Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾಳೆ ಕೊಡಾಜೆಯಲ್ಲಿ ರಾಜ್ಯ ಮಟ್ಟದ ದಫ್...

ನಾಳೆ ಕೊಡಾಜೆಯಲ್ಲಿ ರಾಜ್ಯ ಮಟ್ಟದ ದಫ್ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ17 Jan 2026 2:12 PM IST
share
ನಾಳೆ ಕೊಡಾಜೆಯಲ್ಲಿ ರಾಜ್ಯ ಮಟ್ಟದ ದಫ್ ಸ್ಪರ್ಧೆ
ನೂತನ ಕಚೇರಿ ಉದ್ಘಾಟನೆ ►ಸನ್ಮಾನ ಹಾಗೂ ಐಕ್ಯತಾ ಜಸ್ನೆ–2026

ಬಂಟ್ವಾಳ: ಐಕ್ಯ ವೇದಿಕೆ (ರಿ), ಕೊಡಾಜೆ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ ದಫ್ ಸ್ಪರ್ಧೆ, ನೂತನ ಕಚೇರಿ ಉದ್ಘಾಟನೆ, ಸನ್ಮಾನ ಹಾಗೂ ಐಕ್ಯತಾ ಜಸ್ನೆ–2026 ಕಾರ್ಯಕ್ರಮವು ಜ.18 ಭಾನುವಾರ ಬೆಳಿಗ್ಗೆ 10ರಿಂದ ಕೊಡಾಜೆ ತರ್ಬಿಯತುಲ್ ಇಸ್ಲಾಂ ಮದ್ರಸ ವಠಾರದ ಮರ್ಹೂಮ್ ಸುಲ್ತಾನ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಕೊಡಾಜೆ ಜಂಕ್ಷನ್‌ನಲ್ಲಿ ವೇದಿಕೆಯ ನೂತನ ಕಚೇರಿಯನ್ನು ಅಸ್ಸಯ್ಯಿದ್ ಇಬ್ರಾಹಿಂ ಹಂಝ ಅಲ್ ಹಾದಿ ತಂಙಳ್ ಪಾಟ್ರಕೋಡಿ ಉದ್ಘಾಟಿಸಲಿದ್ದು, ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ನಡೆಯುವ “ಐಕ್ಯತಾ ಜಸ್ನೆ” ಕಾರ್ಯಕ್ರಮವನ್ನು ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಖತೀಬ್ ಸೈದಾಲಿ ಮುಸ್ಲಿಯಾರ್ ಉದ್ಘಾಟಿಸಲಿದ್ದು, ಐಕ್ಯ ವೇದಿಕೆ ಉಪಾಧ್ಯಕ್ಷ ಅಬ್ದುಲ್ ರಝಾಕ್ ಅನಂತಾಡಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ 6.30ಕ್ಕೆ ನಡೆಯುವ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಲ ಉದ್ಘಾಟಿಸಲಿದ್ದು, ಐಕ್ಯ ವೇದಿಕೆ ಅಧ್ಯಕ್ಷ ಅಶ್ರಫ್ ಭಾರತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಸಮಾರಂಭಕ್ಕೆ ಐಕ್ಯ ವೇದಿಕೆಯ ಸ್ಥಾಪಕಾಧ್ಯಕ್ಷ ಹಾಗೂ ಸಲಹೆಗಾರ ಫಾರೂಕ್ ಗೋಳಿಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಬಿ. ರಮಾನಾಥ ರೈ, ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ, ನೇರಳಕಟ್ಟೆ ಡಿ.ಕೆ. ಸ್ವಾಮಿ ಶ್ರದ್ಧಾ ಕೇಂದ್ರದ ಡಿ.ಕೆ. ಸ್ವಾಮೀಜಿ, ಗಡಿಯಾರ್ ಗ್ರೂಪ್ ಆಫ್ ಕಂಪೆನೀಸ್ (ದುಬೈ) ಚೇರ್ಮನ್ ಇಬ್ರಾಹಿಂ ಗಡಿಯಾರ್ ಭಾಗವಹಿಸಲಿದ್ದಾರೆ.

ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಾಟಿ ವೈದ್ಯ ಸೋಮನಾಥ್ ಪಂಡಿತ್, ಕಲ್ಲಡ್ಕ ಮ್ಯೂಸಿಯಂ ಮಾಲಕ ಹಾಜಿ ಕೆ.ಎಸ್. ಯಾಸಿರ್ ಕಲ್ಲಡ್ಕ ಹಾಗೂ ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಅವರನ್ನು ಸನ್ಮಾನಿಸಲಾಗುವುದು. ಜೊತೆಗೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಅಭಿನಂದನೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ, ರಾಜಕೀಯ ಹಾಗೂ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಐಕ್ಯ ವೇದಿಕೆಯ ಸಾಂಸ್ಕೃತಿಕ ಕಾರ್ಯದರ್ಶಿ ಮನ್ಸೂರ್ ನೇರಳಕಟ್ಟೆ ಹಾಗೂ ಪತ್ರಿಕಾ ಕಾರ್ಯದರ್ಶಿ ನೌಫಳ್ ಕೊಡಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X