Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. Madikeri | ಹಾರಂಗಿ ಹಿನ್ನೀರಿನಲ್ಲಿ...

Madikeri | ಹಾರಂಗಿ ಹಿನ್ನೀರಿನಲ್ಲಿ ಸ್ಪೀಡ್ ಬೋಟ್ ಪಲ್ಟಿ : ಗುಜರಾತ್ ಮೂಲದ ದಂಪತಿ ಮೃತ್ಯು, ಇಬ್ಬರು ಮಕ್ಕಳ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ13 Nov 2026 10:38 PM IST
share
Madikeri | ಹಾರಂಗಿ ಹಿನ್ನೀರಿನಲ್ಲಿ ಸ್ಪೀಡ್ ಬೋಟ್ ಪಲ್ಟಿ : ಗುಜರಾತ್ ಮೂಲದ ದಂಪತಿ ಮೃತ್ಯು, ಇಬ್ಬರು ಮಕ್ಕಳ ರಕ್ಷಣೆ

ಮಡಿಕೇರಿ : ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಹಿನ್ನೀರಿನಲ್ಲಿ ಸ್ಪೀಡ್ ಬೋಟ್ ಮಗುಚಿದ ಪರಿಣಾಮ ಗುಜರಾತ್ ಮೂಲದ ದಂಪತಿ ಮೃತಪಟ್ಟು, ಇಬ್ಬರು ಮಕ್ಕಳು ಅಪಾಯದಿಂದ ಪಾರಾದ ಘಟನೆ ಶುಕ್ರವಾರ ವರದಿಯಾಗಿದೆ.

ಮೃತರನ್ನು ಗುಜರಾತ್ ರಾಜ್ಯದ ಸೂರತ್‌ನ ಧರ್ಮೇಶ್ ನಾಯಕ್(50) ಹಾಗೂ ಅವರ ಪತ್ನಿ ನಿಮ್ಮಿ (47) ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ಕುಶಾಲನಗರಕ್ಕೆ ಬಂದಿದ್ದ ಕುಟುಂಬ ಸಂಜೆ ವೇಳೆ ಹಾರಂಗಿ ಅಣೆಕಟ್ಟೆ ಸಮೀಪದ ಆನೆ ಕ್ಯಾಂಪ್ ಬಳಿಯ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್‌ನ ಸ್ಪೀಡ್ ಬೋಟ್‌ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳಾದ ಅವಾಂಶಿ (24) ಮತ್ತು ಪುತ್ರ ಅನುಜಾ (22) ಜಾಲಿ ರೈಡ್ ತೆರಳಿದ್ದರು. ಈ ವೇಳೆ ಸ್ಪೀಡ್ ಬೋಟ್ ಅನ್ನು ಚಾಲಕ ತಿರುಗಿಸುವ ಸಂದರ್ಭ ಬೋಟ್ ಪಲ್ಟಿಯಾಗಿದ್ದು, ದಂಪತಿ ಸಹಿತ ಮಕ್ಕಳೂ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಈ ವೇಳೆ ಬೋಟ್‌ನ ರುಡ್ಡರ್(ದಿಕ್ಕು ತಿರುಗಿಸುವ ಹಲಗೆ) ಅಥವಾ ಬೋಟ್‌ನ ತಳಭಾಗ ಬಡಿದು ದಂಪತಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ನೀರಿನಲ್ಲಿ ತೇಲುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಡಿಎಫ್‌ಒ ಅಭಿಷೇಕ್, ಕುಶಾಲನಗರ ಆರ್‌ಎಫ್‌ಒ ರಕ್ಷಿತ್ ಮತ್ತು ಸಿಬ್ಬಂದಿ, ಕುಶಾಲನಗರ ಡಿವೈಎಸ್ಪಿ ಚಂದ್ರಶೇಖರ್, ವೃತ್ತ ನಿರೀಕ್ಷಕ ದಿನೇಶ್, ಗ್ರಾಮಾಂತರ ಠಾಣೆ ಎಸ್ಸೈ ರಾಮಚಂದ್ರ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ದೌಡಾಯಿಸಿದ್ದಾರೆ.

ಮೃತದೇಹಗಳನ್ನು ನೀರಿನಿಂದ ಮೇಲೆತ್ತಿ ಸ್ಥಳದಲ್ಲಿ ಮಹಜರು ನಡೆಸಿ ಕುಶಾಲನಗರ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ಮೃತರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ರವಾನಿಸಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಬೋಟ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೋಟ್ ಚಾಲಕನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂದರ್ಭ ಬೋಟ್ ರೈಡಿಂಗ್ ಮಾನದಂಡಗಳಾದ ಲೈಫ್ ಜಾಕೆಟ್ ಧರಿಸುವಿಕೆ, ಪ್ರಯಾಣಿಕರ ನಿಗದಿತ ಸಂಖ್ಯೆ ಮತ್ತಿತ್ತರ ವಿಚಾರಗಳನ್ನು ಪಾಲಿಸಲಾಗಿತ್ತು.

-ಬಿಂದುಮಣಿ, ಕೊಡಗು ಎಸ್ಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X