Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗಿನಲ್ಲಿ ಬಿರುಗಾಳಿ ಸಹಿತ ವ್ಯಾಪಕ...

ಕೊಡಗಿನಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆ: ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಕಂಬಗಳು

ಗೋಡೆ ಕುಸಿದು ಮಹಿಳೆ ಸಾವು: ಆಟೋ ಚಾಲಕ, ವಿದ್ಯಾರ್ಥಿನಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ26 July 2025 8:17 PM IST
share
ಕೊಡಗಿನಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆ: ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಕಂಬಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಸಾವು ನೋವು ಸಂಭವಿಸಿದೆ. ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರೆ, ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಚಾಲಕ ಹಾಗೂ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಗಾಳಿಯ ವೇಗ ಹೆಚ್ಚುತ್ತಲೇ ಇರುವುದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.

ಭಾರೀ ಗಾಳಿಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಲಬುರ್ಗಿ ಜಿಲ್ಲೆಯ ನಿವಾಸಿ ರವಿ ಎಂಬುವವರ ಪತ್ನಿ ಸುಷ್ಮಾ (37) ಮೃಪಟ್ಟಿದ್ದಾರೆ. ಮೃತರ ಸಹೋದರ ಅಕ್ಷಯ್ ಗೆ ಭುಜ ಭಾಗಕ್ಕೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಆಟೋದ ಮೇಲೆ ಬಿದ್ದ ಮರ :

ಸೋಮವಾರಪೇಟೆ ತಾಲ್ಲೂಕಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಕುಂಬೂರು ಗ್ರಾಮದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಹಾನಿಯಾಗಿದೆ. ಆಟೋ ಚಾಲಕ ಕುಂಬೂರು ಗ್ರಾಮದ ನಿವಾಸಿ ಪ್ರವೀಣ್ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ದೇವಾಲಯಕ್ಕೆ ಹಾನಿ :

ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಚುರಿಯಾಲ್‍ನಲ್ಲಿರುವ ಪನ್ನಂಗಾಲತ್ತಮ್ಮೆ ದೇವಾಲಯದ ಮೇಲೆ ಮರ ಬಿದ್ದು ಹಾನಿಯಾಗಿದೆ. ದೇವಾಲಯದ ಅರ್ಧ ಭಾಗದಷ್ಟು ಹಾನಿಗೀಡಾಗಿದ್ದು, ಯಾರೂ ಇಲ್ಲದ್ದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ವಿರಾಜಪೇಟೆ ತಹಶೀಲ್ದಾರ್‌ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಶನಿವಾರಸಂತೆ ಹೋಬಳಿ ಕೊರಲಳ್ಳಿ ಗ್ರಾಮದ ಸುಕನ್ಯಾ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಸಂಪಾಜೆ ವ್ಯಾಪ್ತಿಯ ಮೇಕೇರಿ ಗ್ರಾಮದ ಸುಭಾಷ್ ನಗರದ ನಸೀಮಾ ಎಂಬುವವರ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿ ಉಂಟಾಗಿದೆ. ಡಬ್ಬಡ್ಕ ಗ್ರಾಮದ ಮುಕ್ಕಾಟಿ ತಮ್ಮಯ್ಯ ಎಂಬುವವರ ಮನೆಯ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಅಮ್ಮತ್ತಿ ಹೋಬಳಿ ಬಿಳುಗುಂದ ಗ್ರಾಮದ ಹೆಚ್.ಟಿ.ಗಣೇಶ್ ಎಂಬುವವರ ವಾಸದ ಮನೆಯ ಹಿಂಬದಿಯ ಗೋಡೆ ಮತ್ತು ಮೇಲ್ಚಾವಣಿ ಮಳೆಯಿಂದ ಕುಸಿದು ಬಿದ್ದು ತೀವ್ರ ಹಾನಿಯಾಗಿದೆ. ನಾಪೊಕ್ಲು ಹೋಬಳಿ ಎಮ್ಮೆಮಾಡು ಗ್ರಾಮದ ಅಬ್ದುಲ್ ರಹೆಮಾನ್ ಎಂಬುವರ ಮನೆಯ ಹಿಂಭಾಗದಲ್ಲಿ ಮರಬಿದ್ದು ಹಾನಿಯಾಗಿದೆ. ಎಮ್ಮೆಮಾಡು ಗ್ರಾಮದ ಅಬ್ದುಲ್ ಅಫೀಲ್ ಅವರ ವಾಸದ ಮನೆಯ ಪಕ್ಕದಲ್ಲಿ ಬರೆ ಕುಸಿತಗೊಂಡಿದೆ.

ದೊಡ್ಡಕೂಡ್ಲಿ ಗ್ರಾಮದ ಕೃಷ್ಣಚಾರ್ಯ ಎಂಬುವರ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮ ಪಂಚಾಯಿತಿಯ ಬ್ಯಾಡಗೊಟ್ಟ ಗ್ರಾಮದ ನಿವಾಸಿ ಪಾಂಡುರಂಗ ಎಂಬುವರ ಮನೆಗೆ ಮರ ಬಿದ್ದು ಮನೆಯ 2 ಶೀಟ್ ಹಾಗೂ ಮನೆಗೆ ಹೊಂದಿಕೊಂಡಂತೆ ಇರುವ ಕೊಟ್ಟಿಗೆಗೆ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಭಾಗಮಂಡಲ ಹೋಬಳಿ ಕರಿಕೆ ಗ್ರಾಮದ ಸುಮತಿ ಎಂಬುವವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ರಸ್ತೆಗೆ ಬಿದ್ದ ಮರಗಳು :

ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಗ್ರಾಮೀಣ ಪ್ರದೇಶಗಳು ಮಾತ್ರವಲ್ಲದೆ ಹೆದ್ದಾರಿಗಳಲ್ಲೂ ಬೃಹತ್ ಮರಗಳು ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸುಂಟಿಕೊಪ್ಪ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ವಿದ್ಯುತ್ ಹಾನಿ ಉಂಟಾಯಿತ್ತಲ್ಲದೆ, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚೆಟ್ಟಳ್ಳಿ, ಸಿದ್ದಾಪುರ ರಸ್ತೆಯಲ್ಲೂ ಮರಗಳು ಬಿದ್ದಿವೆ. ಸೋಮವಾರಪೇಟೆಯ ಕಾಜೂರು ಬಳಿ ರಸ್ತೆಗೆ ಮರ ಬಿದ್ದು ಸಂಚಾರ ಬಂದ್ ಆಗಿತ್ತು.

ಗ್ರಾಮೀಣ ಪ್ರದೇಶಗಳಲ್ಲಿ ಹಲವು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿದೆ. ಎತ್ತರ ಮತ್ತು ತಗ್ಗು ಪ್ರದೇಶ ಹಾಗೂ ನದಿತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X