Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗಿನಲ್ಲಿ ಗಾಳಿ ಸಹಿತ ಮಳೆ: ವಿವಿಧೆಡೆ...

ಕೊಡಗಿನಲ್ಲಿ ಗಾಳಿ ಸಹಿತ ಮಳೆ: ವಿವಿಧೆಡೆ ಹಾನಿ

ವಾರ್ತಾಭಾರತಿವಾರ್ತಾಭಾರತಿ23 Jun 2025 11:57 PM IST
share
ಕೊಡಗಿನಲ್ಲಿ ಗಾಳಿ ಸಹಿತ ಮಳೆ: ವಿವಿಧೆಡೆ ಹಾನಿ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಉತ್ತಮವಾಗಿ ಸುರಿಯುತ್ತಿದೆ. ವಿವಿಧೆಡೆ ಗಾಳಿ ಸಹಿತ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ 5 ಇಂಚು ಮತ್ತು ಮಡಿಕೇರಿ ತಾಲ್ಲೂಕಿನಲ್ಲಿ 4 ಇಂಚು ಮಳೆ ಸುರಿದಿದೆ.

ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿತಗೊಂಡಿದೆ. ಗ್ರಾಮದ ನಿವಾಸಿ ಪಿ.ಬಿ.ಗುರುವ ಎಂಬುವವರ ಮನೆಯ ಹಿಂಬದಿಯ ಗೋಡೆ ರಾತ್ರಿ ಸುರಿದ ಬಾರಿ ಮಳೆ ಗಾಳಿಯಿಂದ ಕುಸಿದು ಹಾನಿಯಾಗಿದೆ. ಮಡಿಕೇರಿ ತಾಲ್ಲೂಕು ಕಾಟಕೇರಿ ಗ್ರಾಮದ ಅಶ್ವಥ್ ಭಟ್ ಎಂಬುವರ ವಾಸದ ಮನೆಯ ಗೋಡೆ ಮಳೆ ಗಾಳಿಯಿಂದಾಗಿ ಕುಸಿದು ಹಾನಿಯಾಗಿದೆ. ಮಡಿಕೇರಿ ಸಮೀಪ ಕಗ್ಗೋಡ್ಲುವಿನಲ್ಲಿ ಮುಖ್ಯ ರಸ್ತೆಗೆ ಮರ ಬಿದ್ದು ಕೆಲಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

ಮಡಿಕೇರಿ ನಗರದಲ್ಲಿ ಮೈಕೊರೆಯುವ ಚಳಿಗಾಳಿಯೊಂದಿಗೆ ಉತ್ತಮ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆ ಬಿರುಸು ಪಡೆದುಕೊಳ್ಳುವ ಸಾಧ್ಯತೆಗಳಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 68.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1142.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 529.05 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 99.60 ಮಿ.ಮೀ. ಕಳೆದ ವರ್ಷ ಇದೇ ದಿನ 13.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1713.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 759.35 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1169.60 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 463.80 ಮಿ.ಮೀ. ಮಳೆಯಾಗಿತ್ತು. ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 60.17 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1065.64 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 502.95 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 63.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1067.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 429.86 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 695.94 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 489.30 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 64, ನಾಪೆÇೀಕ್ಲು 98.80, ಸಂಪಾಜೆ 94, ಭಾಗಮಂಡಲ 141.60, ವಿರಾಜಪೇಟೆ 78.60, ಅಮ್ಮತ್ತಿ 65, ಹುದಿಕೇರಿ 57.60, ಶ್ರೀಮಂಗಲ 98, ಪೆÇನ್ನಂಪೇಟೆ 55, ಬಾಳೆಲೆ 30.07, ಸೋಮವಾರಪೇಟೆ 86.20, ಶನಿವಾರಸಂತೆ 43, ಶಾಂತಳ್ಳಿ 106, ಕೊಡ್ಲಿಪೇಟೆ 17, ಕುಶಾಲನಗರ 36.20, ಸುಂಟಿಕೊಪ್ಪ 60 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.68 ಅಡಿಗಳು. ಕಳೆದ ವರ್ಷ ಇದೇ ದಿನ 2828.88 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 33.40 ಮಿ.ಮೀ., ಇಂದಿನ ನೀರಿನ ಒಳಹರಿವು 5266 ಕ್ಯುಸೆಕ್, ಕಳೆದ ವರ್ಷ ಇದೇ ದಿನ 295 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 3000 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X