Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗಲು ಭಾರತ ಸನ್ನದ್ಧ: 'ಲೀಓಸ್' ನಿರ್ದೇಶಕ ಆರ್. ವೆಂಕಟೇಶ್ವರನ್ ಕರೆ

ವಾರ್ತಾಭಾರತಿವಾರ್ತಾಭಾರತಿ20 Aug 2026 4:40 PM IST
share
ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗಲು ಭಾರತ ಸನ್ನದ್ಧ: ಲೀಓಸ್ ನಿರ್ದೇಶಕ ಆರ್. ವೆಂಕಟೇಶ್ವರನ್ ಕರೆ

ಕೋಲಾರ: ಯುವಜನರು ವೈಜ್ಞಾನಿಕ ಮನೋಭಾವವನ್ನು ಮೈಗೂಡಿಸಿಕೊಂಡು ಹೊಸ ಆವಿಷ್ಕಾರಗಳ ಮೂಲಕ ಭಾರತವನ್ನು ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕ ನಾಯಕನನ್ನಾಗಿ ಮಾಡಲು ಶ್ರಮಿಸಬೇಕು ಎಂದು ಎಲೆಕ್ಟ್ರೋ-ಆಪ್ಟಿಕ್ಸ್ ಸಿಸ್ಟಮ್ಸ್ ಪ್ರಯೋಗಾಲಯದ (LEOS) ನಿರ್ದೇಶಕ ಹಾಗೂ ಹಿರಿಯ ವಿಜ್ಞಾನಿ ಆರ್. ವೆಂಕಟೇಶ್ವರನ್ ಕರೆ ನೀಡಿದ್ದಾರೆ.

ಇಸ್ರೋ ಬಾಹ್ಯಾಕಾಶ ಸಂಸ್ಥೆಯ 'ಲೀಓಸ್' ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಲಾಗಿದ್ದ 'ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ-2026' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಗಸ್ಟ್ 23, 2023 ರಂದು ಚಂದ್ರಯಾನ-3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದ ಕ್ಷಣದ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ ಎಂದ ವೆಂಕಟೇಶ್ವರನ್, "ಒಂದು ಕಾಲದಲ್ಲಿ ಸೈಕಲ್ ಮತ್ತು ಎತ್ತಿನ ಬಂಡಿಗಳಲ್ಲಿ ರಾಕೆಟ್ ಉಪಕರಣ ಸಾಗಿಸುತ್ತಿದ್ದ ಭಾರತೀಯ ಬಾಹ್ಯಾಕಾಶ ಕ್ಷೇತ್ರವು ಇಂದು ಇಡೀ ವಿಶ್ವವೇ ತಿರುಗಿ ನೋಡುವಷ್ಟು ಬೆಳೆದಿದೆ. 'ವಿಕಸಿತ ಭಾರತ'ದ ಗುರಿ ತಲುಪಲು ಯುವಜನರಲ್ಲಿ ವೈಜ್ಞಾನಿಕ ಚಿಂತನೆ ಪ್ರಚೋದಿಸುವುದು ಅಗತ್ಯ" ಎಂದು ಅಭಿಪ್ರಾಯಪಟ್ಟ ಅವರು, ಬಾಹ್ಯಾಕಾಶ ನೀತಿ ಸುಧಾರಣೆಗಳಿಂದಾಗಿ ಖಾಸಗಿ ರಂಗದ ಸಹಭಾಗಿತ್ವ ಹೆಚ್ಚಾಗಿದ್ದು, ಬಾಹ್ಯಾಕಾಶ ಸ್ಟಾರ್ಟ್‌ಅಪ್‌ಗಳ ಸಂಖ್ಯೆ 20 ರಿಂದ 400ರ ಗಡಿದಾಟಿದೆ ಎಂದರು.

ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಬಿ.ಕೆ. ರವಿ ಮಾತನಾಡಿ, "ಪ್ರಸ್ತುತ ದಿನಗಳಲ್ಲಿ ವಿಜ್ಞಾನ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ದೇಶಕ್ಕೆ ಆತಂಕಕಾರಿ ಬೆಳವಣಿಗೆ. ವಿಶ್ವವಿದ್ಯಾನಿಲಯಗಳಲ್ಲಿ ಬಿ.ಎಸ್ಸಿ., ಎಂ.ಎಸ್ಸಿ. ಹಾಗೂ ಪಿಎಚ್.ಡಿ. ಮಟ್ಟದಲ್ಲಿ ವಿಜ್ಞಾನ ಕಲಿಯುವವರ ಸಂಖ್ಯೆ ಹೆಚ್ಚಾಗಬೇಕು. ಬಾಹ್ಯಾಕಾಶ ಕ್ಷೇತ್ರಕ್ಕೂ ಹೆಚ್ಚಿನ ಪ್ರತಿಭಾವಂತರ ಅಗತ್ಯವಿದೆ" ಎಂದು ಕಳವಳ ವ್ಯಕ್ತಪಡಿಸಿದರು.

ಇಸ್ರೋದಲ್ಲಿ ಹಿರಿಯ ವಿಜ್ಞಾನಿಯಾಗಿರುವ ಕೋಲಾರದ ಶೀಲಾ ಅವರ ವಿಶೇಷ ಆಸಕ್ತಿಯಿಂದಾಗಿಯೇ ಈ ಅರಿವು ಕಾರ್ಯಕ್ರಮವನ್ನು ಕೋಲಾರದಲ್ಲಿ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು. 1976ರ "ಉಪಗ್ರಹ ಆಧಾರಿತ ಶೈಕ್ಷಣಿಕ ದೂರದರ್ಶನ ಪ್ರಯೋಗ"ದ ಸಮಯದಿಂದಲೂ ಬೆಂಗಳೂರು ವಿಶ್ವವಿದ್ಯಾನಿಲಯವು ಇಸ್ರೋದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂಬುದನ್ನು ಸ್ಮರಿಸಿದರು.

ಮುಖ್ಯ ಅತಿಥಿಯಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಪ್ರೊ. ಕೆ. ಸಿದ್ದಪ್ಪ ಮಾತನಾಡಿ, ದೇಶದ ರಕ್ಷಣಾ ವ್ಯವಸ್ಥೆ, ಕೃಷಿ, ಆರೋಗ್ಯ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸ್ಯಾಟಲೈಟ್‌ಗಳ ಕೊಡುಗೆ ಅಪಾರವಾಗಿದೆ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗದ ಕುಲಸಚಿವೆ ಪ್ರೊ. ಕುಮುದಾ, ಲೀಓಸ್ ಸಹ ನಿರ್ದೇಶಕ ಮುರಳಿದರ ಕೆ.ಆರ್., ಮುಖ್ಯ ಸಂಪನ್ಮೂಲ ವ್ಯಕ್ತಿ ಎಂ.ಎನ್. ಶ್ರೀನಿವಾಸ್ ಅನುರೂಪ, ಲೀಓಸ್ ಸಂಚಾಲಕಿ ಶೈಲಾ ಹಾಗೂ ಸಿಂಡಿಕೇಟ್ ಸದಸ್ಯ ಜೈದೀಪ್ ಎಂ. ಗೋಪಾಲ್ ಗೌಡ ಉಪಸ್ಥಿತರಿದ್ದರು.

Tags

LEOSVenkateshwaran
share
ವಾರ್ತಾಭಾರತಿ
ವಾರ್ತಾಭಾರತಿ
Next Story
X