ಮಡಿಕೇರಿ | ಕಟ್ಟೆಮಾಡು ದೇವಾಲಯದ ಅರ್ಚಕರ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ | PTI
ಮಡಿಕೇರಿ : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿರಾಜಪೇಟೆಯ ನಾಲ್ಕೇರಿ ಗ್ರಾಮದ ಎಂ.ಬಿ.ಅಯ್ಯಪ್ಪ ಆನಿಲ್ (46) ಎಂ.ಪಿ.ಕಾಳಪ್ಪ (51) ಟಿ.ಎಲ್.ಸುಬ್ಬಯ್ಯ ಸುನಿ (47) ಎಂಬುವವರು ಬಂಧಿತ ಆರೋಪಿಗಳು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಡಿಕೇರಿ ಡಿವೈಎಸ್ಪಿ ಸೂರಜ್.ಪಿ.ಎ, ಗ್ರಾಮಾಂತರ ಠಾಣೆಯ ಅಧಿಕಾರಿಗಳಾದ ಚಂದ್ರಶೇಖರ್ ಹೆಚ್.ವಿ, ಶ್ರೀನಿವಾಸ, ಎನ್.ಟಿ.ತಮ್ಮಯ್ಯ, ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಹಾಗೂ ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು, ಡಿಸಿಆರ್ಬಿ ಸಿಬ್ಬಂದಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿತು. ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
Next Story





