Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ | ಬಾಳುಗೋಡು ಹಾಡಿಗೆ ಮಾನವ...

ಮಡಿಕೇರಿ | ಬಾಳುಗೋಡು ಹಾಡಿಗೆ ಮಾನವ ಹಕ್ಕು ಆಯೋಗದ ಭೇಟಿ : ಹಾಡಿ ಜನರೊಂದಿಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ31 Jan 2024 6:07 PM IST
share
ಮಡಿಕೇರಿ | ಬಾಳುಗೋಡು ಹಾಡಿಗೆ ಮಾನವ ಹಕ್ಕು ಆಯೋಗದ ಭೇಟಿ : ಹಾಡಿ ಜನರೊಂದಿಗೆ ಸಂವಾದ

ಮಡಿಕೇರಿ: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ʼಯರವʼ ಸಮುದಾಯ ವಸತಿ ರಹಿತ ಕುಟುಂಬದವರ ಹಾಡಿಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ, ಸದಸ್ಯರಾದ ಎಸ್.ಕೆ.ವಂಟಿಗೋಡಿ ಮತ್ತು ಟಿ.ಶ್ಯಾಮ್ ಭಟ್ ಭೇಟಿ ನೀಡಿ ಕುಟುಂಬದವರ ಜೊತೆ ಸಂವಾದ ನಡೆಸಿದರು.

ನಿವೇಶನ, ಮನೆ ಇಲ್ಲದಿರುವುದು, ಕುಡಿಯುವ ನೀರು, ವಿದ್ಯುತ್, ಸಾರಿಗೆ ಸಂಪರ್ಕ ಇಲ್ಲದಿರುವುದು, ಟಾರ್ಪಲ್ ಕಟ್ಟಿಕೊಂಡು ಜೀವನ ದೂಡುತ್ತಿರುವುದನ್ನು ಗಮನಿಸಿ ಬೇಸರ ವ್ಯಕ್ತಪಡಿಸಿದರು.

ಹಾಡಿ ಜನರ ಜೊತೆ ಸಂವಾದ ನಡೆಸಿದ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ ಮಕ್ಕಳನ್ನು ಕಡ್ಡಾಯವಾಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿಸುವಂತೆ ಸಲಹೆ ನೀಡಿದರು.

ಹತ್ತಿರದಲ್ಲಿಯೇ ಏಕಲವ್ಯ ಮಾದರಿ ವಸತಿ ಶಾಲೆ ಇದ್ದು, ಅಲ್ಲಿಗೆ ಸೇರ್ಪಡೆ ಮಾಡಬೇಕು. ಶಿಕ್ಷಣದಿಂದ ಯಾರೂ ಸಹ ವಂಚಿತರಾಗಬಾರದು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವಂತೆ ಅಧ್ಯಕ್ಷರು ಸಲಹೆ ನೀಡಿದರು.

ಅಲ್ಲಿನ ಯರವ ಸಮುದಾಯದ ಶೋಭಾ ಅವರು, ಜಿಲ್ಲೆಯ ವಿವಿಧ ಭಾಗದ ಲೈನ್‍ಮನೆಗಳಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದೆವು. ಸದ್ಯ ಕಳೆದ 6 ವರ್ಷಗಳಿಂದ ಬಾಳುಗೋಡು ಪೈಸಾರಿ ಜಾಗದಲ್ಲಿ ಟಾರ್ಪಲ್ ಹೊದಿಕೆ ನಿರ್ಮಾಣ ಮಾಡಿ ಚಳಿ, ಮಳೆ, ಗಾಳಿಯನ್ನು ಎದುರಿಸಿ ವಾಸ ಮಾಡುತ್ತಿದ್ದೇವೆ. ನಮಗೆ ನಿವೇಶನ ಹಕ್ಕು ಪತ್ರ ನೀಡಿಲ್ಲ, ಮನೆ ಇಲ್ಲ, ರಾತ್ರಿ ವೇಳೆಯಲ್ಲಿ ಹಾವುಗಳ ಭಯದಿಂದ ಎಚ್ಚರವಾಗಿ ನಿದ್ರೆಯಿಲ್ಲದೆ ಪ್ರತಿನಿತ್ಯ ದಿನ ಕಳೆಯುತ್ತಿದ್ದು, ಬದುಕು ಸಂಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.

ಆಹಾರ ಇಲಾಖೆಯಿಂದ 5 ಕೆ.ಜಿ.ಅಕ್ಕಿ ಸಾಲುತ್ತಿಲ್ಲ, ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಕೂಲಿ ಕೆಲಸ ಮಾಡಿದರೆ ಮಾತ್ರ ಊಟ. ಇಲ್ಲದಿದ್ದಲ್ಲಿ ಉಪವಾಸದಿಂದ ಮಲಗಬೇಕಾದ ಪರಿಸ್ಥಿತಿ ಇದೆ ಎಂದು ನೋವು ತೋಡಿಕೊಂಡರು.

ಕುಡಿಯುವ ನೀರನ್ನು ಒಂದು ಕಿ.ಮೀ. ದೂರದಿಂದ ಹೊತ್ತುಕೊಂಡು ಬರುತ್ತಿದ್ದೇವೆ. ವಿದ್ಯುತ್ ಸಂಪರ್ಕ ಇಲ್ಲದೆ ಪರಿತಪಿಸುತ್ತಿದ್ದೇವೆ. ಕೂಡಲೇ ಕುಡಿಯುವ ನೀರು ಒದಗಿಸಬೇಕು. ಹಾಗೆಯೇ ನಿವೇಶನ ಹಕ್ಕುಪತ್ರ ದೊರೆಯಬೇಕು. ಜೊತೆಗೆ ಮನೆ ನಿರ್ಮಿಸಿಕೊಡಬೇಕು ಎಂದು ಮಾನವ ಹಕ್ಕು ಆಯೋಗದ ಅಧ್ಯಕ್ಷರಲ್ಲಿ ಯರವ ಕುಟುಂಬಸ್ಥರು ಮನವಿ ಮಾಡಿದರು.

ಅಹವಾಲು ಸ್ವೀಕರಿಸುವುದಕ್ಕೂ ಮೊದಲು ಮಾತನಾಡಿದ ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಎಲ್.ನಾರಾಯಣಸ್ವಾಮಿ, ಬಾಳುಗೋಡು ಯರವ ಕುಟುಂಬದವರು ವಾಸ ಮಾಡುತ್ತಿರುವುದನ್ನು ಗಮನಿಸಿ ಒಂದು ರೀತಿ ವಿಚಲಿತನಾದೆ ಎಂದು ಬೇಸರ ವ್ಯಕ್ತಪಡಿಸಿದರು.

ಭಾರತ ದೇಶ ಚಂದ್ರಯಾನ ಉಡಾವಣೆ ಮಾಡಿ ಯಶಸ್ಸುಗಳಿಸಿದೆ. ವಿಶ್ವದ ಜಿಡಿಪಿಯಲ್ಲಿ 10 ರೊಳಗಿನ ಸ್ಥಾನವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆದರೆ ವಾಸಕ್ಕೆ ಯೋಗ್ಯವಾದ ನಿವೇಶನ, ಮನೆ, ವಿದ್ಯುತ್ ಹಾಗೂ ಸಾರಿಗೆ ಸಂಪರ್ಕ ಹೊಂದದೆ ಇರುವ ಎಷ್ಟೋ ಕಡುಬಡ ಕುಟುಂಬಗಳಿದ್ದು, ಭಾರತ ವಿಕಾಸ ಹೊಂದಿದೆಯೇ ಎಂಬುದನ್ನು ಪ್ರತಿಯೊಬ್ಬರೂ ಅವಲೋಕನ ಮಾಡಬೇಕಿದೆ ಎಂದರು.

ಆದಿವಾಸಿ ಜನರಿಗೆ ಬೇಕಿರುವ ನಿವೇಶನ, ಮನೆ, ದೀಪ, ಹತ್ತಿರದಲ್ಲಿ ಅಂಗನವಾಡಿ, ಶಾಲೆ, ಇಂತಹ ಕನಿಷ್ಠ ಮೂಲ ಸೌಲಭ್ಯ ಇಲ್ಲದಿರುವುದು ನಮ್ಮ ವ್ಯವಸ್ಥೆ ಯಾವ ಮಟ್ಟಕ್ಕೆ ಇದೆ ಎಂಬುದನ್ನು ಪ್ರತಿಯೊಬ್ಬರೂ ಆತ್ಮವಲೋಕನ ಮಾಡಬೇಕಿದೆ ಎಂದು ನುಡಿದರು.

ಬಾಳುಗೋಡು ಯರವ ಹಾಡಿಯ ಜನರಿಗೆ ಕನಿಷ್ಠ ಮೂಲ ಸೌಲಭ್ಯವನ್ನಾದರೂ ಕಲ್ಪಿಸಬೇಕು. ಸರ್ಕಾರದ ವ್ಯವಸ್ಥೆಯಲ್ಲಿರುವವರಿಗೆ ಎಲ್ಲಾ ರೀತಿಯ ಸೌಲಭ್ಯವನ್ನು ಕಲ್ಪಿಸುತ್ತಿದೆ. ಆದರೆ ಇಂತಹ ವಸತಿರಹಿತ ನಿರ್ಗತಿಕ ಕುಟುಂಬಗಳಿಗೆ ಸೌಲಭ್ಯ ಇಲ್ಲದಿರುವುದು ಬೇಸರ ತರಿಸುತ್ತದೆ. ಒಂದು ಪೈಸೆಯೂ ಸಹ ಅವರ ಜೋಬಲ್ಲಿ ಇರುವುದಿಲ್ಲ. ಇಂತಹ ನಿರ್ಗತಿಕರಿಗೆ ಸೌಲಭ್ಯ ಕಲ್ಪಿಸುವುದು ಪ್ರಥಮ ಆದ್ಯತೆ ಆಗಬೇಕು ಎಂದರು.

ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮಾನವ ಹಕ್ಕು ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ, ಇಂದಿನಿಂದಲೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತದೆ. ಕಂದಾಯ ಇಲಾಖೆಯಿಂದ ಜಾಗವನ್ನು ತಾಲ್ಲೂಕು ಪಂಚಾಯಿತಿಗೆ ಒದಗಿಸಲಾಗಿದ್ದು, ಲೇಔಟ್(ಭೂ ನಕಾಶೆ) ತಯಾರಾದ ನಂತರ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾಗುತ್ತದೆ. ಈ ಕೆಲಸಗಳು ಇನ್ನು 20 ದಿನದಲ್ಲಿ ಆಗಬೇಕಿದೆ. ಇಲ್ಲಿನ ಸ್ಥಿತಿಗತಿ ಹಾಗೂ ಪ್ರಗತಿ ಸಂಬಂಧ ಆಗಾಗ ಮಾಹಿತಿ ಪಡೆಯಲಾಗುತ್ತದೆ ಎಂದು ಹೇಳಿದರು.

ಐಟಿಡಿಪಿ ಇಲಾಖೆಯ ಅಧಿಕಾರಿ ಹೊನ್ನೇಗೌಡ ಅವರು ಮಕ್ಕಳ ವಿಧ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಗೆ ಸೇರ್ಪಡೆಗೆ ಕ್ರಮವಹಿಸಲಾಗುವುದು. ಯರವ ಸಮುದಾಯದವರಿಗೆ ಮನೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮಾನವ ಹಕ್ಕು ಆಯೋಗಕ್ಕೆ ತಿಳಿಸಿದರು.

ಪ್ರಮುಖರಾದ ಗಪ್ಪು, ಕುಣಿಗಲ್ ನರಸಿಂಹ ಮೂರ್ತಿ ಮತ್ತು ಕುಣಿಗಲ್ ನಾಗರಾಜ್ ಅವರು ಇಲ್ಲಿನ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶೀಲ್ದಾರ್ ರಾಮಚಂದ್ರ, ಪೊಲೀಸ್ ಅಧಿಕಾರಿಗಳು, ಯರವ, ಪಣಿಯ ಆದಿವಾಸಿ ಜನರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X