Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕಟ್ಟೆಮಾಡು ದೇವಾಲಯ ಪ್ರಕರಣ : ಶಾಂತಿಸಭೆ...

ಕಟ್ಟೆಮಾಡು ದೇವಾಲಯ ಪ್ರಕರಣ : ಶಾಂತಿಸಭೆ ನಡೆಸಿದ ಕೊಡಗು ಜಿಲ್ಲಾಡಳಿತ

ವಾರ್ತಾಭಾರತಿವಾರ್ತಾಭಾರತಿ30 Dec 2024 8:09 PM IST
share
ಕಟ್ಟೆಮಾಡು ದೇವಾಲಯ ಪ್ರಕರಣ : ಶಾಂತಿಸಭೆ ನಡೆಸಿದ ಕೊಡಗು ಜಿಲ್ಲಾಡಳಿತ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡು ಜನಾಂಗಗಳ ನಡುವೆ ನಡೆದ ಸಂಘರ್ಷವನ್ನು ಶಮನ ಮಾಡಲು ಕೊಡಗು ಜಿಲ್ಲಾಡಳಿತ ಇಂದು(ಸೋಮವಾರ) ಉಭಯ ಕಡೆಗಳ ಶಾಂತಿ ಸಭೆ ನಡೆಸಿತು.

ಸುಮಾರು ಮೂರು ಗಂಟೆಗಳ ಸಭೆಯಲ್ಲಿ ಕೊಡವ ಸಮಾಜಗಳ ಒಕ್ಕೂಟ, ಗೌಡ ಸಮಾಜಗಳ ಒಕ್ಕೂಟ ಹಾಗೂ ಶ್ರೀ ಮಹಾ ಮೃತ್ಯಂಜಯ ದೇವಾಲಯ ಆಡಳಿತ ಮಂಡಳಿಯ ಅಭಿಪ್ರಾಯಗಳನ್ನು ಜಿಲ್ಲಾಡಳಿತ ಆಲಿಸಿತು.

ಸಭೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ದೇವಸ್ಥಾನದ ಬೈಲಾದಲ್ಲಿರುವ ಗೊಂದಲ ನಿವಾರಣೆಗಾಗಿ ದೇವಾಲಯದ ಆಡಳಿತ ಮಂಡಳಿಯ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಮುಂದಿನ ಸೋಮವಾರದವರೆಗೆ ಕಾಲಾವಕಾಶ ಬೇಕೆಂದು ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು ಕೋರಿಕೊಂಡಿದ್ದಾರೆ. ಈ ಹಿನ್ನೆಲೆ ಅಂತಿಮ ನಿರ್ಧಾರಕ್ಕೆ ಬರಲು ಏಳು ದಿನಗಳ ಕಾಲಾವಕಾಶ ನಿಡಲಾಗಿದೆ ಎಂದರು.

ಆಡಳಿತ ಮಂಡಳಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಏಳು ದಿನಗಳ ಕಾಲಾವಕಾಶ ಕೋರಿಕೊಂಡ ಹಿನ್ನೆಲೆಯಲ್ಲಿ ಎಲ್ಲರೂ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಕೊಡಗು ಸರ್ವ ಜನಾಂಗಗಳ ಶಾಂತಿಯ ತೋಟವಾಗಿದ್ದು, ಸಭೆಯಲ್ಲಿ ಇಂದಿನ ತೀರ್ಮಾನವನ್ನು ಎಲ್ಲರೂ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಜಿಲ್ಲಾಡಳಿತ ಕೂಡ ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಬದ್ಧವಾಗಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ 163 ಸೆಕ್ಷನ್‍ನಡಿ ಜ.2ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ. ಅಗತ್ಯ ಬಿದ್ದಲ್ಲಿ ಇದನ್ನು ಮುಂದುವರಿಸುವ ಕುರಿತು ಚಿಂತಿಸಲಾಗುವುದು. ಮುಂದಿನ ಸೋಮವಾರದವರೆಗೆ ದೇವಾಲಯದಲ್ಲಿ ಎಂದಿನಂತೆ ಪೂಜೆಗಳು ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಕಾನೂನು ಉಲ್ಲಂಘಿಸಲು ಅವಕಾಶವಿಲ್ಲ :

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ, ದೇವಾಲಯ ಆಡಳಿತ ಮಂಡಳಿಯ ಕೋರಿಕೆಯಂತೆ ಜಿಲ್ಲಾಡಳಿತ ಒಂದು ವಾರದ ಕಾಲಾವಕಾಶ ನೀಡಿದೆ. ನಂತರ ನಡೆಯುವ ಸಭೆಯಲ್ಲಿ ಒಮ್ಮತದ ನಿರ್ಧಾರವಾದರೆ ಸ್ವಾಗತಾರ್ಹ. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದು ಅಥವಾ ದೇವಾಲಯಕ್ಕೆ ನುಗ್ಗಲು ಮುಂದಾಗುವುದಕ್ಕೆ ಪೊಲೀಸ್ ಇಲಾಖೆ ಅವಕಾಶ ನಿಡುವುದಿಲ್ಲ. ಉದ್ದೇಶ ಪೂರ್ವಕವಾಗಿ ಶಾಂತಿಭಂಗ ಮಾಡಲು ಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದರು.

ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರ ಒಪ್ಪಿಗೆಯಾಗದಿದ್ದಲ್ಲಿ ನ್ಯಾಯಾಲಯಕ್ಕೆ ಹೋಗಲು ಅವಕಾಶವಿದೆ, ಅಲ್ಲಿ ನ್ಯಾಯವನ್ನು ಪಡೆಯಬಹುದಾಗಿದೆ. ಅದನ್ನು ಬಿಟ್ಟು ಶಾಂತಿಭಂಗ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸೂಕ್ತ ನಿರ್ಧಾರ ಕೈಗೊಳ್ಳಲು ಒಂದು ವಾರದ ಕಾಲಾವಕಾಶವನ್ನು ಜಿಲ್ಲಾಡಳಿತ ನೀಡಿರುವುದರಿಂದ ಮತ್ತು ಸಭೆಯಲ್ಲಿ ಇದ್ದವರು ಇದಕ್ಕೆ ಸಮ್ಮತಿ ಸೂಚಿಸಿರುವುದರಿಂದ ಪ್ರತಿಭಟನೆಗಳನ್ನು ವಾಪಾಸು ಪಡೆಯಲಿದ್ದಾರೆ ಎನ್ನುವ ವಿಶ್ವಾಸವಿದೆಯೆಂದು ಎಸ್‍ಪಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X