್ ಪೊನ್ನಣ್ಣ ಕೃಷಿಯ ಪ್ರಾಮುಖ್ಯತೆ, ತಂತ್ರಜ್ಞಾನ ಅಳವಡಿಕೆಯ ಲಾಭ, ರಾಜ್ಯ ಸರ್ಕಾರದ ಜನಪರ ಕಾಳಜಿ ಬಗ್ಗೆ ವಿವರಿಸಿದರು.

ಇದೇ ವೇಳೆ ಸಮಾರಂಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವರನ್ನು ಸನ್ಮಾನಿಸಲಾಯಿತು.

ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಸಚಿವರ ಭೇಟಿ

ಪೊನ್ನಂಪೇಟೆಯ ಹುದ್ದೂರು ಗ್ರಾಮದಲ್ಲಿ ಕೃಷಿ ಪ್ರಶಸ್ತಿ ವಿಜೇತ ರವಿಶಂಕರ್ ಅವರ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ ನೀಡಿ ವಿವಿಧ ತಳಿಯ ಭತ್ತದ ಬೆಳೆ ವೀಕ್ಷಿಸಿದರು.

ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಿಗೆ ಆದ್ಯತೆ ಸಿಗುತ್ತಿರುವಾಗ ವಿವಿಧ ತಳಿಗಳ ಭತ್ತ ಬೆಳೆಯುತ್ತಿರುವ ರವಿಶಂಕರ್ ಮತ್ತು ಅವರ ಸಹೋದರರ ಕಾಳಜಿ ಬಗ್ಗೆ ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ, ಕೃಷಿ ನಿರ್ದೇಶಕ ಡಾ. ಜಿ.ಟಿ.ಪುತ್ರ ಮತ್ತಿತರರು ಹಾಜರಿದ್ದರು.




ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಗ್ರಾಮದಲ್ಲಿ 66/11ಕೆ.ವಿ ವಿದ್ಯುತ್ ಉಪಕೇಂದ್ರವನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X