Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. Somwarpet | ಎಸ್‌ಬಿಐ ಎಟಿಎಂ ದರೋಡೆಗೆ...

Somwarpet | ಎಸ್‌ಬಿಐ ಎಟಿಎಂ ದರೋಡೆಗೆ ವಿಫಲ ಯತ್ನ

ವಾರ್ತಾಭಾರತಿವಾರ್ತಾಭಾರತಿ6 Sept 2026 12:32 PM IST
share
Somwarpet | ಎಸ್‌ಬಿಐ ಎಟಿಎಂ ದರೋಡೆಗೆ ವಿಫಲ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಎಟಿಎಂ ದರೋಡೆಗೆ ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಶುಕ್ರವಾರ ರಾತ್ರಿ ಸುಮಾರು 2.05 ಗಂಟೆ ವೇಳೆಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಬ್ಯಾಂಕ್ ಕಟ್ಟಡಕ್ಕೆ ಹೊಂದಿಕೊಂಡಿರುವ ಎಟಿಎಂಗೆ ನುಗ್ಗಿ, ಕಬ್ಬಿಣದ ಸಲಾಕೆಯಿಂದ ಎಟಿಎಂ ಯಂತ್ರದ ಮೇಲ್ಭಾಗದ ಕವಚವನ್ನು ಬಲವಂತವಾಗಿ ಕಳಚಿದ್ದಾರೆ. ಇನ್ನೊಂದು ಪದರವನ್ನು ಒಡೆಯುವ ವೇಳೆ ಯಾರೋ ಬರುತ್ತಿರುವ ಅನುಮಾನ ಮೂಡುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಎಟಿಎಂ ಒಡೆಯಲು ಯತ್ನಿಸಿದ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

15 ದಿನಗಳ ಹಿಂದೆಯೂ ಮನೆ ಕಳ್ಳತನ :

ಇದು ಅಲ್ಲದೇ ಸುಮಾರು 15 ದಿನಗಳ ಹಿಂದೆ ಪಟ್ಟಣದ ಬಾಣವಾರ ರಸ್ತೆಯಲ್ಲಿರುವ ಮೂಡಲಗಿರಿ ನಿವಾಸದಲ್ಲಿ ಮನೆ ಕಳ್ಳತನ ನಡೆದಿತ್ತು. ಮನೆಯವರು ಇಲ್ಲದ ಸಮಯವನ್ನು ದುರುಪಯೋಗಪಡಿಸಿಕೊಂಡ ಕಳ್ಳರ ತಂಡ ಹಿಂಬಾಗಿಲಿನ ಬೀಗ ಒಡೆದು ಒಳನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿತ್ತು.

ಕಳ್ಳರು ಸುಮಾರು 50 ಗ್ರಾಂ ಬೆಳ್ಳಿಯ ಗಣಪತಿ, ಸರಸ್ವತಿ ಹಾಗೂ ಲಕ್ಷ್ಮೀ ವಿಗ್ರಹಗಳು, 60 ಗ್ರಾಂ ತೂಕದ ಎರಡು ಜೋಡಿ ಬೆಳ್ಳಿ ದೀಪಗಳು, 50 ಗ್ರಾಂ ಕುಂಕುಮದ ಬಟ್ಟಲು, 20 ಗ್ರಾಂ ಬೆಳ್ಳಿಯ ಕಾಲುಚೈನ್ ಹಾಗೂ 20 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದರು. ಈ ಸಂಬಂಧವೂ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನರಲ್ಲಿ ಹೆಚ್ಚಿದ ಆತಂಕ :

ಕಳೆದ ಕೆಲ ದಿನಗಳಿಂದ ಪಟ್ಟಣದಲ್ಲಿ ಮನೆ ಕಳ್ಳತನ ಹಾಗೂ ದರೋಡೆ ಯತ್ನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಕಳ್ಳರ ಪತ್ತೆ ಹಾಗೂ ರಾತ್ರಿ ಗಸ್ತು ಬಿಗಿಗೊಳಿಸುವಂತೆ ಸ್ಥಳೀಯರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Tags

ATMsSBISomwarpet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X