ಕೋಲಾರ | ಜ.19ರೊಳಗೆ ಕೆ.ಸಿ.ರೆಡ್ಡಿ ಅವರ ಪ್ರತಿಮೆ ಅನಾವರಣಕ್ಕೆ ಆಗ್ರಹ

ಕೋಲಾರ : ಕೋಲಾರ ಜಿಲ್ಲಾ ಕೇಂದ್ರದಲ್ಲಿ ರಾಜ್ಯದ ಮೊದಲ ಸಿಎಂ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ಜ.19ರೊಳಗೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದಿಂದ ಅನಾವರಣ ಮಾಡಲು ರೆಡ್ಡಿ ಜನಸಂಘದ ರಾಜ್ಯಾಧ್ಯಕ್ಷ ಪ್ರಭಾಕರ್ ರೆಡ್ಡಿ ಆಗ್ರಹಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ರೆಡ್ಡಿ ಜನಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಎಟ್ಟಿಕೋಡಿ ಕೃಷ್ಣಾರೆಡ್ಡಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ ಅವರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಪಾದಾಧಿಕಾರಿಗಳನ್ನು ನೇಮಕ ಮಾಡಿ, ರೆಡ್ಡಿ ಜನ ಸಂಘದಿಂದ ಪ್ರಮಾಣಪತ್ರ ನೀಡಿ ಆಯ್ಕೆ ಮಾಡಲಾಗಿದೆ. ಇನ್ನೂ ಉಳಿದ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಯ್ಕೆಯ ಜವಾಬ್ದಾರಿಯನ್ನು ಸಂಘದ ನಿರ್ದೇಶಕರಿಗೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ರೆಡ್ಡಿ ಜನ ಸಂಘವೂ ಸುಮಾರು 1 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಸಮುದಾಯದ ಸಂಘಟನೆಯಲ್ಲಿ ಹಿಂದುಳಿದಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಂದು ತಾಲೂಕಿನ ಗ್ರಾಮದಲ್ಲಿ ಸಮುದಾಯ ಬಲಪಡಿಸಲು ಒತ್ತು ನೀಡಲಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ಶೈಕ್ಷಣಿಕ, ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ರೆಡ್ಡಿ ಸಮುದಾಯದ ನಾನಾ ತೊಂದರೆಗಳನ್ನು ಎದುರಿಸಿ ಕೊಂಡು ಬಂದಿದೆ, ಅಭಿವೃದ್ಧಿ ಹೊಂದಲು ಪ್ರತಿಯೊಬ್ಬರು ಸಂಘಟಿತರಾಗಬೇಕು ಎಂದರು.
ಜಿಲ್ಲೆಯಲ್ಲಿ ಶೀಘ್ರವೇ ರೆಡ್ಡಿ ಜನ ಸಂಘದಿಂದ ಮಹಿಳೆಯರನ್ನು ಸಂಘಟಿಸಿ ಬೃಹತ್ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪದಾಧಿಕಾರಿಗಳ ಆಯ್ಕೆ:
ಜಿಲ್ಲಾ ರೆಡ್ಡಿ ಜನ ಸಂಘದ ಜಿಲ್ಲಾ ಗೌರವಾಧ್ಯಕ್ಷ ವಿಜಯ ರಾಘವ ರೆಡ್ಡಿ, ಜಿಲ್ಲಾಧ್ಯಕ್ಷ ಎಸ್. ಕೃಷ್ಣಾರೆಡ್ಡಿ, ಮಹಿಳಾ ಜಿಲ್ಲಾಧ್ಯಕ್ಷೆ ಘಟ್ಟಕಾಮದೇನುಹಳ್ಳಿ ಶಾಂತಮ್ಮ, ಹಿರಿಯ ಜಿಲ್ಲಾ ಉಪಾಧ್ಯಕ್ಷ ಸುಬ್ರಮಣಿರೆಡ್ಡಿ, ಉಪಾಧ್ಯಕ್ಷರಾದ ಶ್ರೀರಾಮರೆಡ್ಡಿ, ರಾಮಚಂದ್ರರೆಡ್ಡಿ ಆಯ್ಕೆಗೊಂಡಿದ್ದಾರೆ.
ತಾಲೂಕು ಪದಾಧಿಕಾರಿಗಳ ಆಯ್ಕೆ :
ಕೋಲಾರ ತಾಲೂಕು ಅಧ್ಯಕ್ಷ ಅನಿಲ್ ರೆಡ್ಡಿ, ಮಾಲೂರು ತಾಲೂಕು ಅಧ್ಯಕ್ಷ ರಾಮಸ್ವಾಮಿ ರೆಡ್ಡಿ, ಬಂಗಾರಪೇಟೆ ತಾಲೂಕು ಅಧ್ಯಕ್ಷ ತಿಪ್ಪ ರೆಡ್ಡಿ, ಕೆಜಿಎಫ್ ತಾಲೂಕು ಅಧ್ಯಕ್ಷ ಪ್ರಸನ್ನ ರೆಡ್ಡಿ, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ನರಸಿಂಹ ರೆಡ್ಡಿ ಆಯ್ಕೆಯಾದರು.
ಸುದ್ದಿಗೋಷ್ಠಿಯಲ್ಲಿ ರೆಡ್ಡಿ ಜನಸಂಘದ ರಾಜ್ಯ ನಿರ್ದೇಶಕ ರವೀಂದ್ರರೆಡ್ಡಿ, ಸಮುದಾಯದ ಮುಖಂಡರಾದ ಶಾಂತ ರಾಜ್, ಸುರೇಶ್, ರಾಜರೆಡ್ಡಿ,ಶಾಂತಮ್ಮ, ನಡುಪಲ್ಲಿ ರಾಘವೇಂದ್ರ ಇದ್ದರು.







