Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. Kodagu | ತಡಿಯಂಡಮೋಳ್ ಬೆಟ್ಟಕ್ಕೆ...

Kodagu | ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ ಮಹಿಳೆ ನಾಪತ್ತೆಯಾಗಿ ಮೂರು ದಿನ ಕಳೆದರೂ ಸಿಗದ ಸುಳಿವು

ವಾರ್ತಾಭಾರತಿವಾರ್ತಾಭಾರತಿ4 April 2026 10:22 PM IST
share
Kodagu | ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ ಮಹಿಳೆ ನಾಪತ್ತೆಯಾಗಿ ಮೂರು ದಿನ ಕಳೆದರೂ ಸಿಗದ ಸುಳಿವು
ಶೋಧ ಕಾರ್ಯಕ್ಕೆ ನಕ್ಸಲ್ ನಿಗ್ರಹ ಪಡೆಯ ನೆರವು

ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ ಮಹಿಳೆಯೊಬ್ಬರು ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಯಾವುದೇ ಸುಳಿವು ದೊರಕದ ಹಿನ್ನೆಲೆಯಲ್ಲಿ ಇದೀಗ ಶೋಧ ಕಾರ್ಯಕ್ಕೆ ನಕ್ಸಲ್ ನಿಗ್ರಹ ಪಡೆ(ಎಎನ್‌ಎಫ್)ಯ ನೆರವನ್ನು ಪಡೆದುಕೊಳ್ಳಲಾಗಿದೆ.

ಕೇರಳ ಮೂಲದ ಶರಣ್ಯ(36) ಎಂಬವರು ಇತರ ಚಾರಣಿಗರೊಂದಿಗೆ ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ತೆರಳಿದ್ದರು. ಉಳಿದವರು ಹಿಂದಿರುಗಿದರಾದರು, ಶರಣ್ಯ ಹಿಂದಿರುಗಿರಲಿಲ್ಲ. ಈ ಬಗ್ಗೆ ತಕ್ಷಣವೇ ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಮತ್ತು ಗ್ರಾಮಸ್ಥರು ಬೆಟ್ಟದ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಅಂದು ರಾತ್ರಿ ತೀವ್ರ ಶೋಧ ಕಾರ್ಯ ನಡೆಸಿದ್ದರೂ ಅವರ ಪತ್ತೆಯಾಗಿರಲಿಲ್ಲ.

ಶುಕ್ರವಾರದಂದು ಸ್ಥಳೀಯರನ್ನು ಒಳಗೊಂಡ ಪೊಲೀಸರ ಎರಡು ತಂಡ ಮತ್ತು ಅರಣ್ಯ ಇಲಾಖೆಯ ಮೂರು ತಂಡಗಳು ತಡಿಯಂಡಮೋಳ್ ಬೆಟ್ಟದ ಆಸುಪಾಸಿನ ಅರಣ್ಯದ ಕಡಿದಾದ ಪ್ರದೇಶಗಳಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದರೂ ಸುಳಿವು ದೊರಕಿಲ್ಲ.

ಡ್ರೋನ್ ಬಳಕೆ: ನಾಪತ್ತೆಯಾಗಿರುವ ಶರಣ್ಯ ಅವರು ಬೆಟ್ಟದ ಯಾವುದೇ ಕಡಿದಾದ ಪ್ರದೇಶಗಳಲ್ಲಿ ಸಿಲುಕಿರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಪತ್ತೆಗಾಗಿ ಡ್ರೋನ್ ಮತ್ತು ಶ್ವಾನದಳದ ನೆರವನ್ನು ಪಡೆದು ಶೋಧ ಕಾರ್ಯವನ್ನು ನಡೆಸಲಾಗಿದೆ. ಎರಡು ದಿನಗಳ ಶೋಧ ಕಾರ್ಯ ಫಲಪ್ರದವಾಗದ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಕ್ಕೆ ಶನಿವಾರದಿಂದ ನಕ್ಸಲ್ ನಿಗ್ರಹ ಪಡೆಯ ನೆರವನ್ನು ಪಡೆಯಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ತಿಳಿಸಿದ್ದಾರೆ.

ಕುಟುಂಬಸ್ಥರಿಗೆ ಮಾಹಿತಿ: ಕೇರಳದ ಕೊಚ್ಚಿನ್‌ನಲ್ಲಿರುವ ಶರಣ್ಯ ಅವರ ಕುಟುಂಬಕ್ಕೆ ನಡೆದ ಘಟನೆಯ ಮಾಹಿತಿಯನ್ನು ನೀಡಲಾಗಿದ್ದು, ಶರಣ್ಯ ಅವರ ಅಣ್ಣ ಶ್ಯಾಮ್ ಸ್ಥಳಕ್ಕೆ ಆಗಮಿಸಿದ್ದಾರೆ.

ತಡಿಯಂಡಮೋಳ್ ಬೆಟ್ಟದಲ್ಲಿ ಮಹಿಳೆ ನಾಪತ್ತೆಯಾದ ಸಂದರ್ಭದಿಂದಲೇ ಕಕ್ಕಬ್ಬೆ ಯವಕಪಾಡಿಯ ಕುಡಿಯರ ಮುತ್ತಪ್ಪ, ಗ್ರಾಮಸ್ಥರು, ಪೊಲೀಸರು ಮತ್ತು ಅರಣ್ಯ ಇಲಾಖೆಯವರು ಶೋಧ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.

Tags

trekkingKodagu‌
share
ವಾರ್ತಾಭಾರತಿ
ವಾರ್ತಾಭಾರತಿ
Next Story
X