ಮಡಿಕೇರಿ | ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಸಾಂದರ್ಭಿಕ ಚಿತ್ರ
ಮಡಿಕೇರಿ: ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಬಳಿಯ ಕಾಫಿ ತೋಟದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಪ್ರವೀಣ್ (30) ಹಾಗೂ ರಘು (42) ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ಕಾರ್ಮಿಕರು. ಗಾಯಾಳುಗಳಿಗೆ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇಂದು ಬೆಳಿಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ಸಂದರ್ಭ ಎದುರಾದ ಕಾಡಾನೆ ಕಾರ್ಮಿಕರ ಮೇಲೆ ಏಕಾಏಕಿ ದಾಳಿ ಮಾಡಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು ಮತ್ತು ಗಾಯಾಳುಗಳಿಗೆ ಸಾಂತ್ವನ ಹೇಳಿದರು.
ಗ್ರಾಮದಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ತಕ್ಷಣ ಕಾಡಿಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Next Story





