Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ :...

ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ : ಕೊಡಗಿನಲ್ಲಿ 6,997 ವಿದ್ಯಾರ್ಥಿಗಳು ನೊಂದಣಿ

ಎಸೆಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ

ವಾರ್ತಾಭಾರತಿವಾರ್ತಾಭಾರತಿ11 March 2025 4:18 PM IST
share
ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ : ಕೊಡಗಿನಲ್ಲಿ 6,997 ವಿದ್ಯಾರ್ಥಿಗಳು ನೊಂದಣಿ

ಮಡಿಕೇರಿ : ಮಾ.21 ರಿಂದ ಏ.4 ರವರೆಗೆ ನಡೆಯುವ ಎಸೆಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಷಷ್ಟ ನಿರ್ದೇಶನ ನೀಡಿದ್ದಾರೆ.

ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ಸಂಬಂಧ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಬಾರಿಯಂತೆ ಈ ಬಾರಿಯೂ ಎಸೆಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಶೇಕಡಾವಾರು ಉತ್ತೀರ್ಣ ಜೊತೆಗೆ ಕಳೆದ ಬಾರಿಯಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿನದ್ದಾಗಿದೆ. ಪರೀಕ್ಷಾ ಮೌಲ್ಯ ಉಳಿಸಿಕೊಳ್ಳಬೇಕು. ಶಿಕ್ಷಕರೇ ಮಕ್ಕಳ ಬೇಸ್‍ಮೆಂಟ್ ಆಗಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜೊತೆಗೆ ಸಿಸಿಟಿವಿ ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆಯೇ ಎಂದು ಖಾತರಿ ಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಲೋಪಕಂಡು ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಅಗತ್ಯವಿದ್ದಲ್ಲಿ ತಂಡ ರಚಿಸಿಕೊಂಡು ಸುಗಮ ಹಾಗೂ ಸುಲಲಿತವಾಗಿ ಪರೀಕ್ಷೆ ನಡೆಸಬೇಕು. ವೈದ್ಯಕೀಯ, ಪೊಲೀಸ್ ತಂಡ ನಿಯೋಜನೆ ಹೀಗೆ ಪ್ರತೀ ತಂಡಗಳು ಕಾರ್ಯನಿರ್ವಹಿಸಲಿವೆ ಎಂದರು.

ಪರೀಕ್ಷಾ ಕೇಂದ್ರದಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕು. ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. 163 ಸೆಕ್ಷನ್ ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು. ಒಳ್ಳೆಯ ರೀತಿ ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದರು.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಉತ್ತಮ ಡೆಸ್ಕ್ ಅಳವಡಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿ ಇರಬೇಕು. ಪರೀಕ್ಷಾ ದಿನದಂದು ಕೆಎಸ್‍ಆರ್ಟಿಸಿ ಬಸ್‍ಗಳು ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿವಿಧ ಇಲಾಖೆಗಳು ಕರ್ತವ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ವಿದ್ಯಾರ್ಥಿಗಳು ಶ್ರಮಪಟ್ಟು ಓದಿರುತ್ತಾರೆ. ಅವರಿಗೆ ಅನ್ಯಾಯ ಆಗದಂತೆ ಗಮನಹರಿಸಬೇಕು. ಎಸೆಸೆಲ್ಸಿ ಪರೀಕ್ಷೆ ನೋಂದಣಿಯಾಗಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಮಾಹಿತಿ ನೀಡುವಂತಾಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ, ಪರೀಕ್ಷೆ ಎಂದರೆ ಭಯದ ವಾತಾವರಣ ನಿರ್ಮಾಣ ಮಾಡಬಾರದು. ಪಠ್ಯ ಪುಸ್ತಕ ಓದಿದವರು ಯಾವುದೇ ರೀತಿಯ ಒತ್ತಡ ಇಲ್ಲದೆ ಪರೀಕ್ಷೆ ಬರೆಯುತ್ತಾರೆ ಎಂದು ತಿಳಿಸಿದರು.

ಡಯಟ್ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್ ಅವರು ಮಾತನಾಡಿ, ಕೊಡಗು ಜಿಲ್ಲೆ ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷಾ ಗುಣಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದೆ. ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಉತ್ತಮವಾಗಿ ತರುವ ನಿಟ್ಟಿನಲ್ಲಿ ಒತ್ತಡ ನಿವಾರಣೆ ಹಾಗೂ ಹಲವು ಮಾರ್ಗದರ್ಶಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಮಾತನಾಡಿ, ಮೊಟ್ಟ ಮೊದಲ ಬಾರಿಗೆ ಬೋರ್ಡ್ ಪರೀಕ್ಷೆ ನಡೆಯುತ್ತಿದೆ. ಇದೇ ಪ್ರಥಮ ಬಾರಿಗೆ 6,622 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆಗೆ ನೋಂದಣಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು. ಉಳಿದಂತೆ 375 ವಿದ್ಯಾರ್ಥಿಗಳು ರಿಪಿಟರ್ಸ್ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 6,997 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಮಡಿಕೇರಿ ತಾಲ್ಲೂಕಿನಲ್ಲಿ 1,881, ಸೋಮವಾರಪೇಟೆ ತಾಲ್ಲೂಕಿನಲ್ಲಿ 2,855, ವಿರಾಜಪೇಟೆ ತಾಲ್ಲೂಕಿನಲ್ಲಿ 2,261 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಸತಿ ಶಾಲೆ ವಿದ್ಯಾರ್ಥಿಗಳು ಸೇರಿದಂತೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ 8, ಸೋಮವಾರಪೇಟೆ ತಾಲ್ಲೂಕಿನಲ್ಲಿ 11, ವಿರಾಜಪೇಟೆ ತಾಲ್ಲೂಕಿನ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಅಗತ್ಯ ಪೀಠೋಪಕರಣ, ಇಂಟರ್ನೆಟ್ ಸಂಪರ್ಕ ಸಹಿತ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಪರೀಕ್ಷಾ ಕೊಠಡಿಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ, ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಸೌಲಭ್ಯ ಹೀಗೆ ಹಲವು ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಜೊತೆಗೆ ಇವರ ಕರ್ತವ್ಯ ಮತ್ತು ಜವಾಬ್ದಾರಿ ಬಗ್ಗೆ ಮಾಹಿತಿ ನೀಡಲಾಯಿತು.

ಶಿಕ್ಷಣ ಅಧಿಕಾರಿ ಎಂ.ಮಹದೇವಸ್ವಾಮಿ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸ್ಥಾನಿಕ ಜಾಗೃತ ದಳದ ಶಿಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಮಾರ್ಗಾಧಿಕಾರಿಗಳು, ತಾಲ್ಲೂಕು ನೋಡಲ್ ಅಧಿಕಾರಿಗಳು ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X