ಕೋಲಾರ | ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರ ಮೃತದೇಹ ಬಾವಿಯಲ್ಲಿ ಪತ್ತೆ

ಕೋಲಾರ : ಅಕ್ಟೋಬರ್ 2ರಂದು ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ.
ಮೃತರನ್ನು ಮುಳಬಾಗಿಲು ತಾಲೂಕಿನ ಯಳಚೇಪಲ್ಲಿಯ ನಿವಾಸಿಗಳಾದ ಧನ್ಯಬಾಯಿ (13) ಮತ್ತು ಚೈತ್ರಾಬಾಯಿ (13) ಎಂದು ಗುರುತಿಸಲಾಗಿದೆ.
ಅ.2ರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಆಟವಾಡಲು ತೆರಳಿದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರು. ಶನಿವಾರ ಬೆಳಿಗ್ಗೆ ಇಬ್ಬರ ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ.
ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
Next Story





