Kolar | ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಕ್ಕಳಿಬ್ಬರ ಆತ್ಮಹತ್ಯೆ

ಕೋಲಾರ : ಮಕ್ಕಳ ವಿದ್ಯಾಭ್ಯಾಸಕ್ಕೆ ಶುಲ್ಕ ಹೊಂದಿಸಲು ಸಾಧ್ಯವಾಗದೇ ಹಾಗೂ ಆರ್ಥಿಕ ಸಂಕಷ್ಟದಿಂದ ಬೇಸತ್ತು ತಾಲೂಕಿನ ಛತ್ರಕೋಡಿಹಳ್ಳಿ ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದ ನಿವಾಸಿ ಎನ್.ಸುರೇಶ್ ಎಂಬವರ ಪತ್ನಿ ಬಿ.ವಿ.ಪ್ರಮೀಳಾ (40), ಪುತ್ರಿ ಸ್ವಪ್ನಾ (22) ಹಾಗೂ ಪುತ್ರ ಚರಣ್ (19)ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಕೃಷಿಹೊಂಡದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story




