ವಿರಾಜಪೇಟೆ | ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ಮೃತ್ಯು

ಸಾಂದರ್ಭಿಕ ಚಿತ್ರ | PC : Meta AI
ವಿರಾಜಪೇಟೆ : ತೋಟದ ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದ ಅತ್ತೂರು ಗ್ರಾ.ಪಂ ವ್ಯಾಪ್ತಿಯ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ.
ತೋಟದ ಕಾರ್ಮಿಕ ಮಹಿಳೆ ಭವಾನಿ ಎಂಬುವವರ ಪುತ್ರಿ ಲಾವಣ್ಯ (10) ಮೃತ ಬಾಲಕಿ. ಲಾವಣ್ಯ ಚನ್ನಂಗೊಲ್ಲಿಯ ಸರಕಾರಿ ಶಾಲೆಯಲ್ಲಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಸಂದರ್ಭ ಕೆರೆಯ ಕೆಸರಿನಲ್ಲಿ ಸಿಲುಕಿದ ಲಾವಣ್ಯ ಮೃತಪಟ್ಟಳು ಎಂದು ತಿಳಿದು ಬಂದಿದೆ.
ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





