Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ | ಬೇಂಗ್‍ನಾಡ್ ಕೊಡವ ಸಮಾಜದಿಂದ...

ಮಡಿಕೇರಿ | ಬೇಂಗ್‍ನಾಡ್ ಕೊಡವ ಸಮಾಜದಿಂದ ಚೇರಂಬಾಣೆಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Jan 2025 8:22 PM IST
share
Photo of Protest

ಮಡಿಕೇರಿ : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಜಾತ್ರೋತ್ಸವದ ಸಂದರ್ಭ ಕುಪ್ಯಚೇಲೆ ಧರಿಸಿ ಹೋದ ಕೊಡವರನ್ನು ತಡೆಯಲಾಗಿದೆ ಎಂದು ಆರೋಪಿಸಿ ಬೇಂಗ್‍ನಾಡ್ ಕೊಡವ ಸಮಾಜದ ಪ್ರಮುಖರು ಹಾಗೂ ಸದಸ್ಯರು ಚೇರಂಬಾಣೆಯಲ್ಲಿ ಪ್ರತಿಭಟನೆ ನಡೆಸಿದರು.

ಚೇರಂಬಾಣೆ ನಗರದಲ್ಲಿ ಒಂದು ಗಂಟೆಗಳ ಕಾಲ ಸ್ವಯಂ ಘೋಷಿತ ಬಂದ್ ಆಚರಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಂತರ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ಪ್ರಕಣದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ನಾಪಂಡ ಗಣೇಶ್, ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ಗಣಪತಿ, ಉಪಾಧ್ಯಕ್ಷ ಕೇಕಡ ಮೊಣ್ಣಪ್ಪ ಹಾಗೂ ಪ್ರಮುಖರಾದ ಮಂದಪಂಡ ಮನೋಜ್ ಕಟ್ಟೆಮಾಡು ದೇವಾಲಯದಲ್ಲಿ ನಡೆದ ಘಟನೆ ಖಂಡನೀಯವೆಂದರು.

ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿರುವ ಸಂದರ್ಭ ಕೊಡವ ಜನಾಂಗದವರು ಕೊಡವ ಸಾಂಪ್ರದಾಯಿಕ ಉಡುಪು ಕುಪ್ಯಚೇಲೆ, ಪೀಚೆಕತ್ತಿ ತೊಟ್ಟು, ಕೊಡವ ಮಹಿಳೆಯರು ಕೊಡವ ಸೀರೆ ಧರಿಸಿ ದೇವಾಲಯ ಪ್ರವೇಶಿಸುವ ಸಂದರ್ಭ ಕೆಲವರು ತಡೆಯೊಡ್ಡಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದರು.

ಕೊಡವ ಸಮಾಜದ ಆಡಳಿತ ಮಂಡಳಿ ಸದಸ್ಯರು, ಕೊಡವ ಸಮಾಜ ರಿಕ್ರಿಯೇಷನ್ ಮತ್ತು ಸ್ಪೋಟ್ರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಪಟ್ಟಮಾಡ ಕುಶಾಲಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್, ಬಡ್ಡಿರ ನಂದಕುಮಾರ್, ಕೊಟ್ಟುಕತ್ತಿರ ಬಾಬಿ ಪಳಂಗಪ್ಪ, ಮಾಜಿ ಸೈನಿಕರ ಕಲ್ಯಾಣ ಸಂಘದ ಅಧ್ಯಕ್ಷ ಅಯ್ಯಂಡ ಅಯ್ಯಪ್ಪ, ಕುಂಚೆಟ್ಟಿರ ಪೆಮ್ಮಯ್ಯ, ಕೇಕಡ ಪೂವಮ್ಮ ರಮೇಶ್, ಬೊಳ್ಳಾರ್‍ಪಂಡ ಚಂಗಪ್ಪ, ಸಮಾಜದ ಸದಸ್ಯರು, ಕೊಡವಾಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X