Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ,...

ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ, ಒಂದು ಧರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ31 Jan 2025 7:11 PM IST
share
ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ, ಒಂದು ಧರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಮಡಿಕೇರಿ : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.

ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ʼಗ್ಯಾರಂಟಿʼ ಬಡವರಿಗೆ ಶಕ್ತಿ ತುಂಬಿದೆ :

ಯಾವ ಪಕ್ಷ ನುಡಿದಂತೆ ನಡೆಯುತ್ತದೆ, ಜನಪರವಾಗಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷ ಎಂಟು ತಿಂಗಳಲ್ಲಿ ಪ್ರಮುಖವಾಗಿ ಭರವಸೆ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದೊಳಗೆ ಈಡೇರಿಸಿದ್ದೇವೆ. ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದಲ್ಲಿನ ಎಲ್ಲಾ ಜಾತಿಯ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಮಾಡಿರುವುದು ನಮ್ಮ ಸರ್ಕಾರ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸಮಾನತೆಯನ್ನು ತರುವ ಪ್ರಯತ್ನವನ್ನು ಮಾಡಿದ್ದೇವೆ ಎಂದರು.

ಭ್ರಾತೃತ್ವ ಬೆಳೆಸಿ, ಭಾರತೀಯರಾಗಿ ಬದುಕಬೇಕು :

ಕೊಡಗಿನ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾವ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಯೋಚಿಸಬೇಕು. ಭಾರತ ದೇಶ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು. ಧ್ವೇಷ ಮಾಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದುದು ಎಂದರು.

ಕೊಡಿಗಿನ ಅಭಿವೃದ್ಧಿಗೆ ಅನುದಾನ :

ಭಾಗಮಂಡಲದಲ್ಲಿ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ಸಂಗಮವನ್ನು ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದರು.

ನುಡಿದಂತೆ ನಡೆದ ಸರ್ಕಾರ :

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಜಯಗೊಳಿಸಿದ ಕೊಡುಗಿನ ಜನತೆಗೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಅಭಿನಂದಿಸಿದರು. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿದೆ. 2013-18ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಪಕ್ಷ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಆದರೆ 2018ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ , ತಾನು ನೀಡಿದ್ದ ಭರವಸೆಗಳಲ್ಲಿ ಶೇ.10 ರಷ್ಟನ್ನು ಕೂಡ ಈಡೇರಿಸಲಿಲ್ಲ ಎಂದರು.

ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ :

ಈ ಭಾಗದ ಜನರು ಮೈಕ್ರೋಫೈನಾನ್ಸ್ ನಿಂದ ಅನುಭವಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಸಧ್ಯದಲ್ಲಿಯೇ ಜಾರಿಗೊಳಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X