ಮಡಿಕೇರಿ| ಹೊಸ ಪಟ್ಟಣ ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ; ಗ್ರಾಮಸ್ಥರಲ್ಲಿ ಆತಂಕ

ಮಡಿಕೇರಿ: ನಂಜರಾಯಪಟ್ಟಣ ಗ್ರಾ.ಪಂ ವ್ಯಾಪ್ತಿಯ ಹೊಸ ಪಟ್ಟಣ ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ.
ಹುಲಿ ಸಂಚಾರದ ಕುರಿತು ಗ್ರಾಮಸ್ಥರಲ್ಲಿ ಸಂಶಯ ವ್ಯಕ್ತವಾಗಿದ್ದು, ಗ್ರಾಮದಲ್ಲಿ ಆತಂಕ ಮೂಡಿದೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಎಂದು ಪೋಷಕರು ಚಿಂತಿತರಾಗಿದ್ದಾರೆ.
ಹುಲಿ ಹೆಜ್ಜೆ ಗುರುತು ಪತ್ತೆಯಾದ ಭಾಗದ ಗ್ರಾಮಸ್ಥರು ಆತಂಕವನ್ನು ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮೀನುಕೊಲ್ಲಿ ಅರಣ್ಯ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Next Story





