ಕೋಲಾರ, ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ಪರಿಶೀಲನೆ
ಕೋಲಾರ: ಅನಾಮಧೇಯ ಇ-ಮೇಲ್ ಮೂಲಕ ಕೋಲಾರ ಹಾಗೂ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಕೋಲಾರ ಜಿಲ್ಲಾಡಳಿತ ಭವನದಲ್ಲಿ ಕೊಂಚ ಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.
ಕೋಲಾರ ಹೊರ ವಲಯದ ಟಮಕದಲ್ಲಿರುವ ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು.
ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ಸ್ಥಳ ಪರಿಶೀಲನೆ ನಡೆಸಲಾಯಿತು.
ಬೆಳಗ್ಗೆ 6 ಗಂಟೆಗೆ ಬೆದರಿಕೆ ಸಂದೇಶ ಬಂದಿದ್ದು, 2 ಗಂಟೆಗೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಎಚ್ಚರಿಕೆ ನೀಡಲಾಗಿತ್ತು.
ಬಾಂಬ್ ಬೆದರಿಕೆ ಹಿನ್ನಲೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಜಿಲ್ಲಾಡಳಿತ ಕಚೇರಿಯಿಂದ ಹೊರ ಬಂದು ಆವರಣದಲ್ಲಿ ಸಭೆ ನಡೆಸಿದರು.
Next Story







