Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಕನಕದಾಸರು ಎಂದರೆ ಒಂದು ಜಾತ್ಯತೀತ...

ಕನಕದಾಸರು ಎಂದರೆ ಒಂದು ಜಾತ್ಯತೀತ ಪರಂಪರೆ: ಕೆ.ವಿ. ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ12 Nov 2025 9:30 PM IST
share
ಕನಕದಾಸರು ಎಂದರೆ ಒಂದು ಜಾತ್ಯತೀತ ಪರಂಪರೆ:  ಕೆ.ವಿ. ಪ್ರಭಾಕರ್
"ಜಾತ್ಯತೀತತೆ ಮತ್ತು ಧರ್ಮ‌ಸಹಿಷ್ಣುತೆ ಕನಕ ಪರಂಪರೆಯಲ್ಲೇ ಇದೆ"

ಕೋಲಾರ: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಹೇಳಿದರು.

ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ ಬುದ್ದ, ಬಸವ, ಕನಕ ಎಂದು ಕರೆಯುತ್ತೇವೆ. ಅಂದರೆ ಬುದ್ದನಿಂದ ಶುರುವಾಗುವ ಮಹೋನ್ನತ ಪರಂಪರೆಯ ಭಾಗವಾಗಿ ಕನಕರನ್ನು ನಾವು ಆರಾಧಿಸುತ್ತೇವೆ. ಆದ್ದರಿಂದ ಕನಕ ಜಯಂತಿಯಂದು ನಾವು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು ಎಂದು ಕರೆ ನೀಡಿದರು.

ದಾಸಶ್ರೇಷ್ಠ ಕನಕರು ನಮ್ಮ ಪರಂಪರೆಯ ನೈತಿಕ ಮತ್ತು ಅಧ್ಮಾತ್ಮಿಕ ಶಕ್ತಿಯಾಗಿದ್ದಾರೆ. ಆದರೆ, ಬಹಳ ಮಂದಿ ಕನಕದಾಸರಿಂದ ನಮ್ಮ ಪರಂಪರೆ ಆರಂಭವಾಗಿದೆ ಎನ್ನುವ ತಪ್ಪು ಕಲ್ಪನೆಯಲ್ಲಿದ್ದಾರೆ. ಅಲೆಮಾರಿಯಾಗಿದ್ದ ಮನುಷ್ಯ ಜನಾಂಗ ಕೃಷಿಗಿಂತ ಮೊದಲೇ ಪಶುಪಾಲನೆ ಕಂಡುಕೊಂಡಿತ್ತು. ಹಸು, ಕುರಿ, ಮೇಕೆ, ಕುದುರೆ ಸಾಕುತ್ತಿದ್ದವರೆಲ್ಲಾ ಕುರುಬರೇ ಅನ್ನಿಸಿಕೊಂಡ ಚರಿತ್ರೆ ಇದೆ ಎಂದು ಹೇಳಿದರು.

ನಾಣ್ಯ ಮತ್ತು ನೋಟುಗಳು ಬರುವ ಮೊದಲು ಕುರಿ ಮತ್ತು ಹಸುಗಳೇ ನಾಣ್ಯಗಳಾಗಿದ್ದವು. ಕುರಿ, ಹಸುಗಳನ್ನು ಕೊಟ್ಟು ಇತರೆ ವಸ್ತು, ಪದಾರ್ಥಗಳನ್ನು ಕೊಳ್ಳಲಾಗುತ್ತಿತ್ತು. ಅಂದರೆ, ಹೆಚ್ಚು ಕುರಿ, ಹಸು ಇರುವವನೇ ಹೆಚ್ಚು ಶ್ರೀಮಂತ, ಒಡೆಯನಾಗಿದ್ದ ಪರಂಪರೆ ನಮ್ಮದು. ಅಂದರೆ ಪ್ರಾಚೀನ ಭಾರತದ ಆರ್ಥಿಕತೆಯೇ ಕುರುಬರ, ಪಶುಪಾಲಕರ ಕೈಯಲ್ಲಿ ಇತ್ತು. ಇಡೀ ದೇಶದ ಆರ್ಥಿಕತೆಯನ್ನು ನಿಭಾಯಿಸುತ್ತಿದ್ದ ಪರಂಪರೆಯಿಂದ ಬಂದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪರಂಪರೆಯ ಮುಂದುವರಿಕೆಯಾಗಿ 16 ಬಜೆಟ್ ಗಳನ್ನು ಮಂಡಿಸಿ ದಾಖಲೆ ಮೆರೆದಿದ್ದಾರೆ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ಸೂಚಿಸಿದರು.

ಕುರುಬರ ಕುಲದೈವಗಳು, ದೇವತೆಗಳು, ಸಾಂಸ್ಕೃತಿಕ ನಾಯಕರು, ನಾಯಕಿಯರನ್ನೆಲ್ಲಾ ನೋಡಿದರೆ ಅಂತರ್ಜಾತಿ ವಿವಾಹ ಮತ್ತು ಜಾತ್ಯತೀತ ಪರಂಪರೆಯೂ ನಮಗೆ ಗೊತ್ತಾಗುತ್ತದೆ. ಹೇಮರೆಡ್ಡಿ ಮಲ್ಲಮ್ಮ ಅಂದರೆ ರೆಡ್ಡಿ ಜನಾಂಗದ ಜೊತೆಗಿನ ನಮ್ಮ ಒಡನಾಟವನ್ನೂ ಹೇಳುತ್ತದೆ. ಹೀಗೆ ಬಲಿಜ, ಗೊಲ್ಲ, ನಾಯಕ, ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಜಾತಿಗಳ ಜೊತೆಗೆ ನಮ್ಮ ದೈವಗಳು, ಸಾಂಸ್ಕೃತಿಕ‌ ಪುರುಷರು ಬೆರೆತು ಸಂಬಂಧಗಳನ್ನು ಏರ್ಪಡಿಸಿಕೊಂಡ ಜಾತ್ಯತೀತ ಪರಂಪರೆಯೂ ನಮ್ಮ ರಕ್ತದಲ್ಲೇ ಬಂದಿದೆ. ಇದನ್ನೆಲ್ಲಾ ಮುಂದೆ ಯಾವತ್ತಾದರೂ ವಿವರವಾಗಿ ಮಾತನಾಡುತ್ತೇನೆ ಎಂದರು‌.

ಕನಕದಾಸರ ಜಯಂತಿಯಂದು ನಾವು ನಮ್ಮ ಪರಂಪರೆಯ ಆಳ-ಅಗಲವನ್ನು ಅರಿಯುವ ಮೂಲಕ ನಮ್ಮ ಪರಂಪರೆಯ ಬೇರುಗಳನ್ನು ಗಟ್ಟಿಗೊಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X