ಕೊಡಗು : ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ದೇವರಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ತೋಟದ ಕಾರ್ಮಿಕ ಅಣ್ಣಯ್ಯ (41) ಎಂದು ಗುರುತಿಸಲಾಗಿದೆ. . ತೋಟಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಎದುರಾದ ಕಾಡಾನೆ ದಾಳಿ ಮಾಡಿದೆ ಎನ್ನಲಾಗಿದೆ. ಕಿರಿದಾದ ರಸ್ತೆಯಲ್ಲಿ ಅಣ್ಣಯ್ಯ ಓಡಲು ಯತ್ನಿಸಿದರಾದರೂ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.
ಗ್ರಾಮಸ್ಥರ ಸಹಕಾರದಿಂದ ಅರಣ್ಯ ಸಿಬ್ಬಂದಿಗಳು ಕಾಡಾನೆಯನ್ನು ಕಾಡಿಗಟ್ಟಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.
ಕಾಡಾನೆ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Next Story





