Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ | ಮಿನಿ ಒಲಿಂಪಿಕ್ಸ್...

ಮಡಿಕೇರಿ | ಮಿನಿ ಒಲಿಂಪಿಕ್ಸ್ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ : ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ

ವಾರ್ತಾಭಾರತಿವಾರ್ತಾಭಾರತಿ13 Nov 2024 12:12 PM IST
share
ಮಡಿಕೇರಿ | ಮಿನಿ ಒಲಿಂಪಿಕ್ಸ್ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ : ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ

ಮಡಿಕೇರಿ: ಕೊಡಗು ಜಿಲ್ಲೆಯ ಯುವ ಫುಟ್ಬಾಲ್ ಆಟಗಾರರಿಗೆ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ದೊರೆತಿದ್ದು, ಹೆಮ್ಮೆಯ ವಿಷಯವಾಗಿದೆ. ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಂಡರ್ 14 ಬಾಲಕ ಮತ್ತು ಬಾಲಕಿಯರ ತಂಡದ ಆಟಗಾರರು ಮಿನಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಪೋಷಕರಾದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರು ಕರೆ ನೀಡಿದ್ದಾರೆ.

ಇದೇ ನ.15 ರಿಂದ 18ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟಕ್ಕೆ, ಅಮ್ಮತ್ತಿಯ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮೈದಾನದಲ್ಲಿ ನಡೆದ,ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕೊಡಗು ತಂಡದ ಬಾಲಕ ಮತ್ತು ಬಾಲಕಿಯರ ತಂಡದ ಆಟಗಾರರಿಗೆ ಫುಟ್ಬಾಲ್ ಕಿಟ್ ವಿತರಿಸಿ ಅವರು ಮಾತನಾಡಿದರು.

ʼಕೊಡಗಿನ ಗ್ರಾಮೀಣ ಪ್ರತಿಭೆಗಳಿಗೆ ಬೆಂಗಳೂರಿನ ಆಡಲು ಅವಕಾಶ ದೊರೆತಿರುವುದು ಒಳ್ಳೆಯ ಅವಕಾಶವಾಗಿದ್ದು,ಗ್ರಾಮೀಣ ಭಾಗದಲ್ಲಿ ಆಡಿ ಬೆಳೆದಿರುವ ಯುವ ಆಟಗಾರರಿಗೆ ತಮ್ಮ ಆಟದ ಕೌಶಲಗಳನ್ನು ಬೆಳೆಸಲು ಮಿನಿ ಒಲಿಂಪಿಕ್ಸ್ ಉತ್ತಮ ವೇದಿಕೆಯಾಗಿದೆ.ಕೊಡಗು ತಂಡವನ್ನು ಪ್ರತಿನಿಧಿಸುತ್ತಿರುವ ಆಟಗಾರರು ಉತ್ತಮ ಪ್ರದರ್ಶನ ತೋರುವುದರ ಮೂಲಕ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆ ಮತ್ತು ಕೊಡಗು ಜಿಲ್ಲೆಗೆ ಉತ್ತಮ ಹೆಸರು ತರಬೇಕುʼ ಎಂದು ಮೋಹನ್ ಅಯ್ಯಪ್ಪ ಹೇಳಿದರು.

ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷ ಮತ್ತು ಮಿನಿ ಒಲಿಂಪಿಕ್ಸ್ ಕೊಡಗು ಬಾಲಕರ ತಂಡದ ತರಬೇತುದಾರ ಕ್ರಿಸ್ಟೋಫರ್ ಮಾತನಾಡಿ,ʼಕೊಡಗು ಜಿಲ್ಲೆಯಲ್ಲಿ ಬೆಳೆಯುತ್ತಿರುವ ಯುವ ಫುಟ್ಬಾಲ್ ಆಟಗಾರರನ್ನು ಹುಡುಕಿ ಅವರಿಗೆ ಉತ್ತಮ ವೇದಿಕೆಯನ್ನು ಮಾಡಿಕೊಡಲು ಜಿಲ್ಲಾ ಫುಟ್ಬಾಲ್ ಸಂಸ್ಥೆ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಇದೀಗ ಮಿನಿ ಒಲಿಂಪಿಕ್ಸ್ ನಲ್ಲಿ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಬಾಲಕ ಮತ್ತು ಬಾಲಕಿಯರ ತಂಡ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಕಳೆದ ಮೂರು ತಿಂಗಳುಗಳಿಂದ ‌ನಿರಂತರವಾಗಿ ಅಭ್ಯಾಸ ಮಾಡುತ್ತಿರುವ ಕೊಡಗಿನ ತಂಡದ ಆಟಗಾರರು ಬೆಂಗಳೂರಿನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ಹೊಂದಿದ್ದೇವೆ. ಅದಲ್ಲದೇ ಆಟಗಾರರು ಪೋಷಕರು ಕೂಡ ನಮ್ಮೊಂದಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿರುವುದು ಶ್ಲಾಘನೀಯ ವಿಷಯ ಎಂದು ಕ್ರಿಸ್ಟೋಫರ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಿಲ್ಲಾ ಫುಟ್ಬಾಲ್ ‌ಸಂಸ್ಥೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕೊಡಗಿನ ಅಂಡರ್ 14 ಬಾಲಕ ಮತ್ತು ಬಾಲಕಿಯರ ತಂಡಕ್ಕೆ ಮಿನಿ ಒಲಿಂಪಿಕ್ಸ್ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯನ್ನು ಮಿನಿ ಒಲಿಂಪಿಕ್ಸ್ ನಲ್ಲಿ ಪ್ರತಿನಿಧಿಸುತ್ತಿರುವ ಆಟಗಾರರಿಗೆ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಸಂಪೂರ್ಣ ಕಿಟ್ ಮತ್ತು ಎಲ್ಲಾ ವ್ಯವಸ್ಥೆಗಳನ್ನು ಉಚಿತವಾಗಿ ಮಾಡಲಾಗಿದೆ ಎಂದರು.

ಕಾರ್ಯಕ್ರಮವನ್ನು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಪಿ.ಎ ನಾಗೇಶ್ ನಿರೂಪಿಸಿ, ಸದಸ್ಯ ಮಹೇಂದ್ರ ಸ್ವಾಗತಿಸಿದರು.

ಈ ಸಂದರ್ಭ ರಾಜ್ಯ ಫುಟ್ಬಾಲ್ ಸಂಸ್ಥೆಯ ಸದಸ್ಯ ಜಗದೀಶ್ ಕೊಡಗರಹಳ್ಳಿ, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಖಜಾಂಜಿ ದೀಪು ಮಾಚಯ್ಯ, ರಾಜ್ಯ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರ ಇಸ್ಮಾಯಿಲ್ ಕಂಡಕರೆ, ವಿಜು ಅಮ್ಮತ್ತಿ ಮತ್ತು ಲೋಹಿತ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X