Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಸುಂಟಿಕೊಪ್ಪ | ಮೃತದೇಹ ಸುಟ್ಟ ಪ್ರಕರಣ :...

ಸುಂಟಿಕೊಪ್ಪ | ಮೃತದೇಹ ಸುಟ್ಟ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Oct 2024 11:04 PM IST
share
ಸುಂಟಿಕೊಪ್ಪ | ಮೃತದೇಹ ಸುಟ್ಟ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ

ಮಡಿಕೇರಿ : ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತೋಟವೊಂದರಲ್ಲಿ ಅ.8 ರಂದು ಪತ್ತೆಯಾದ ಅರೆಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪದಡಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.

ಅತ್ಯಂತ ಸೂಕ್ಷ್ಮ ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಮೂಲತಃ ತೆಲಂಗಾಣ ರಾಜ್ಯದ ಯಾದಾದ್ರಿ ಜಿಲ್ಲೆಯ ಮೋಂಗಿರ್ ನಗರದ, ಪ್ರಸ್ತುತ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಾಸವಿರುವ ನಿಹಾರಿಕ ಪಿ. (29), ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ವಾಸವಿ ನಗರದ ಪ್ರಸ್ತುತ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಾಸವಿರುವ ನಿಖಿಲ್ ಮೈರೆಡ್ಡಿ (28) ಹಾಗೂ ಹರಿಯಾಣ ರಾಜ್ಯದ ಕಾರ್ನಲ್ ಗರುಂದ ನಿವಾಸಿ ಅಂಕೂರ್ ರಾಣ(30) ನನ್ನು ಬಂಧಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು, ಅರೆಸುಟ್ಟ ಮೃತದೇಹ ನಿಹಾರಿಕಳ ಪತಿ ರಮೇಶ್ ಕುಮಾರ್ (54) ಎಂಬುವವರದ್ದಾಗಿದೆ ಎಂದರು.

500 ಸಿಸಿ ಕ್ಯಾಮರಾ ಪರಿಶೀಲನೆ :

ಕಾಫಿ ತೋಟದಲ್ಲಿ ಅರೆಸುಟ್ಟ ಮೃತದೇಹದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆಯನ್ನು ಕೈಗೊಂಡು ಆರೋಪಿಗಳ ಪತ್ತೆಗಾಗಿ ಸುಮಾರು 500 ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದಾರೆ.

ಕೃತ್ಯಕ್ಕೆ ಬಳಸಿರಬಹುದಾದ ಸಂಶಯಾಸ್ಪದ ಕಾರಿನ ಮಾಹಿತಿಯನ್ನು ಕಲೆ ಹಾಕಿದಾಗ ಇದು ರಮೇಶ್ ಕುಮಾರ್ ಹೈದರಾಬಾದ್ ಎಂಬುವವರದ್ದಾಗಿದೆ ಎಂದು ತಿಳಿದುಬಂದಿದೆ. ಇದನ್ನು ಆಧರಿಸಿ ತನಿಖೆಯನ್ನು ತೀವ್ರಗೊಳಿಸಿದಾಗ ನಿಹಾರಿಕ ರಮೇಶ್ ಕುಮಾರ್ ಅವರ ಎರಡನೇ ಪತ್ನಿ ಎನ್ನುವುದು ಖಾತ್ರಿಯಾಗಿದೆ.

ಆಸ್ತಿ ಮಾರಾಟದಿಂದ ಬಂದ 8ಕೋಟಿ ರೂ.ಗಳನ್ನು ಪಡೆಯುವ ಉದ್ದೇಶದಿಂದ ಪತಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ ನಿಹಾರಿಕಾ ತನ್ನ ಸ್ನೇಹಿತ ಹರಿಯಾಣ ಮೂಲದ ಅಂಕೂರ್ ರಾಣನ ಸಹಾಯ ಪಡೆದಿದ್ದಾಳೆ. ಡ್ರಾಪ್ ಮಾಡುವ ನೆಪದಲ್ಲಿ ಪತಿ ರಮೇಶ್ ಕುಮಾರ್ ನ ಕಾರಿನಲ್ಲಿ ಬಂದ ಇಬ್ಬರು ಉಪ್ಪಳ್-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ ನಿಲ್ಲಿಸಿದ್ದಾರೆ. ನಂತರ ಇಬ್ಬರು ಸೇರಿ ರಮೇಶ್ ಕುಮಾರ್ ನನ್ನು ಕೊಲೆ ಮಾಡಿದ್ದಾರೆ. ನಂತರ ಬೆಂಗಳೂರಿನ ಹೊರಮಾವು ಎಂಬಲ್ಲಿಗೆ ಬರುವ ನಿಹಾರಿಕಾ ತನ್ನ ಮತ್ತೊಬ್ಬ ಸ್ನೇಹಿತ ನಿಖಿಲ್ ಬಳಿ ಕೊಲೆಯ ವಿಚಾರ ತಿಳಿಸುತ್ತಾಳೆ. ಶವವನ್ನು ಯಾರಿಗೂ ಸಿಗದಂತೆ ನಾಶ ಮಾಡುವ ಉದ್ದೇಶದಿಂದ ಸುಂಟಿಕೊಪ್ಪ ಬಳಿಯ ತೋಟಕ್ಕೆ ತಂದು ಬೆಂಕಿ ಹಚ್ಚಿ ಆರೋಪಿಗಳು ಕಾರಿನಲ್ಲಿ ಮರಳಿದ್ದಾರೆ. ಈ ಘಟನೆ ಇದೇ ಅ.3 ರಂದು ನಡೆದಿದೆ ಎಂದು ಎಸ್‍ಪಿ ಕೆ.ರಾಮರಾಜನ್ ವಿವರಿಸಿದರು.

ಸತತ 10 ದಿನಗಳ ತನಿಖೆಯ ನಂತರ ಮೊದಲಿಗೆ ನಿಹಾರಿಕ ಹಾಗೂ ನಿಖಿಲ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಯಿತು. ನಂತರ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಅಂಕೂರ್ ರಾಣನನ್ನು ಹರಿದ್ವಾರದಲ್ಲಿ ಬಂಧಿಸಲಾಯಿತು ಎಂದು ತಿಳಿಸಿದರು.

ಎಸ್‍ಪಿ ಕೆ.ರಾಮರಾಜನ್, ಹೆಚ್ಚುವರಿ ಎಸ್‍ಪಿ ಸುಂದರ್ ರಾಜ್.ಕೆ.ಎಸ್ ಹಾಗೂ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‍ಪಿ ಗಂಗಾಧರಪ್ಪ ಆರ್.ಎ. ಅವರ ಮಾರ್ಗದರ್ಶನದಲ್ಲಿ 16 ಪೊಲೀಸ್ ಅಧಿಕಾರಿಗಳ ಒಟ್ಟು 4 ವಿಶೇಷ ತನಿಖಾ ತಂಡ ತನಿಖೆ ನಡೆಸಿ ಸವಾಲಿನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X