'ವಾರ್ತಾಭಾರತಿ' ವಿಶೇಷ ವರದಿಗಾರ ಇಸ್ಮಾಯೀಲ್ ಕಂಡಕರೆಗೆ ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಗೆ 'ವಾರ್ತಾಭಾರತಿ' ವಿಶೇಷ ವರದಿಗಾರ ಇಸ್ಮಾಯೀಲ್ ಕಂಡಕರೆ ಆಯ್ಕೆಯಾಗಿದ್ದಾರೆ.
ಕೋವರ್ ಕೊಲ್ಲಿ ಇಂದ್ರೇಶ್ ಮತ್ತು ಕುಟುಂಬವರ್ಗ ತಮ್ಮ ತಂದೆ ಬಿ.ವಿ.ಚಂದ್ರಶೇಖರ್ ಹಾಗೂ ತಾಯಿ ಪುಷ್ಪಲತಾರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ 'ಶಕ್ತಿ ಪತ್ರಿಕೆ'ಯಲ್ಲಿ ಪ್ರಕಟವಾದ ಕೆ.ಎಂ.ಇಸ್ಮಾಯೀಲ್ ಕಂಡಕರೆ 'ಸೋರುತಿಹುದು ಮೀನಾಳ ಮನೆಯ ಮಾಳಿಗೆ' ಎಂಬ ವಿಶೇಷ ವರದಿ ಆಯ್ಕೆಯಾಗಿದೆ.
ಎಚ್.ಜೆ ರಾಕೇಶ್ ಅತ್ಯುತ್ತಮ ಪರಿಣಾಮಕಾರಿ ವರದಿ ಹಾಗೂ ಆನಂದ್ ಅತ್ಯುತಮ ಪರಿಸರ ವರದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಯು 5 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ. ಜೂ.8ರಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಎಂ.ಕೆ.ಆದರ್ಶ್ ತಿಳಿಸಿದ್ದಾರೆ.
Next Story