Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ...

ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 Aug 2024 5:12 PM IST
share
ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಮಡಿಕೇರಿ : ಮುಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ವಾಮಮಾರ್ಗದ ಮೂಲಕ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಾಜ್ಯಪಾಲರು, ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವುದನ್ನು ಸಹಿಸದ ವಿರೋಧ ಪಕ್ಷಗಳು ರಾಜಕೀಯ ಷಡ್ಯಂತ್ರ ನಡೆಸುತ್ತಿವೆ. ಜನಾದೇಶದೊಂದಿಗೆ ಬಹುಮತ ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮಂದಿ ಮೊದಲಿನಿಂದಲೂ ಹವಣಿಸುತ್ತಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಕ್ರಮ ಅಸಂವಿಧಾನಿಕ ಮತ್ತು ಇದು ಬಿಜೆಪಿಯ ಷಡ್ಯಂತ್ರದ ಒಂದು ಭಾಗ ಎಂದು ಎಂದು ಆರೋಪಿಸಿದರು.

ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸುವ ಮೂಲಕ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅವಕಾಶ ನೀಡಿರುವ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.

ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್ ಮಾತನಾಡಿ, ಸಾಮಾಜಿಕ ನ್ಯಾಯದ ಹರಿಕಾರ, ದೀನ ದಲಿತರು, ದುರ್ಬಲ ವರ್ಗದ ಆಶಾಕಿರಣವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸುವ ಷಡ್ಯಂತ್ರ ನಡೆಯುತ್ತಿದೆ.

ಕೇಂದ್ರ ಸರ್ಕಾರದ ಬಹಳಷ್ಟು ಹಗರಣಗಳನ್ನು ತೆರೆದಿಟ್ಟು ಪ್ರಧಾನಿ ಮೋದಿ ಅವರನ್ನು ಅಲುಗಾಡಿಸಿರುವ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಸುವ ಪ್ರಯತ್ನವಾಗಿ ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡಿದೆ. ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆದಿದೆ ಎಂದು ಆರೋಪಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಮಾತನಾಡಿ, ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅವಕಾಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಮನವಿ ಮಾಡಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಪರವಾಗಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಪ್ರಮುಖ 7 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಅವರ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಕಾಂಗ್ರೆಸ್ ಪ್ರಮುಖರಾದ ಕೊಲ್ಯದ ಗಿರೀಶ್, ಬಿ.ಎಸ್.ತಮ್ಮಯ್ಯ, ಟಾಟು ಮೊಣ್ಣಪ್ಪ, ಪ್ರಮೋದ್ ಗಣಪತಿ, ಮುನೀರ್ ಅಹಮ್ಮದ್, ನೆರವಂಡ ಉಮೇಶ್, ತೆನ್ನಿರ ಮೈನಾ, ಟಿ.ಈ.ಸುರೇಶ್, ಆರ್.ಪಿ.ಚಂದ್ರಶೇಖರ್, ಕಾನೆಹಿತ್ಲು ಮೊಣ್ಣಪ್ಪ, ಹನೀಫ್, ಜಾನ್ಸನ್ ಪಿಂಟೋ, ರಾಜೇಶ್ ಯಲ್ಲಪ್ಪ, ಮೋಹನ್ ದಾಸ್, ಸೂರಜ್ ಹೊಸೂರು ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X