Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಪದಗಳ ತರ್ಜುಮೆಗಿಂತ ಭಾವಾನುವಾದಕ್ಕೆ...

ಪದಗಳ ತರ್ಜುಮೆಗಿಂತ ಭಾವಾನುವಾದಕ್ಕೆ ಮಹತ್ವ ನೀಡಿ : ದೀಪಾ ಭಸ್ತಿ

ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿಯೊಂದಿಗೆ ಸಂವಾದ, ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Jun 2025 12:21 AM IST
share
ಪದಗಳ ತರ್ಜುಮೆಗಿಂತ ಭಾವಾನುವಾದಕ್ಕೆ ಮಹತ್ವ ನೀಡಿ : ದೀಪಾ ಭಸ್ತಿ

ಮಡಿಕೇರಿ : ಪದಗಳ ತರ್ಜುಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು ಅನುವಾದ ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ ಎಂದು ಪ್ರತಿಷ್ಠಿತ ಅಂತರ್‌ರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮಡಿಕೇರಿಯ ಲೇಖಕಿ ದೀಪಾ ಭಸ್ತಿ ಅಭಿಪ್ರಾಯಪಟ್ಟಿದ್ದಾರೆ.

ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಖಾಸಗಿ ಸಭಾಂಗಣದಲ್ಲಿ ಆಯೋಜಿಸಲಾದ ಸಂವಾದ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಾನು ಮುಷ್ತಾಕ್ ಅವರ ಹಾರ್ಟ್ ಲ್ಯಾಂಪ್ ಕೃತಿಗೆ ಸಂಬಂಧಿತ ಮಾಹಿತಿ ನೀಡಿದ ದೀಪಾ ಭಸ್ತಿ, ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದ ಮಾಡುವಾಗ ಖಂಡಿತವಾಗಿಯೂ ಪದಗಳನ್ನು ತರ್ಜುಮೆ ಮಾಡಬಾರದು. ಇದರ ಬದಲಿಗೆ ಮೂಲಕೃತಿಯಲ್ಲಿನ ಪದಗಳ ಭಾವವನ್ನು ಅರ್ಥೈಸಿಕೊಂಡು ತನ್ನದೇ ಶೈಲಿಯಲ್ಲಿ ಭಾವಾನುವಾದ ಮಾಡಿದರಷ್ಟೇ ಅನುವಾದ ಸಾಹಿತ್ಯಕ್ಕೆ ಗಟ್ಟಿತನ ದೊರಕುತ್ತದೆ ಎಂದು ಅಭಿಪ್ರಾಯಪಟ್ಟರು.

ಪಂಪ, ಕುವೆಂಪು ಸೇರಿದಂತೆ ಕನ್ನಡದ ಅನೇಕ ಸಾಹಿತಿಗಳ ಅತ್ಯಂತ ಶ್ರೇಷ್ಠ ಕೃತಿಗಳು ಇನ್ನಾದರೂ ಇಂಗ್ಲಿಷ್‌ಗೆ ಅನುವಾದಗೊಂಡು ಜಾಗತಿಕವಾಗಿ ಓದುಗರನ್ನು ತಲುಪಬೇಕಾದ ಅಗತ್ಯವಿದೆ. 1,500 ವರ್ಷಗಳ ಇತಿಹಾಸವಿರುವ ಕನ್ನಡದ ಕೃತಿಗಳು ವಿಶ್ವವ್ಯಾಪಿ ಕನ್ನಡ ನೆಲದ ಸಾಹಿತ್ಯ ಕಂಪು ಬೀರಬೇಕಾಗಿದೆ. ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಲು ಇತರ ಭಾಷೆಗಳ ಶ್ರೇಷ್ಠ ಕೃತಿಗಳು ಕನ್ನಡಕ್ಕೆ ಅನುವಾದವಾಗಬೇಕಾದ ಅಗತ್ಯವಿದೆ. ಪಕ್ಕದ ಕೇರಳದಲ್ಲಿನ ಮಲಯಾಳದಲ್ಲಿ ಅನುವಾದಕ್ಕೂ ಪ್ರಾಧಾನ್ಯತೆ ಇದೆ ಎಂದು ಹೇಳಿದರು.

ಡಾ. ಶಿವರಾಮ ಕಾರಂತರ ಅದೇ ಊರು - ಅದೇ ಮರ ಕೃತಿ ಮತ್ತು ಕೊಡಗಿನ ಗೌರಮ್ಮ ಅವರ ಕಥೆಗಳನ್ನು ಇಂಗ್ಲಿಷ್‌ಗೆ ಅನುವಾದಿಸಿ ಅದು ಖ್ಯಾತಿ ಪಡೆಯುತ್ತಿದ್ದ ಸಂದರ್ಭವೇ ಬಾನು ಮುಷ್ತಾಕ್ ತನ್ನ ಸ್ನೇಹಿತೆಯ ಮೂಲಕ ನನ್ನನ್ನು ಸಂಪರ್ಕಿಸಿ ತನ್ನ ಕಥೆಗಳನ್ನು ಇಂಗ್ಲಿಷ್‌ಗೆ ಅನುವಾದಿಸುವಂತೆ ಕೋರಿದ್ದರು. ಹೀಗಾಗಿಯೇ ಅವರ ಎಲ್ಲಾ ಕಥಾಸಂಕಲನ ಓದಿ ತನಗೆ ಇಷ್ಟವಾದ 12 ಕಥೆಗಳನ್ನು ಆಯ್ದೆಕೊಂಡು ಹಾರ್ಟ್ ಲ್ಯಾಂಪ್ ಕೃತಿಯಾಗಿಸಿದೆ ಎಂದು ವಿವರಿಸಿದರು.

ಬೂಕರ್ ಪ್ರಶಸ್ತಿಯ ಅಂತಿಮ ಹಂತದಲ್ಲಿ ಇಟಾಲಿಯನ್, ಡ್ಯಾನಿಷ್, ಫ್ರೆಂಚ್ ಭಾಷೆಗಳ ಕೃತಿಗಳೂ ಇದ್ದವು. ವಿಶ್ವದ ಪ್ರಸಿದ್ದ ಅನುವಾದಕರಾದ ಸೋಫಿ ಹಗ್ಗೀಸ್ ಅವರ ಕೃತಿಯೂ ಅಲ್ಲಿತ್ತು. ಹೀಗಿದ್ದರೂ ತೀರ್ಪುಗಾರರು ಸರಳ, ಮನಸ್ಸಿಗೆ ಮುಟ್ಟುವ ಭಾಷಾ ಮತ್ತು ಭಾವಾನುವಾದ ಮೆಚ್ಚಿಕೊಂಡು ಹಾರ್ಟ್ ಲ್ಯಾಂಪ್‌ನ್ನು ಪ್ರಶಸ್ತಿಗೆ ಆಯ್ಕೆ ಮಾಡಿದರು ಎಂದು ತಿಳಿಸಿದರು.

ಚಿತ್ರರಂಗದಲ್ಲಿ ಆಸ್ಕರ್‌ನಂತೆಯೇ ಸಾಹಿತ್ಯಲೋಕದಲ್ಲಿ ಬೂಕರ್ ಪ್ರಶತಿಗೆ ಮಹತ್ವವಿದೆ ಎಂದು ಹೇಳಿದ ದೀಪಾ ಭಸ್ತಿ, ಬೂಕರ್ ಪ್ರಶಸ್ತಿ ಲಭಿಸಿದ ಬಳಿಕ ಅನೇಕರು ತಮ್ಮ ಕೃತಿಗಳ ಅನುದಾದಕ್ಕಾಗಿ ಸಂಪರ್ಕ ಮಾಡುತ್ತಿದ್ದಾರೆ. ಆದರೆ, ಇನ್ನೊಂದು ವರ್ಷ ಹಾರ್ಟ್ ಲ್ಯಾಂಪ್ ಕೃತಿಯ ಪ್ರಚಾರಕ್ಕಾಗಿ ಭಾರತದ ವಿವಿಧೆಡೆ ಸೇರಿದಂತೆ ಜಗತ್ತಿನ ಹಲವಾರು ಕಡೆ ಸಾಹಿತ್ಯ ಉತ್ಸವಗಳಿಗೆ ತೆರಳಬೇಕಾಗಿದೆ. ಯಾವುದೇ ಕೃತಿ ರಚನೆಗೂ ಸಮಯದ ಕೊರತೆಯದೆ. ಭಾವಾನುವಾದಕ್ಕೆ ಕನಿಷ್ಠ 2-3 ವರ್ಷಗಳಾದರೂ ಸಮಯಾವಕಾಶ ಅಗತ್ಯವಾಗಿದೆ ಎಂದು ದೀಪಾ ಹೇಳಿದರು.

ಹೆಗ್ಗೋಡು ಗ್ರಾಮದ ಸಮುದ್ಯತಾ ವೆಂಕಟರಾಮು ಅವರು ರಚಿಸಿರುವ ಇದೇ ಅಂದರೆ ಇದೆ, ಇಲ್ಲ ಎಂದರೆ ಇಲ್ಲ ಕೃತಿಯ ಇಂಗ್ಲೀಷ್ ಅನುದಾದ ಸಾಗಿದ್ದು, ಇದು ಕೂಡ ಬಹಳ ಸೊಗಸಾದ ಕೃತಿಯಾಗಲಿದೆ ಎಂದು ಹೇಳಿದ ದೀಪಾ, ಅನುವಾದ ಸಾಹಿತ್ಯ ತಾನು ಮೆಚ್ಚಿಕೊಂಡು ಬರೆದ್ದದ್ದಲ್ಲ. ಸ್ವಂತ ಕೃತಿಯ ರಚನೆ ಕಾರ್ಯವೂ ಬಾಕಿಯಿದೆ. ಪ್ರಬಂಧ, ಸಣ್ಣ ಕಥೆಗಳು ತನ್ನ ಮೆಚ್ಚಿನ ಸಾಹಿತ್ಯವಾಗಿದೆ ಎಂದೂ ಅವರು ಹೇಳಿದರು.

ಮೊದಲಿನ ಕಾಲದಲ್ಲಿ ಅನುವಾದಕರಿಗೆ ಅಷ್ಟೋನು ಮಹತ್ವ ಇರುತ್ತಿರಲಿಲ್ಲ. ಆದರೆ, ಬದಲಾದ ಸಾಹಿತ್ಯ ಲೋಕದಲ್ಲಿ ಮೂಲಲೇಖಕರಷ್ಟೇ ಅನುವಾದಕರೂ ಪ್ರಾಶಸ್ತ್ಯ ಪಡೆಯುತ್ತಾರೆ. ಈ ಕಾರಣದಿಂದಾಗಿಯೇ ಬೂಕರ್ ಪ್ರಶಸ್ತಿಯನ್ನು ಅನುದಾಕರಿಗಾಗಿಯೇ ಮೀಸಲಿಡಲಾಗಿದೆ ಎಂದು ದೀಪಾ ಭಸ್ತಿ ಹೆಮ್ಮೆಯಿಂದ ಹೇಳಿದರು.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ಪರವಾಗಿ ದೀಪಾಭಾಸ್ತಿಯವರನ್ನು ಸನ್ನಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಸಲಹೆಗಾರರಾದ ಟಿ.ಪಿ.ರಮೇಶ್, ಬಿ.ಜಿ.ಅನಂತಶಯನ, ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ವಂದಿಸಿದರು.

70 ಸಾವಿರ ಪ್ರತಿ ಮಾರಾಟದ ದಾಖಲೆ ನಿರ್ಮಿಸಿದ ಹಾರ್ಟ್ ಲ್ಯಾಂಪ್

ಬೂಕರ್ ಪ್ರಶಸ್ತಿ ಪಡೆದ ಹಾರ್ಟ್ ಲ್ಯಾಂಪ್ ಕೃತಿಯು ಕೇವಲ 3 ವಾರದಲ್ಲಿಯೇ 70 ಸಾವಿರ ಪ್ರತಿಗಳ ಮುದ್ರಣ ಕಂಡಿದ್ದು, 1 ತಿಂಗಳಲ್ಲಿ 1.50 ಲಕ್ಷ ಕೃತಿ ಮಾರಾಟದ ದಾಖಲೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಹಲವಾರು ಭಾಷೆಗಳಿಂದ ಹಾರ್ಟ್ ಲ್ಯಾಂಪ್ ಕೃತಿಯ ಅನುವಾದ ಮುದ್ರಣಕ್ಕಾಗಿ ಬೇಡಿಕೆ ಬರುತ್ತಿದೆ. ಸದ್ಯಕ್ಕೆ ಮಲಯಾಳಂ, ಅಸ್ಸಾಮಿ, ಒಡಿಯಾ ಭಾಷೆಗಳ ತರ್ಜುಮೆಗೆ ಅನುಮತಿ ನೀಡಿದ್ದೇನೆ. ಪ್ರಮುಖ ಪುಸ್ತಕ ಮಾರಾಟ ತಾಣಗಳಲ್ಲಿ ಸತತ 3 ವಾರಗಳಿಂದ ಹಾರ್ಟ್ ಲ್ಯಾಂಪ್ ಕೃತಿಯುವ ಮಾರಾಟದಲ್ಲಿ ಮೊದಲ ಸ್ಥಾನ ಕಾಯ್ದುಕೊಂಡಿದೆ ಎಂದು ಬೂಕರ್ ಪ್ರಶಸ್ತಿ ಪುರಸ್ಕೃತೆ ಲೇಖಕಿ ದೀಪಾ ಭಾಸ್ತಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X