Suntikoppa | ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

ಸಾಂದರ್ಭಿಕ ಚಿತ್ರ
ಮಡಿಕೇರಿ : ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಸುಂಟಿಕೊಪ್ಪ ಸಮೀಪದ ಗರಗಂದೂರು ಮಲಿಕಾರ್ಜುನ ಕಾಲೋನಿಯ ಮಾದಾಪುರ ಹೊಳೆಯಲ್ಲಿ ಶನಿವಾರ ನಡೆದಿದೆ.
ಸುಂಟಿಕೊಪ್ಪದ ಪಂಪ್ಹೌಸ್ ನಿವಾಸಿಗಳಾದ ಸುಂಟಿಕೊಪ್ಪ ಆಟೋಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಶರೀಫ್ ಅವರ ಪುತ್ರ ಮಹಮ್ಮದ್ ರಾಯಿಝ್ (16) ಹಾಗೂ ಸರದಾರ್ ಅವರ ಪುತ್ರ ಮುಹಮ್ಮದ್ ನಿಹಾಲ್ (16) ಮೃತರು.
ಇವರಿಬ್ಬರು ಖಾಸಗಿ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮನೆಗೆ ತೆರಳುವ ಸಂದರ್ಭ ಮಾದಾಪುರ ಹೊಳೆಯಲ್ಲಿ ಈಜಲು ನೀರಿಗಿಳಿದಿದ್ದ ವಿದ್ಯಾರ್ಥಿಗಳು ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್ರಾಜ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ಈಜು ತಜ್ಞರ ಸಹಾಯದಿಂದ ಮೃತದೇಹಗಳನ್ನು ಹೊಳೆಯಿಂದ ಹೊರತೆಗೆಯಲಾಗಿದೆ.
Next Story





