Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಸಿಬಿಐ...

ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಸಿಬಿಐ ಕೊಟ್ಟ ಹೇಳಿಕೆಯನ್ನು ಆಧರಿಸಿ ಅಮಿತ್ ಶಾ ಅವರಿಗೆ ಕ್ರಿಮಿನಲ್ ಹಿನ್ನಲೆಯಿದೆ ಎಂದಿದ್ದೇನೆ: ಯತೀಂದ್ರ ಸಿದ್ದರಾಮಯ್ಯ

"ಚುನಾವಣಾ ಆಯೋಗಕ್ಕೆ ಉತ್ತರ ನೀಡುತ್ತೇನೆ"

ವಾರ್ತಾಭಾರತಿವಾರ್ತಾಭಾರತಿ31 March 2024 11:03 PM IST
share
ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಸಿಬಿಐ ಕೊಟ್ಟ ಹೇಳಿಕೆಯನ್ನು ಆಧರಿಸಿ ಅಮಿತ್ ಶಾ ಅವರಿಗೆ ಕ್ರಿಮಿನಲ್ ಹಿನ್ನಲೆಯಿದೆ ಎಂದಿದ್ದೇನೆ: ಯತೀಂದ್ರ ಸಿದ್ದರಾಮಯ್ಯ

ಮಡಿಕೇರಿ: 2010ರಲ್ಲಿ ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಗುಜರಾತ್ ಕೋರ್ಟ್‍ಗೆ ಸಿಬಿಐ ಕೊಟ್ಟ ಹೇಳಿಕೆಯನ್ನು ಆಧರಿಸಿ ಅಮಿತ್ ಶಾ ಅವರಿಗೆ ಕ್ರಿಮಿನಲ್ ಹಿನ್ನಲೆಯಿದೆ ಎಂದು ಹೇಳಿದ್ದೇನೆಯೇ ಹೊರತು ಅದು ನನ್ನ ಸ್ವಂತ ಸೃಷ್ಟಿಯ ಹೇಳಿಕೆಯಲ್ಲವೆಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ವಿರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಕೊಟ್ಟ ಹೇಳಿಕೆಯನ್ನು ನಾನು ಪುನರುಚ್ಚಾರ ಮಾಡಿದ್ದೇನೆ, ಹಾಗಾಗಿ ನನ್ನ ಹೇಳಿಕೆಯಿಂದ ಬಿಜೆಪಿಗೆ ಕೋಪ ಬಂದಿದ್ದರೆ ಮೊದಲು ಸಿಬಿಐ ಮೇಲೆ ಅವರು ಕೋಪ ಮಾಡಿಕೊಳ್ಳಬೇಕು. ಈಗಾಗಲೇ ನನಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಅದಕ್ಕೆ ನಾನು ಏನು ಉತ್ತರ ಕೊಡಬೇಕೋ ಕೊಡುತ್ತೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಆಡಳಿತದಿಂದ ದೇಶ 25 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಕೊಟ್ಟ ಯಾವುದೇ ಭರವಸೆಗಳನ್ನು ಅವರು ಈಡೇರಿಸಿಲ್ಲ. ಕಪ್ಪು ಹಣದ ವಿಚಾರದಲ್ಲೂ ಮೋದಿ ಎಡವಿದ್ದಾರೆ. ರೈತರ ಬಾಳು ಹಸನಾಗಿಲ್ಲ, ರೈತರ ಪ್ರತಿಭಟನೆಯನ್ನು ಅಧಿಕಾರದಿಂದ ಹತ್ತಿಕ್ಕುವ ಕೆಲಸ ಆಗುತ್ತಿದೆ ಎಂದು ಯತೀಂದ್ರ ಟೀಕಿಸಿದರು.

ಉದ್ಯೋಗ ಸೃಷ್ಟಿಸುವಲ್ಲಿ ಮೋದಿ ಎಡವಿದ್ದಾರೆ, ಇದರಿಂದ ಭಾರತದಲ್ಲಿ ಅತೀ ಹೆಚ್ಚು ನಿರುದ್ಯೋಗ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವದ ಭಾರತ ದೇಶದಲ್ಲಿ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಮೋದಿ ಸರ್ಕಾರ ಕಪಿ ಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿದೆ. ಸರ್ಕಾರದ ವಿರುದ್ಧ ಮಾತನಾಡಿದವರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.

Tags

Yathindra SiddaramaiahAmit Shah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X