Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ;...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Oct 2026 12:22 AM IST
share
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಮಡಿಕೇರಿ : ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದೆ ಎಂದು ಆರೋಪಿಸಿ ಎಸ್‌ಡಿಪಿಐ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಫಾರಂ ನಂ-7ರ ಮೂಲಕ ಅಲ್ಪಸಂಖ್ಯಾತರ ಹೆಸರನ್ನು ಮತಪಟ್ಟಿಯಿಂದ ತೆಗೆಯುವ ಹುನ್ನಾರ ನಡೆದಿದ್ದು, ಪ್ರಕರಣವನ್ನು ರಾಜ್ಯ ಮಟ್ಟದ ವಿಶೇಷ ತನಿಖಾ ತಂಡದ ಮೂಲಕ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್ ಮಾತನಾಡಿ, ಎಸ್‌ಐಆರ್ ಎನ್ನುವುದು ಕಾನೂನು ಬಾಹಿರ. ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈ ಹಿಂದೆಯೇ ಎಸ್‌ಡಿಪಿಐ ಹಲವಾರು ಆಕ್ಷೇಪಗಳನ್ನು ಸಲ್ಲಿಸಿದೆ. ಅಲ್ಲದೆ ಒಟ್ಟು ಪ್ರಕ್ರಿಯೆಯನ್ನು ಕೈಬಿಡುವಂತೆ ಜಾನಾಗ್ರಹ ಸಮಾವೇಶ ನಡೆಸಿ ಒತ್ತಾಯಿಸಿದೆ. ಆದರೆ ಎಸ್‌ಐಆರ್ ಗೊಂದಲ ಮುಂದುವರಿದಿದ್ದು, ಮತದಾರರ ಹಕ್ಕಿಗೆ ಚ್ಯುತಿ ಬರುತ್ತಿದೆ ಎಂದರು.

ಪ್ರಸಕ್ತ ನಮ್ಮ ಆಕ್ಷೇಪಗಳಿಗೆ ಪೂರಕವಾಗಿ ಬ್ಯಾಡಗೊಟ್ಟದ ಮತಗಟ್ಟೆ ಸಂಖ್ಯೆ 21ಕ್ಕೆ ಸಂಬಂಧಿಸಿದಂತೆ 63 ಫಾರಂ ನಂ-7 ಸಲ್ಲಿಕೆಯಾಗಿದ್ದು, ಈ ಫಾರಂಗಳನ್ನು ಬಿಜೆಪಿ ಪಕ್ಷದ ಬಿಎಲ್‌ಎಗಳು ಸಲ್ಲಿಸಿದ್ದಾರೆ. ಆಶ್ಚರ್ಯವೆಂದರೆ, ಈ ಫಾರಂಗಳು ಆ ಪಕ್ಷದ ಕಚೇರಿಯಿಂದ ನೀಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೇವಲ ಒಂದು ಮತಗಟ್ಟೆಯಲ್ಲಿ ಈ ಪ್ರಮಾಣದಲ್ಲಿ ಫಾರಂ ನಂ-7 ಸಲ್ಲಿಸುವ ಮೂಲಕ ಮತಪಟ್ಟಿಯಿಂದ ಹೆಸರು ತೆಗೆಯುವ ಹುನ್ನಾರ ನಡೆದಿದೆಯಾದರೆ ಕ್ಷೇತ್ರವಾರು ಇರುವ ಸರಿ ಸುಮಾರು 200 ಮತಗಟ್ಟೆಗಳನ್ನು ಪರಿಗಣಿಸಿದಲ್ಲಿ ಸಾವಿರಾರು ಮತದಾರರ ಹೆಸರನ್ನು ಮತ ಪಟ್ಟಿಯಿಂದ ತೆಗೆಯುವ ಹುನ್ನಾರ ನಡೆದಿರಬಹುದೆಂದು ಆರೋಪಿಸಿದರು.

ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ಸಮಿತಿಯನ್ನು ರಚಿಸಿ ಜಿಲ್ಲೆಯ ಪ್ರತಿಯೊಂದು ಬೂತ್‌ಗಳಲ್ಲಿ ಪರಿಶೀಲನೆ ನಡೆಸುವ ಮೂಲಕ ಸತ್ಯಾಂಶವನ್ನು ಜನರ ಮುಂದಿಡಬೇಕು. ಇದರೊಂದಿಗೆ ಇದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕೆಂದು ಅಮೀನ್ ಮೊಹ್ಸಿನ್ ಒತ್ತಾಯಿಸಿದರು.

ಎಸ್‌ಡಿಪಿಐ ಉಪಾಧ್ಯಕ್ಷ ಹಾಗೂ ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಮಾತನಾಡಿದರು.

ಪ್ರತಿಭಟನೆಯ ಬಳಿಕ ಪಕ್ಷದ ಪ್ರಮುಖರು ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಬ್ಯಾಡಗೊಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಪ್ರಕಣ ದಾಖಲಿಸಬೇಕೆಂದು ಒತ್ತಾಯಿಸಿದರು.

ಪ್ರಕರಣವು ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿದೆಯೇ ಅಥವಾ ರಾಜ್ಯದ ಇತರ ಭಾಗಗಳಲ್ಲಿಯೂ ಇಂತಹ ಅಕ್ರಮಗಳು ನಡೆದಿವೆಯೇ ಎಂಬುವುದನ್ನು ಪತ್ತೆಹಚ್ಚಲು ರಾಜ್ಯ ಮಟ್ಟದ ಎಸ್‌ಐಟಿ ರಚಿಸಿ ನಿಷ್ಪಕ್ಷ ತನಿಖೆ ನಡೆಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ನಗರಸಭಾ ಸದಸ್ಯರಾದ ಬಶೀರ್, ಮೇರಿ ವೆಗಸ್, ಸಾಮಾಜಿಕ ಹೋರಾಟಗಾರರಾದ ಕೆ.ಮೊಣ್ಣಪ್ಪ, ಡಿ.ಎಸ್.ನಿರ್ವಾಣಪ್ಪ ಸೇರಿ ಹಲವರು ಪಾಲ್ಗೊಂಡಿದ್ದರು.

Tags

SIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X