Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ | ಹಾಡಹಗಲೇ ಕಾರು ಕಳ್ಳತನ :...

ಮಡಿಕೇರಿ | ಹಾಡಹಗಲೇ ಕಾರು ಕಳ್ಳತನ : ಕೆಲವೇ ಗಂಟೆಗಳಲ್ಲಿ ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Jan 2025 8:53 PM IST
share
ಮಡಿಕೇರಿ | ಹಾಡಹಗಲೇ ಕಾರು ಕಳ್ಳತನ : ಕೆಲವೇ ಗಂಟೆಗಳಲ್ಲಿ ಆರೋಪಿಯ ಬಂಧನ

ಮಡಿಕೇರಿ : ಮಡಿಕೇರಿ ನಗರದ ಹೃದಯ ಭಾಗದಲ್ಲಿ ಹಾಡಹಗಲೇ ಕಾರು ಕಳ್ಳತನ ಮಾಡಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾರಿನಲ್ಲಿದ್ದ ಜಿಪಿಎಸ್ ಆಧಾರದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮಡಿಕೇರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದರು.

ನಾಪೋಕ್ಲು ನಿವಾಸಿ ರಫೀಕ್(30) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. ಅಂಬೆಕಲ್ ನವೀನ್ ಕುಶಾಲಪ್ಪ ಎಂಬವರು ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆ ಕಡೆಗೆ ತೆರಳುವ ಮಾರ್ಗದ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ತಮ್ಮ ಫೋಟೋ ಸ್ಟುಡಿಯೋಗೆ ತೆರಳಿದ್ದರು.

ಮರಳಿ ಬಂದ ಸಂದರ್ಭ ಪಾರ್ಕಿಂಗ್ ಮಾಡಿದ ಸ್ಥಳದಲ್ಲಿ ಕಾರು ಇರಲಿಲ್ಲ. ಇದರಿಂದ ಆತಂಕಗೊಂಡ ಅಂಬೆಕಲ್ ನವೀನ್ ಕುಶಾಲಪ್ಪ ಅವರು ಅಲ್ಲಿದ್ದ ಸಿ.ಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ವ್ಯಕ್ತಿಯೊಬ್ಬ ನೇರವಾಗಿ ಕಾರು ಬಳಿ ಬಂದು ತನ್ನದೇ ಕಾರು ಎಂಬಂತೆ ಬಾಗಿಲು ತೆರೆದು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ.

ಕಾರು ಕಳವು ಕುರಿತು ನವೀನ್ ಕುಶಾಲಪ್ಪ ಅವರು ತಕ್ಷಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದರು. ತನಿಖೆ ಕೈಗೊಂಡ ಮಡಿಕೇರಿ ಪೊಲೀಸರು ಕಾರಿನಲ್ಲಿ ಅಳವಡಿಸಿದ್ದ ಜಿಪಿಎಸ್ ತಂತ್ರಜ್ಞಾನದ ಆಧಾರದಲ್ಲಿ ಕಾರಿನ ಲೊಕೇಶನ್ ಪತ್ತೆ ಹಚ್ಚಿದರು. ನಂತರ ಸ್ಥಳಕ್ಕೆ ತೆರಳಿ ಕಾರು ಸಹಿತ ಆರೋಪಿಯನ್ನು ಬಂಧಿಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Tags

Madikeritheft
share
ವಾರ್ತಾಭಾರತಿ
ವಾರ್ತಾಭಾರತಿ
Next Story
X